Skip to main content
ವಿಡಿಯೋ
1/2
metro

BWSSB - ತುರ್ತು ಕಾಮಗಾರಿಗೆ ಕಾವೇರಿ ನೀರಿನ ಸರಬರಾಜು ಎರಡು ದಿನದ ಮಟ್ಟಿಗೆ ವ್ಯತ್ಯಯ

By Shravanthi R
BWSSB - ತುರ್ತು ಕಾಮಗಾರಿಗೆ ಕಾವೇರಿ ನೀರಿನ ಸರಬರಾಜು ಎರಡು ದಿನದ ಮಟ್ಟಿಗೆ ವ್ಯತ್ಯಯ

ಈ ಕಾಮಗಾರಿಯ ಹಿನ್ನೆಲೆಯಲ್ಲಿ, ನಗರದ ಕೆಲವು ಭಾಗಗಳಲ್ಲಿ ಕಾವೇರಿ ನೀರಿನ ಸರಬರಾಜು ವ್ಯತ್ಯಯವಾಗಲಿದೆ ಎಂದು ತಿಳಿಸಲಾಗಿದೆ. ನಗರದ ವಿಜಯನಗರ, ಬನವಾಸಿ ರಸ್ತೆ, ಕೋರಮಂಗಲ, ಗಾಂಧಿನಗರ ಸುತ್ತಮುತ್ತಲಿನ ಪ್ರದೇಶಗಳು, ಬಿ.ಡಿ.ಎ. ಕಾಂಪ್ಲೆಕ್ಸ್ ಸುತ್ತಮುತ್ತ ಹಾಗೂ ಇತರ ಹತ್ತಿರದ ಬಡಾವಣೆಗಳು ನೀರಿನ ಸರಬರಾಜು ವ್ಯತ್ಯಯವಾಗುವ ಪ್ರದೇಶಗಳು ಎಂದು ಹೇಳಲಾಗಿದೆ.

ಬೆಂಗಳೂರು: ನಗರದಲ್ಲಿ ಕಾವೇರಿ ನೀರು ಸರಬರಾಜು ಕಾಮಗಾರಿ ಬಿರುಸಾಗಿ ಸಾಗಿದೆ. ಈ ಕಾರಣ, ಇನ್ನೆರೆಡು ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.  ಇಂದಿನಿಂದ ಎರಡು ದಿನಗಳ ಕಾಲ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿನ ಜನರು ಈ ಕುರಿತು ಸಹಕರಿಸಬೇಕೆಂದು ಮಂಡಳಿಯು ಮನವಿ ಮಾಡಿಕೊಂಡಿದೆ ಎನ್ನಲಾಗಿದೆ.

ಕಾವೇರಿ ನೀರಿನ ಪೈಪ್ ಲೈನ್ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನಲೆ, 2 ದಿನಗಳ ಕಾಲ ನೀರಿನ ಸರಬರಾಜು ವ್ಯತ್ಯಯವಾಗಲಿದೆ. ಈ ಸಂಬಂಧ ಬೆಂಗಳೂರು ನೀರಿನ ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿ.ಡಬ್ಲ್ಯೂ.ಎಸ್.ಎಸ್.ಬಿ) ಪತ್ರಿಕಾ ಪ್ರಕಟಣೆ ಹೊರಡಿಸಿದೆ. BWSSB  ವತಿಯಿಂದ ನಗರದ ನಾಗರಬಾವಿ ಬಿ.ಡಿ.ಎ. ಕಾಂಪ್ಲೆಕ್ಸ್ ಪ್ರದೇಶದ 600 ಮಿಮೀ ವ್ಯಾಸದ ಮುಖ್ಯ ಕಾವೇರಿ ನೀರಿನ ಪೈಪ್‌ಲೈನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. Samsung Galaxy M36 5G (Orange Haze, 6 GB RAM, 128 GB Storage)| Circle to Search| Google Gemini| Corning Gorilla Glass Victus+| 7.7mm Slim| AI Enhanced 50 MP OIS Triple Camera| Unmatched Nightography

ಈ ಕಾಮಗಾರಿಯ ಹಿನ್ನೆಲೆಯಲ್ಲಿ, ನಗರದ ಕೆಲವು ಭಾಗಗಳಲ್ಲಿ ಕಾವೇರಿ ನೀರಿನ ಸರಬರಾಜು ವ್ಯತ್ಯಯವಾಗಲಿದೆ ಎಂದು ತಿಳಿಸಲಾಗಿದೆ. ನಗರದ ವಿಜಯನಗರ, ಬನವಾಸಿ ರಸ್ತೆ, ಕೋರಮಂಗಲ, ಗಾಂಧಿನಗರ ಸುತ್ತಮುತ್ತಲಿನ ಪ್ರದೇಶಗಳು, ಬಿ.ಡಿ.ಎ. ಕಾಂಪ್ಲೆಕ್ಸ್ ಸುತ್ತಮುತ್ತ ಹಾಗೂ ಇತರ ಹತ್ತಿರದ ಬಡಾವಣೆಗಳು ನೀರಿನ ಸರಬರಾಜು ವ್ಯತ್ಯಯವಾಗುವ ಪ್ರದೇಶಗಳು ಎಂದು ಹೇಳಲಾಗಿದೆ. ತುರ್ತು ಕಾರಣದಿಂದ ನಡೆಯುತ್ತಿರುವ ಕಾಮಗಾರಿಯಲ್ಲಿ ಸಾರ್ವಜನಿಕರು ಸಹಕಾರ ನೀಡುವಂತೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿ ಪತ್ರಿಕಾ ಪ್ರಕಟಣೆಯ ಮೂಲಕ ಬಿ.ಡಬ್ಲ್ಯೂ.ಎಸ್.ಎಸ್.ಬಿ ವಿನಂತಿಸಿದೆ ಎನ್ನಲಾಗಿದೆ. ಇದನ್ನೂ ಓದಿ: ಯೆಲ್ಲೋ ಲೈನ್ ಮೆಟ್ರೋ ಬಳಿ ಪ್ರಯಾಣಿಕರಿಗೆ ನೂರೆಂಟು ತೊಂದರೆ..ಪಾರ್ಕಿಂಗ್‌ಗೂ ಸ್ಥಳವಿಲ್ಲದೆ ಪರದಾಟ!