ರಾಜ್ಯದಲ್ಲಿ ಜಾತಿ ಗಣತಿ ವಿಚಾರದಲ್ಲಿ ಕ್ರಿಶ್ಚಿಯನ್ ಜಾತಿಗಳ ಕುರಿತ ವಿವಾದವು ತೀವ್ರ ಕಗ್ಗಂಟಾಗಿ ಪರಿಣಮಿಸಿದೆ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವೇಳೆ ಕ್ರಿಶ್ಚಿಯನ್ ಧರ್ಮಕ್ಕೆ ಸಂಬಂಧಿಸಿದ 46 ಜಾತಿಗಳ ಪಟ್ಟಿಯನ್ನು ಕೈಬಿಡಬೇಕೇ ಅಥವಾ ಮುಂದುವರಿಸಬೇಕೇ ಎಂಬ ಬಗ್ಗೆ ಸರ್ಕಾರ ಮತ್ತು ಹಿಂದುಳಿದ ವರ್ಗಗಳ ಆಯೋಗದ ನಡುವೆ ಒಮ್ಮತ ಮೂಡಿಲ್ಲ. ಇದರ ಪರಿಣಾಮವಾಗಿ, ಸಮೀಕ್ಷಾ ನಮೂನೆಯಲ್ಲಿ ವಿವಾದಿತ ಕ್ರಿಶ್ಚಿಯನ್ ಜಾತಿಗಳ ಪಟ್ಟಿಯು ಯಥಾಸ್ಥಿತಿಯಲ್ಲಿ ಮುಂದುವರೆಯುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಈ 46 ಜಾತಿಗಳನ್ನು ಕೈಬಿಡಲು ಸೂಚಿಸಿದ್ದರೂ, ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್ ಅವರು ಇದಕ್ಕೆ ಸಮ್ಮತಿಸಿಲ್ಲ. ಈ ಪಟ್ಟಿ ಹಿಂದಿನ ಕಾಂತರಾಜ ಆಯೋಗದಲ್ಲೂ ಇತ್ತು. ಇದು ನಾವು ಸೇರಿಸಿದ್ದಲ್ಲ. ಹೀಗಾಗಿ ನಾವು ಕೈಬಿಡಲು ಬರುವುದಿಲ್ಲ ಎಂದು ಮಧುಸೂದನ್ ನಾಯ್ಕ್ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.
ಸಮೀಕ್ಷಾ ನಮೂನೆಯಲ್ಲಿ ಈ 46 ಕ್ರಿಶ್ಚಿಯನ್ ಜಾತಿಗಳ ಪಟ್ಟಿ ಇರಲಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಗೊಂದಲ ಮುಂದುವರಿದಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ವಿಷಯದ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. GRECIILOOKS Shirts for Women – Korean Style Short Sleeve Oversized Button Down | Plus Size Workwear Top for Office & Casual Wear (Available in Plus Size)
ಏನಿದು ವಿವಾದ? ಸೆಪ್ಟೆಂಬರ್ 22 ರಿಂದ ಆರಂಭವಾಗಲಿರುವ ಸಮೀಕ್ಷೆಯಲ್ಲಿ ಸಾರ್ವಜನಿಕರು ತಮ್ಮ ಜಾತಿ ನಮೂದಿಸಲು ಅನುಕೂಲವಾಗುವಂತೆ ಹಿಂದುಳಿದ ವರ್ಗಗಳ ಆಯೋಗವು ಜಾತಿ, ಉಪಜಾತಿ ಹಾಗೂ ಧರ್ಮಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ರಾಜ್ಯ ರಾಜಕೀಯಕ್ಕೆ ಕುಮಾರಸ್ವಾಮಿ ರೀ ಎಂಟ್ರಿ... ‘ಟಾರ್ಗೆಟ್ 80’ ಮೂಲಕ ಜೆಡಿಎಸ್ ಪುನರುಜ್ಜೀವನ ಮಿಷನ್!
