ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆ ಜಾತಿ ಗಣತಿ ನಡೆಸಲು ಆ.13,ರಂದು ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಸೂಚಿಸಿ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ, ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕರೂ ಆದ ಹಿರಿಯ ವಕೀಲ ಕೆ.ಎನ್. ಸುಬ್ಬಾರೆಡ್ಡಿ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.ಜಾತಿ ಗಣತಿ ಪ್ರಶ್ನಿಸಿ ರಾಜ್ಯ ಸರ್ಕಾರದಿಂದ ಹೈ ಕೋರ್ಟ್‌ಗೆ ಅರ್ಜಿ ಸಲ್ಲಿಕೆ..!!!
ಈ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಅನು ಶಿವರಾಮನ್ ನೇತೃತ್ವದ ವಿಭಾಗೀಯ ಪೀಠವು ಶುಕ್ರವಾರ ಸೆಪ್ಟೆಂಬರ್ 19, ನಡೆಸಿತು. ಕರ್ನಾಟಕ ಹೈಕೋರ್ಟ್ ಈ ಸಂಬಂಧ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಕೇಂದ್ರ ಜಾತಿ ಗಣತಿ ಪ್ರಾಧಿಕಾರ ಮತ್ತು ಗಣತಿ ರಿಜಿಸ್ಟ್ರಾರ್ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.Naixa Women's Red Viscose Silk Embroidered Straight Kurta with Pant and Dupatta Sets (Available in Plus Size) (NX-546)
ನ್ಯಾಯಪೀಠವು ಅರ್ಜಿಗಳ ಕುರಿತು ಕೆಲಕಾಲ ವಾದ ಆಲಿಸಿದ ಬಳಿಕ, ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು. ಇದೇ ವೇಳೆ, ಹಾವೇರಿ ಜಿಲ್ಲೆಯ ಹಿರೇಕೆರೂರಿನ ಲಿಂಗರಾಜ ಚಪ್ಪರದಳ್ಳಿ ಸಲ್ಲಿಸಿದ್ದ ಮತ್ತೊಂದು ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರ ಪೀಠವು ಶುಕ್ರವಾರ ವಿಚಾರಣೆಗೆ ತೆಗೆದುಕೊಂಡಿತು.
ಹಿರಿಯ ವಕೀಲ ಗಂಗಾಧರ ಗುರುಮಠ ಅವರ ವಾದವನ್ನು ಆಲಿಸಿದ ನ್ಯಾಯಪೀಠವು, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಹಿಂದುಳಿದ ವರ್ಗಗಳ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಸೆಪ್ಟೆಂಬರ್ 22, ಸೋಮವಾರ ರಂದು ಮುಂದೂಡಿತು. ರಾಜ್ಯದ ಅಡ್ವೋಕೇಟ್ ಜನರಲ್ ಲಭ್ಯವಿಲ್ಲದ ಕಾರಣ, ಸಮೀಕ್ಷೆಗೆ ತಡೆಯಾಜ್ಞೆ ನೀಡಬೇಕೆಂಬ ಅರ್ಜಿದಾರರ ಮಧ್ಯಂತರ ಮನವಿಯನ್ನು ಸಹ ಸೋಮವಾರವೇ ವಿಚಾರಣೆಗೆ ತೆಗೆದುಕೊಳ್ಳುವುದಾಗಿ ನ್ಯಾಯಾಲಯ ತಿಳಿಸಿತು.ಧರ್ಮಸ್ಥಳ ಪ್ರಕರಣದಲ್ಲಿ ಹೊಸ ತಿರುವು...SIT ತನಿಖೆ ಮಧ್ಯೆ ಹೈಕೋರ್ಟ್ ನೋಟಿಸ್!
ಅರ್ಜಿದಾರರ ಪೈಕಿ ಒಬ್ಬರಾದ ಉದಯ್‌ಶಂಕರ್ ಪರ ವಕೀಲ ಪ್ರಭುಲಿಂಗ ನಾವದಗಿ, ಸಮೀಕ್ಷೆ ಈಗಾಗಲೇ ಆರಂಭವಾಗಿದೆ ಎಂದು ಆಯೋಗ ಹೇಳಬಾರದು ಎಂದು ವಾದಿಸಿದರು. ಒಮ್ಮೆ ಸಮೀಕ್ಷೆ ಆರಂಭವಾದರೆ, ಆಯೋಗವನ್ನು ಹಿಂದಕ್ಕೆ ಸರಿಸುವುದು ಕಷ್ಟ ಎಂದು ಒತ್ತಿ ಹೇಳಿದರು. ಆಯೋಗದ ಪರ ವಕೀಲರಾದ ಪ್ರೊ. ರವಿವರ್ಮ ಕುಮಾರ್, ಈಗಾಗಲೇ ಎರಡು ಕೋಟಿ ಕುಟುಂಬಗಳಿಗೆ ಸಮೀಕ್ಷೆಯ ಪ್ರತಿಗಳನ್ನು ಪೂರೈಸಲಾಗಿದೆ ಎಂದು ಮಾಹಿತಿ ನೀಡಿದರು.
ಆದರೆ, ಸುಬ್ಬಾರೆಡ್ಡಿ ಅವರ ಪರ ವಕೀಲರು, ಸಮೀಕ್ಷೆ ಸೆಪ್ಟೆಂಬರ್ 22ರಿಂದ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ ಎಂದು ವಾದಿಸಿ, ನ್ಯಾಯಾಲಯವು ಅರ್ಜಿಯ ವಿಚಾರಣೆ ಮುಗಿಯುವವರೆಗೆ ಸಮೀಕ್ಷೆಯನ್ನು ಮುಂದುವರಿಸದಂತೆ ಆಯೋಗಕ್ಕೆ ಸೂಚಿಸಬೇಕು ಎಂದು ಕೋರಿದರು.ಧರ್ಮಸ್ಥಳ ತಲೆಬುರುಡೆ ಪ್ರಕರಣ...ದೂರುದಾರನ ಜಾಮೀನು ಅರ್ಜಿಗೆ ಸೆಪ್ಟೆಂಬರ್ 16ರಂದು ತೀರ್ಪು!