ಇಂದು ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆಯಿದೆ. ಮೋಡ ಕವಿದ ವಾತಾವರಣವಿದ್ದು, ವಾಯುಗುಣ ಮಟ್ಟದಲ್ಲಿ ಸುಧಾರಣೆ ಕಂಡಿದೆ ಎನ್ನಲಾಗಿದೆ. ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇನ್ನೂ ಮುಂದುವರೆದು ಮೂರು ದಿನಗಳ ಕಾಲ ಸೆ. 23 ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಕರ್ನಾಟಕ ವಿಪತ್ತು ನಿರ್ವಹಣಾ ಕೇಂದ್ರವು ನೆನ್ನೆಯವರೆಗೂ ದಾಖಲಾದ ಮಳೆಯ ವಿವರ ತಿಳಿಸಿದೆ. ಇದನ್ನೂ ಓದಿ: ಗುಡ್‌ನ್ಯೂಸ್....ನಂದಿನಿ ಹಾಲು ಉತ್ಪನ್ನಗಳ ಬೆಲೆ 4 ರೂ. ಇಳಿಕೆಯಾಗುತ್ತೆ! ಯಾವಾಗಿಂದ..?
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದು, ಕಳೆದ ಮೂರು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲೂ ಹಳ್ಳ ಕೊಳ್ಳಗಳು ತುಂಬಿಕೊಂಡಿದೆ. ಮಳೆಗೆ ಉಕ್ಕಿ ಹರಿದ ಹಳ್ಳಗಳ ಪ್ರಭಾವ, ಜಮೀನುಗಳಿಗೆ ನೀರು ನುಗ್ಗಿ, ಬೆಳೆ ನಷ್ಟ ಉಂಟಾಗಿದೆ ಎಂದು ವರದಿ ತಿಳಿಸಿದೆ. ಇದರಿಂದಾಗಿ ಕೃಷಿ ಹಾಗೂ ಪ್ರವಾಸ ಕೈಗೊಳ್ಳುವವರಿಗೂ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಲಾಗಿದೆ. Noise Vortex Plus 1.46 AMOLED Display, AoD, BT Calling, Sleek Metal Finish, 7 Days Battery Life, All New OS with 100+ Watch Faces & Health Suite (Black)
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಹಾಗೂ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಈ ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಾಳಿ, ಗುಡುಗು ಸಹಿತ ಮಳೆಯಾಗಲಿದೆ ಎನ್ನಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ಭಾಗಗಳಲ್ಲಿ ಅಲರ್ಟ್ ನೀಡದಿದ್ದರೂ ಹೆಚ್ಚು ಮಳೆ ಸಾಧ್ಯತೆ, ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಈ ಬಗ್ಗೆ ತಿಳಿಸಲಾಗಿದೆ. ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲೆರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಸಮೀಕ್ಷೆಗೆ ಮುನ್ನ ಕ್ರಿಶ್ಚಿಯನ್ 46 ಜಾತಿಗಳನ್ನು ಕೈಬಿಡಲು ಸಿಗದ ಒಮ್ಮತ...ಮತ್ತೆ ವಿವಾದಕ್ಕೆ ಗುರಿ!