Skip to main content
ವಿಡಿಯೋ
1/2
general

ಗುಂಡಿಗಳ ಮೇಲೆ ಸರ್ಕಾರದ ನಿಗಾ: ʻಜನರ ಕಷ್ಟ ನಿಮಗೆ ಕಾಣುತ್ತಿಲ್ಲವೇ?ʼ - ಸಿಎಂ ಸಿದ್ದರಾಮಯ್ಯ

By Shravanthi R
ಗುಂಡಿಗಳ ಮೇಲೆ ಸರ್ಕಾರದ ನಿಗಾ: ʻಜನರ ಕಷ್ಟ ನಿಮಗೆ ಕಾಣುತ್ತಿಲ್ಲವೇ?ʼ - ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಗರದಲ್ಲಿ ರಸ್ತೆಗಳ ದಾರುಣ ಸ್ಥಿತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಂಭೀರ ಪ್ರತಿಕ್ರಿಯೆ ನೀಡಿದ್ದಾರೆ. 8,000 ಗುಂಡಿಗಳನ್ನು ಒಂದು ತಿಂಗಳಲ್ಲಿ ಮುಚ್ಚುವ ಗಡುವು ನೀಡಿರುವ ಅವರು, ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. "ಜನರ ಕಷ್ಟ ನಿಮಗೆ ಕಾಣುತ್ತಿಲ್ಲವೇ?" ಎಂಬ ಪ್ರಶ್ನೆಯೊಂದಿಗೆ ಅವರು ಆಡಳಿತ ವ್ಯವಸ್ಥೆಯ ಜವಾಬ್ದಾರಿಯನ್ನು ನೆನೆಪಿಸಿದ್ದಾರೆ.

ಬೆಂಗಳೂರು - ನಗರದಲ್ಲಿ ರಸ್ತೆ ಸಂಚಾರ ಹಾಗೂ ಸುಧಾರಣೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಡುಸಾಗಿ ಪ್ರತಿಕ್ರಿಯಿಸಿದ್ದಾರೆ. ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಗರ ರಸ್ತೆ ಸಂಚಾರ ಹಾಗೂ ಗುಂಡಿ ಮುಚ್ಚುವಿಕೆ ಸಂಬಂಧಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಒಂದು ತಿಂಗಳೊಳಗೆ 8,000 ಗುಂಡಿಗಳನ್ನು ತೆರವುಗೊಳಿಸಬೇಕು. ನಿಗದಿತ ಸಮಯದಲ್ಲಿ ಸರಿಪಡಿಸದಾದಲ್ಲಿ ಕಠಿಣ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. 

ಬೆಂಗಳೂರಿನಲ್ಲಿ ರಸ್ತೆ ದುರಸ್ಥಿಗೆ ಸಂಬಂಧಿಸಿದ ಚರ್ಚೆಗಳು, ವಿಚಾರಗಳು ಸಾಕಷ್ಟು ಸದ್ದು ಮಾಡುತ್ತಿದೆ. ಇದಕ್ಕೆ ಇತ್ತೀಚೆಗೆ ಉದ್ಯಮ ಕ್ಷೇತ್ರದ ದಿಗ್ಗಜರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ನಗರ ಉಸ್ತುವಾರಿ ಸಚಿವ ಉಪಮುಖ್ಯಮಂತ್ರಿಗಳಾದ ಡಿ. ಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದರು. ಇದೀಗ ಸಂಚಾರ ಯೋಗ್ಯ ವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳಿಗೆ ಒಂದು ತಿಂಗಳ ಗಡುವು ನೀಡಿ ರಸ್ತೆ ನಿರ್ವಹಣೆ ಕಾರ್ಯಾಚರಣೆಗಳು, ಕಾಮಗಾರಿ ನಿರ್ಧಿಷ್ಟವಾಗಿ ಜರುಗಬೇಕೆಂದು ಸೂಚಿಸಿದ್ದಾರೆ ಎನ್ನಲಾಗಿದೆ. OnePlus 13R | Smarter with OnePlus AI | Lifetime Display Warranty (12GB RAM, 256GB Storage Nebula Noir)

ಈ ಸಂಬಂಧ, ಬೆಂಗಳೂರು ನಗರದಲ್ಲಿ ರಸ್ತೆಗಳ ದಾರುಣ ಸ್ಥಿತಿಯನ್ನು ಸರಿಪಡಿಸಲು ವಿಫಲರಾದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಈ ಮೂಲಕ ಆಡಳಿತ ವ್ಯವಸ್ಥೆಯ ಜವಾಬ್ದಾರಿಯನ್ನು ನೆನೆಪಿಸಿದ್ದಾರೆ. ಜನರ ಕಷ್ಟ ನಿಮಗೆ ಕಾಣುತ್ತಿಲ್ಲವೇ? ಯಾಕಿಷ್ಟು ಬೇಜವಾಬ್ದಾರಿ? ತುರ್ತು ಕ್ರಮಗಳನ್ನು ಕೈಗೊಂಡಿಲ್ಲ ಯಾಕೆಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು ಸಭೆಯಲ್ಲಿ ಪ್ರಸ್ತಾಪಿಸಲಾಗಿರುವ ಪ್ರಮುಖಾಂಶಗಳನ್ನು ಸಂಕ್ಷಿಪ್ತವಾಗಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಚಿನ್ನದ ಬೆಲೆ ಸ್ಥಿರತೆ ಕಂಡಿದೆ: ಹೂಡಿಕೆ ಏರುಮುಖವಾಗುವ ಸಾಧ್ಯತೆ!