46 ಜಾತಿಗಳ ಪಟ್ಟಿ ಹೀಗಿದೆ:
ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್, ವಿಶ್ವಕರ್ಮ ಕ್ರಿಶ್ಚಿಯನ್, ಈಡಿಗ ಕ್ರಿಶ್ಚಿಯನ್, ವ್ಯಾಸ ಬ್ರಾಹ್ಮಣ ಕ್ರಿಶ್ಚಿಯನ್, ವಾಲ್ಮೀಕಿ ಕ್ರಿಶ್ಚಿಯನ್, ಆದಿ ಆಂಧ್ರ ಕ್ರಿಶ್ಚಿಯನ್, ಆದಿ ದ್ರಾವಿಡ ಕ್ರಿಶ್ಚಿಯನ್, ಆದಿ ಕರ್ನಾಟಕ ಕ್ರಿಶ್ಚಿಯನ್, ಅಕ್ಕಸಾಲಿಗ ಕ್ರಿಶ್ಚಿಯನ್, ಬಣಜಿಗ ಕ್ರಿಶ್ಚಿಯನ್, ಬಂಜಾರ ಕ್ರಿಶ್ಚಿಯನ್, ಬಾರಿಕಾರ್ ಕ್ರಿಶ್ಚಿಯನ್, ಬೆಸ್ತರು ಕ್ರಿಶ್ಚಿಯನ್, ಬಿಲ್ಲವ ಕ್ರಿಶ್ಚಿಯನ್, ಬುಡುಗ ಜಂಗಮ ಕ್ರಿಶ್ಚಿಯನ್, ಚರೋಡಿ ಕ್ರಿಶ್ಚಿಯನ್, ದೇವಾಂಗ ಕ್ರಿಶ್ಚಿಯನ್, ಗೊಲ್ಲ ಕ್ರಿಶ್ಚಿಯನ್, ಗೌಡಿ ಕ್ರಿಶ್ಚಿಯನ್, ಹೊಲೆಯ ಕ್ರಿಶ್ಚಿಯನ್, ಜಲಗಾರ ಕ್ರಿಶ್ಚಿಯನ್, ಜಾಡರ್ ಕ್ರಿಶ್ಚಿಯನ್, ಜಂಗಮ ಕ್ರಿಶ್ಚಿಯನ್, ಕಮ್ಮ ಕ್ರಿಶ್ಚಿಯನ್, ಕಮ್ಮ ನಾಯ್ಡು ಕ್ರಿಶ್ಚಿಯನ್, ಲಮಾಣಿ ಕ್ರಿಶ್ಚಿಯನ್, ಲಂಬಾಣಿ ಕ್ರಿಶ್ಚಿಯನ್, ಮಾದಿಗ ಕ್ರಿಶ್ಚಿಯನ್, ಮಹಾರ್ ಕ್ರಿಶ್ಚಿಯನ್, ಮಾಲ ಕ್ರಿಶ್ಚಿಯನ್, ಮಾಂಗ ಕ್ರಿಶ್ಚಿಯನ್, ಮೊದಲಿಯಾರ್ ಕ್ರಿಶ್ಚಿಯನ್, ನಾಡರ್ ಕ್ರಿಶ್ಚಿಯನ್, ನೇಕಾರ ಕ್ರಿಶ್ಚಿಯನ್, ಪಡಯಾಚಿ ಕ್ರಿಶ್ಚಿಯನ್, ಪರಯ ಕ್ರಿಶ್ಚಿಯನ್, ರೆಡ್ಡಿ ಕ್ರಿಶ್ಚಿಯನ್, ಸೆಟ್ಟಿ ಬಲಿಜ ಕ್ರಿಶ್ಚಿಯನ್, ಸಿದ್ಧಿ ಕ್ರಿಶ್ಚಿಯನ್, ಸುದ್ರಿ ಕ್ರಿಶ್ಚಿಯನ್, ತಿಗಳ/ಥಿಗಳ ಕ್ರಿಶ್ಚಿಯನ್, ತುಳು ಕ್ರಿಶ್ಚಿಯನ್, ವೈಶ್ಯ/ಶೆಟ್ರು ಕ್ರಿಶ್ಚಿಯನ್, ವೊಡ್ಡ ಕ್ರಿಶ್ಚಿಯನ್.