ಬೆಂಗಳೂರು: ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳೇ ತುಂಬಿ ಹೋಗಿರುವುದರಿಂದ ಬೆಂಗಳೂರನ್ನು ಗುಂಡಿಯೂರು ಎಂದು ಕರೆಯುವಂತಾಗಿದೆ ಎಂದು ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಈ ವಿಷಯದ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ಹೆಚ್‌ಡಿಕೆ , ನಾಡಪ್ರಭು ಕೆಂಪೇಗೌಡರರು ಕಟ್ಟಿದ ಹೆಮ್ಮೆಯ ಬೆಂಗಳೂರಿನ ನಗರದ ಪ್ರತಿಷ್ಠೆಗೆ ತುಂಬಾ ಆಳವಾಗಿ ಪೆಟ್ಟು ಬಿದ್ದಿದೆ. ಗ್ರೇಟರ್ ಬೆಂಗಳೂರು ಈಗ ಗುಂಡಿಯೂರಾಗಿ ಕುಖ್ಯಾತಿ ಪಡೆದಿರುವುದು ಬೇಸರ ವ್ಯಕ್ತಪಡಿಸುವ ವಿಷಯವಾಗಿದೆ ಎಂದು ಹೇಳಿದರು.ಇದನ್ನೂ ಓದಿ: ಉತ್ತರಾಖಂಡ: ಭಾರಿ ಮಳೆಯಿಂದ ಕಟ್ಟಡಗಳ ಕುಸಿತ; ಕನಿಷ್ಠ 12 ಜನ ನಾಪತ್ತೆ..!
ಅಚ್ಚುಕಟ್ಟಾದ ಬೆಂಗಳೂರು ಈಗ ಗುಂಡಿಯೂರು ಎಂದು ಕುಖ್ಯಾತಿ ಪಡೆಯಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅಧ್ಯಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ ಎಂದು ಸರ್ಕಾರವನ್ನು ಪ್ರಶ್ನಿಸಿದರು.
ಬೆಂಗಳೂರಿನ ಆಡಳಿತ ನಡೆಸುವುದರಲ್ಲಿ ವೈಫಲ್ಯ ಎದುರಾಗಿದೆ. ಜೊತೆಗೆ ಬೆಂಗಳೂರನ್ನು ಗುಂಡಿಯೂರು ಎಂದು ಉದ್ಯಮಿಗಳು ತೆಗಳಿರುವುದರಲ್ಲಿ ಆಶ್ಚರ್ಯವಿಲ್ಲ. ಅದೇ ರೀತಿಯಾಗಿ ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ.ಇದನ್ನೂ ಓದಿ: ರಾಹುಲ್ ಗಾಂಧಿ ಆರೋಪಗಳು ಆಧಾರರಹಿತ; ಮತ ಅಳಿಸಲು ಸಾಧ್ಯವಿಲ್ಲ - ಚುನಾವಣಾ ಆಯೋಗ
ಉದ್ಯಮಿಗಳು ಸರ್ಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು. ಈ ಸರ್ಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ.
ತೆರಿಗೆ ಹಾಕುವುದರಲ್ಲಿ ಸರ್ಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ ಉಂಟಾಗಿದೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ! ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರ್ಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕು ಅಷ್ಟೇ ಎಂದು ಸರ್ಕಾರವನ್ನು ಪ್ರಶ್ನಿಸಿದರು.ಇದನ್ನೂ ಓದಿ: ಉಗ್ರ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ; ಆಪರೇಷನ್ ಸಿಂಧೂರ್ ನಡೆಸಿದ ಭಾರತದ ವಿರುದ್ದ ಸೇಡನ್ನು ತೀರಿಸಿಕೊಳ್ಳುತ್ತೇವೆ; ಕಾರಣ ಹೀಗಿದೆ
ಕಂಪನಿಗಳು ರಾಜ್ಯ ಸರ್ಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ. ಭಂಡ ಸರ್ಕಾರಕ್ಕೆ ಇದೆಲ್ಲಾ ಎಲ್ಲಿ ತಾನೇ ಅರ್ಥವಾಗಬೇಕು. ಈ ಸರ್ಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ.ಇದನ್ನೂ ಓದಿ: ಇಸ್ರೇಲ್ ದಾಳಿಯ ಬೆನ್ನಲ್ಲೇ ಪಾಕಿಸ್ತಾನ-ಸೌದಿ ರಕ್ಷಣಾ ಒಪ್ಪಂದಕ್ಕೆ ಸಹಿ..ಆಕ್ರಮಣಕ್ಕೆ ಒಗ್ಗಟ್ಟಿನ ಪ್ರತಿರೋಧ!
ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರ್ಕಾರಕ್ಕೆ ಪಾಠ ಕಲಿಸುತ್ತೇವೆ. ನಿಮ್ಮ ಜತೆ ನಾವು, ಇಡೀ ಕರ್ನಾಟಕದ ಜನತೆ ಇದ್ದೇವೆ. ಹೋಗುತ್ತೇವೆ ಎನ್ನುವ ಮಾತನ್ನು ಮನಸ್ಸಿನಿಂದ ತೆಗೆದುಬಿಡಿ. ನಾವೆಲ್ಲರೂ ಸೇರಿ ಬೆಂಗಳೂರು ನಗರವನ್ನು ಬದಲಿಸೋಣ. We will Make Bengaluru Great Again ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.C J Enterprise Women's Kanjivaram Art Silk Saree Soft Banarasi Style Sari With Blouse Piece For Wedding (Pari122-51)