ರಾಜ್ಯದ ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ʻಮತಗಳ್ಳತನʼ ನಡೆದಿದೆ ಎಂದ ಆರೋಪದ ಬೆನ್ನಲ್ಲೇ ರಾಜ್ಯ ಸರ್ಕಾರವು ಕ್ರಮ ಕೈಗೊಳ್ಳುವ ಹೆಜ್ಜೆ ಮುಂದಿಟ್ಟಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪುರಾವೆಗಳ ಜೊತೆಗೆ ಪ್ರಸ್ತಾಪ ಮಾಡಿದ ಈ ಮತಚೋರಿ ಪ್ರಕರಣಗಳ ಕುರಿತು ತನಿಖೆ ನಡೆಸಲು ಶನಿವಾರ (ಸೆ. 20) ವಿಶೇಷ ತನಿಖಾ ತಂಡವನ್ನು ನಿಯೋಜಿಸಲಾಗಿದೆ. ಸಿಐಡಿ ಘಟಕದ ಅಪರ ಪೋಲೀಸ್ ಮಹಾನಿರ್ದೇಶಕ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಐಪಿಎಸ್ ಅಧಿಕಾರಿಗಳಾದ ಸಿಸಿಡಿ, ಸಿಐಡಿ ಪೊಲೀಸ್ ಅಧೀಕ್ಷಕ ಸೈದುಲ್ ಅದಾವತ್, ಎಸ್‍ಇಡಿ ಸಿಐಡಿಯ ಪೊಲೀಸ್ ಅಧೀಕ್ಷಕಿ ಶುಭಾನ್ವಿತ ಸದಸ್ಯರನ್ನೊಳಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಸ್ಪಷ್ಟಪಡಿಸಿದ್ದು, ಸರ್ಕಾರ ಅಧೀನ ಕಾರ್ಯದರ್ಶಿ ಎಸ್.ಅಂಬಿಕಾ ಅವರು ಎಸ್‌ಐಟಿ ರಚನೆ ಬಗ್ಗೆ ಆದೇಶ ಹೊರಡಿಸಿದ್ದು, ಆಳಂದ ಕ್ಷೇತ್ರದಲ್ಲಿ ಆರು ಸಾವಿರಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಕೈಬಿಡಲಾಗಿತ್ತು ಎಂಬ ಆರೋಪ ಪ್ರಕರಣವನ್ನು ಪ್ರಮುಖವಾಗಿ ಪರಿಗಣಿಸಲಾಗಿದೆ. ಇಡೀಯ ರಾಜ್ಯ ವ್ಯಾಪ್ತಿಯಲ್ಲಿ ತನಿಖೆ ನಡೆಸುವ ಅಧಿಕಾರವನ್ನ ಎಸ್‌ಐಟಿಗೆ ನೀಡಲಾಗಿದೆ ಎಂದು ತಿಳಿಸಲಾಗಿದೆ. Pikkme OnePlus Nord (2020) Back Cover | D5 Tough Armor Bumper | 360 Protection Case | Ring Holder Stand Case for OnePlus Nord (2020) (Black)
2023 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಫಾರ್ಮ್ 7 ಮೂಲಕ ಮತದಾರರ ಹೆಸರುಗಳನ್ನು ತೆಗೆದುಹಾಕುವ ಹುನ್ನಾರ ನಡೆಸಲಾಗಿದೆ ಎಂದು ಲೋಕಸಭಾ ವಿರೋಧ ಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಚರ್ಚಿಸಿದ್ದರು. ಈ ಬಗ್ಗೆ ಚುನಾವಣಾ ಆಯೋಗ ಅವರ ಹೇಳಿಕೆಯನ್ನು ಆಧಾರರಹಿತವೆಂದು ತಿರಸ್ಕರಿಸಿದೆ. ಈ ಮಧ್ಯೆ ರಾಜ್ಯ ಸರ್ಕಾರದ ಈ ಕ್ರಮದಿಂದ ಸತ್ಯಾಂಶ ಬಯಲಿಗೆಳೆಯುವ ಹಿತಾಸಕ್ತಿಯು ಹೆಚ್ಚಾಗಿದೆ ಎನ್ನಲಾಗಿದೆ. ಈ ಎಲ್ಲಾ ಬೆಳವಣಿಗೆಗಳಿಂದ ರಾಜಕೀಯ ಪರಿವರ್ತನೆಗಳು ಉಂಟಾಗಲಿದೆಯಾ? ಕಾದು ನೋಡಬೇಕಿದೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ನವರಾತ್ರಿ ಸಂಭ್ರಮ: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 1ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಕಲರವ!