Skip to main content
ವಿಡಿಯೋ
1/2
politics

ಇವಿಎಂ ನಿಷೇಧಿಸಿ ಬ್ಯಾಲೆಟ್ ಬಳಸಬೇಕು: ಡಿ.ಕೆ.ಶಿವಕುಮಾರ್‌..

By Vinutha U
ಇವಿಎಂ ನಿಷೇಧಿಸಿ ಬ್ಯಾಲೆಟ್ ಬಳಸಬೇಕು: ಡಿ.ಕೆ.ಶಿವಕುಮಾರ್‌..

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಕಾನೂನಿನಲ್ಲಿ ಈಗಾಗಲೇ ಅವಕಾಶವಿರುವಾಗ ಈ ವಿಷಯವನ್ನು ಮತ್ತೆ ಚರ್ಚಿಸುವ ಅಗತ್ಯವಿಲ್ಲ ಎಂದು ಕೆಲವರು ಪ್ರಶ್ನಿಸಿದ್ದಾರೆ. ಮೊದಲು ವಾರ್ಡ್ ಮರುವಿಂಗಡಣೆ ಪೂರ್ಣಗೊಳಿಸಿ, ನಂತರ ಚುನಾವಣಾ ಆಯೋಗಕ್ಕೆ ಸೂಕ್ತ ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರು (ಸೆ.19): ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪತ್ರ ಬಳಕೆಗೆ ಸುಗ್ರೀವಾಜ್ಞೆ ಹೊರಡಿಸುವ ಅಗತ್ಯವಿಲ್ಲ ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಿದೆ ಎಂದು ತಿಳಿದುಬಂದಿದೆ. ಸೆ.4ರ ಸಂಪುಟ ಸಭೆಯ ನಿರ್ಣಯದಂತೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ), ಪಂಚಾಯತ್‌ಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶನಿವಾರ ಶಿಫಾರಸು ಕಳುಹಿಸಲಾಗಿದೆ.

ಇದಕ್ಕೆ ಪೂರಕವಾಗಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯಿದೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯಿದೆ-2024, ಮತ್ತು ಕರ್ನಾಟಕ ಮುನ್ಸಿಪಾಲಿಟಿಗಳ ಕಾಯಿದೆ ಸೇರಿದಂತೆ ಮೂರು ಕಾಯಿದೆಗಳಿಗೆ ತಿದ್ದುಪಡಿ ತರುವ ಚಿಂತನೆ ಸರ್ಕಾರದ್ದಾಗಿತ್ತು.ಆದರೆ, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್ ಅಥವಾ ಇವಿಎಂ ಮೂಲಕ ನಡೆಸುವುದು ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟಿದೆ. ಆದ್ದರಿಂದ, ರಾಜ್ಯ ಸರ್ಕಾರದ ಶಿಫಾರಸಿನಂತೆ ಚುನಾವಣಾ ಆಯೋಗ ಕಾರ್ಯನಿರ್ವಹಿಸಬೇಕಾಗುತ್ತದೆ.JM LOOKS Fancy Pointed Toe Sandals: Stylish Stiletto Heels with Ankle Strap, Comfortable for Women & Girls

 

ಈ ಕಾರಣಕ್ಕೆ ಸುಗ್ರೀವಾಜ್ಞೆಯ ಅಗತ್ಯವಿಲ್ಲ ಎಂದು ಸಂಪುಟದಲ್ಲಿ ಚರ್ಚಿಸಲಾಗಿದೆ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್, ಸುಗ್ರೀವಾಜ್ಞೆಯ ಅಗತ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಹೇಳಿದರು. ಆದರೂ, ಕಾನೂನು ತಜ್ಞರೊಂದಿಗೆ ಮತ್ತೊಮ್ಮೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಸೆ.11ರಂದು ನಡೆಯಲಿರುವ ಸಂಪುಟ ಸಭೆಯಲ್ಲಿ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಬಂಧಿಸಿದಂತೆ ಮೂರು ಕಾಯಿದೆಗಳಿಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ಸಿದ್ಧತೆ ನಡೆಸಿದೆ.'ದಿ ಬಾಸ್ಟರ್ಡ್ ಆಫ್ ಬಾಲಿವುಡ್' ಪ್ರೀಮಿಯರ್ ನಲ್ಲಿ ಆರ್ಯನ್ ಖಾನ್-ಬಾಬಿ ಡಿಯೋಲ್ ಬಾಂಧವ್ಯ ನೋಡಿ ಎಲ್ಲರೂ ಶಾಕ್!

 

ಸೆ.4ರ ನಿರ್ಣಯದಂತೆ, ಜಿಬಿಎ, ಪಂಚಾಯತ್‌ಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಲು ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲಾಗಿದೆ. ಈ ತಿದ್ದುಪಡಿಗಳ ಕುರಿತು ಸೆ.11ರ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಕಾನೂನಿನಲ್ಲಿ ಈಗಾಗಲೇ ಅವಕಾಶವಿರುವಾಗ ಈ ವಿಷಯವನ್ನು ಮತ್ತೆ ಚರ್ಚಿಸುವ ಅಗತ್ಯವಿಲ್ಲ ಎಂದು ಕೆಲವರು ಪ್ರಶ್ನಿಸಿದ್ದಾರೆ. ಮೊದಲು ವಾರ್ಡ್ ಮರುವಿಂಗಡಣೆ ಪೂರ್ಣಗೊಳಿಸಿ, ನಂತರ ಚುನಾವಣಾ ಆಯೋಗಕ್ಕೆ ಸೂಕ್ತ ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.