ಚನ್ನಗಿರಿ (ಸೆ.21): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಈ ಶೈಕ್ಷಣಿಕ ವರ್ಷದಲ್ಲಿ 800 ಕೆಪಿಎಸ್ ಶಾಲೆಗಳ ನಿರ್ಮಾಣ, 3,000 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ಕೈಗೊಂಡಿದೆ. ಒಳಮೀಸಲಾತಿ ಜಾರಿಯಾಗಿದ್ದು, ಮುಂದಿನ ಕೆಲವೇ ದಿನಗಳಲ್ಲಿ 18,000 ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಪಟ್ಟಣದ ಹೊರವಲಯದಲ್ಲಿರುವ ಶ್ರೀ ಮೌದ್ಗಲ್ ಆಂಜನೇಯಸ್ವಾಮಿ ಸಮುದಾಯ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆಯ ಅಂಗವಾಗಿ ಶಿಕ್ಷಕರ ದಿನಾಚರಣೆ ಮತ್ತು 4 ಕೋಟಿ ರು. ವೆಚ್ಚದ ಗುರುಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಇಂದಿನ ಪೀಳಿಗೆಗೆ ಒಳ್ಳೆಯ ಕೊಡುಗೆ ನೀಡಬೇಕಾದರೆ, ಗ್ರಾಮಗಳಲ್ಲಿ ದೇವಸ್ಥಾನದ ಗಂಟೆಗಳಿಗಿಂತ ಶಾಲೆಗಳ ಗಂಟೆಯ ಶಬ್ದವು ಮೊಳಗಬೇಕು.
ಉತ್ತಮ ಶಿಕ್ಷಣದ ಮೂಲಕ ಮಾತ್ರ ಸದೃಢ ರಾಷ್ಟ್ರವನ್ನು ಕಟ್ಟಲು ಸಾಧ್ಯ ಎಂದು ಅವರು ಒತ್ತಿ ಹೇಳಿದರು. 2023ರ ನವೆಂಬರ್ 1 ರಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಧೂಳು ಕೂತಿದ್ದ ಕಂಪ್ಯೂಟರ್‌ಗಳು ಮತ್ತು ಸ್ಮಾರ್ಟ್ ಕ್ಲಾಸ್‌ಗಳು ಮತ್ತೆ ಕಾರ್ಯಾರಂಭ ಮಾಡಿದ್ದು, ಬಡವರಿಗೂ ಗುಣಮಟ್ಟದ ಶಿಕ್ಷಣ ದೊರಕುತ್ತಿದೆ ಎಂದರು. JYESHTA Women's American Crepe Wrao Floral Printed Skirt with Ruffle Hem and Elastic Waistband Closure | Skirts for Woman
ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ, ನೀಟ್ ತರಬೇತಿ ಸರ್ಕಾರಿ ನೌಕರರಿಗೆ 6ನೇ ಮತ್ತು 7ನೇ ವೇತನ ಆಯೋಗದ ವೇತನ ನೀಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ಪ್ರನಾಳಿಕೆಯಂತೆ ಓಪಿಎಸ್ ಜಾರಿಗೆ ತಂದಿದ್ದಾರೆ ಎಂದರು. ಸರ್ಕಾರಿ ಕಾಲೇಜುಗಳಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ ಮತ್ತು ನೀಟ್ ತರಬೇತಿ ನೀಡಲಾಗುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಾದ್ಯಂತ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ಒದಗಿಸಲಾಗುವುದು ಎಂದರು. ಎಚ್ಚರ..ಎಚ್ಚರ..ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಅಟ್ಟಹಾಸ...19 ಸಾ*ವು!
ಶಾಸಕ ಬಸವರಾಜು ವಿ. ಶಿವಗಂಗಾ ಮಾತನಾಡಿ, ತಮ್ಮ ಕ್ಷೇತ್ರದಲ್ಲಿ ಶಿಕ್ಷಣ ಇಲಾಖೆಯಿಂದ 45 ಶಾಲಾ ಕೊಠಡಿಗಳು, 17 ಹೊಸ ಶಾಲಾ ಕಟ್ಟಡಗಳ ನಿರ್ಮಾಣ, ಶಾಸಕರ ಅನುದಾನದಿಂದ 85 ಕೊಠಡಿಗಳ ನಿರ್ಮಾಣ ಮಾಡಲಾಗಿದೆ. ಇನ್ನೂ 45 ಶಾಲಾ ಕೊಠಡಿಗಳ ನಿರ್ಮಾಣ ಬಾಕಿಯಿದ್ದು, ಇದಕ್ಕೆ ಶಿಕ್ಷಣ ಸಚಿವರು ಅನುದಾನ ನೀಡಬೇಕು ಎಂದು ಮನವಿ ಮಾಡಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆಯುವ ವಿದ್ಯಾರ್ಥಿಗಳಿಗೆ 1 ಲಕ್ಷ ರು. ನಗದು ಬಹುಮಾನ ಘೋಷಿಸಲಾಗಿದೆ. ಈ ಯೋಜನೆ ಪ್ರಸ್ತುತ ಶೈಕ್ಷಣಿಕ ವರ್ಷಕ್ಕೂ ಮುಂದುವರಿಯಲಿದೆ.
ಅತಿ ಹೆಚ್ಚು ಫಲಿತಾಂಶ ಪಡೆದ ಶಾಲೆಗಳಿಗೆ ಪ್ರಥಮ ಬಹುಮಾನವಾಗಿ 55,000 ರು., ದ್ವಿತೀಯ ಬಹುಮಾನವಾಗಿ 33,000 ರು., ಮತ್ತು ತೃತೀಯ ಬಹುಮಾನವಾಗಿ 11,000 ರು. ನೀಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೊಟ್ರೇಶ್, ಡಯಟ್‌ನ ಪ್ರಾಚಾರ್ಯೆ ಗೀತಾ, ತಹಶೀಲ್ದಾರ್ ಎನ್. ಜೆ. ನಾಗರಾಜ್, ತಾ.ಪಂ. ಕಾರ್ಯನಿರ್ವಾಣಾಧಿಕಾರಿ ಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಶಂಕರಪ್ಪ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಸ್ವಾಮಿ, ತಿಪ್ಪೇಶಪ್ಪ, ಜಯಪ್ರಕಾಶ್, ಗಣೇಶ್, ಉಮೇಶ್, ಶೋಭಾ, ಅಮಾನುಲ್ಲಾ, ನೇತ್ರಾವತಿ ಉಪಸ್ಥಿತರಿದ್ದರು.