ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿತ್ತು. ಈ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಇಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಈ ಅರ್ಜಿ ಕೈಗೆತ್ತಿಕೊಳ್ಳಲಿದೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರ ಆಯ್ಕೆಯನ್ನು ವಿರೋಧಿಸಿ ಪ್ರತಾಪ್ ಸಿಂಹ ಅವರು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಪೀಠವು ಈ ಅರ್ಜಿಯನ್ನು ವಜಾಗೊಳಿಸಿತ್ತು.PALAY® Straw Hat Sun Hats for Women,Wide Brim Cap Beach Hat for Women Stylish UV Protection Cap,Summer Packable Travel Sun Visor Hat - UPF 50+
ದಸರಾ ಉದ್ಘಾಟಕರ ಆಯ್ಕೆಯಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಶುಕ್ರವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ಸೆಪ್ಟೆಂಬರ್ 22 ರಂದು ನವರಾತ್ರಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿರುವ ಕಾರಣ, ತುರ್ತಾಗಿ ವಿಚಾರಣೆ ನಡೆಸುವಂತೆ ಅರ್ಜಿದಾರರ ಪರ ವಕೀಲರು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠದ ಮುಂದೆ ಮನವಿ ಮಾಡಿದರು.Also Read: ವಿಶ್ವದ ಅತ್ಯಂತ ಅಪಾಯಕಾರಿ ದೇಶಗಳ ಮಾಹಿತಿ ಇಲ್ಲಿದೆ: ಭಾರತ ಮತ್ತು ಪಾಕಿಸ್ತಾನದ ಸ್ಥಾನ ಎಷ್ಟು?
ಬಾನು ಮುಷ್ತಾಕ್ ಅವರು ಈ ಹಿಂದೆ ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡಿದ್ದರಿಂದ, ಅವರ ಭಾಗವಹಿಸುವಿಕೆ ಜನರ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ. ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.