Skip to main content
ವಿಡಿಯೋ
1/2
politics

ತುಮಕೂರು ದಸರಾ 2025: ನಂದಿ ಧ್ವಜ ಪೂಜೆ ಮಾಡುವ ಮೂಲಕ ಉದ್ಘಾಟನೆ ಮಾಡಿದ ಗೃಹ ಸಚಿವ ಪರಮೇಶ್ವರ್..

By Vinutha U
ತುಮಕೂರು ದಸರಾ 2025: ನಂದಿ ಧ್ವಜ ಪೂಜೆ ಮಾಡುವ ಮೂಲಕ ಉದ್ಘಾಟನೆ ಮಾಡಿದ ಗೃಹ ಸಚಿವ ಪರಮೇಶ್ವರ್..

ಶಲ್ಯದಿಂದ ತಲೆಗೆ ಮುಂಡಾಸು ಸುತ್ತಿಕೊಂಡು ಧಾರ್ಮಿಕ ವಿಧಿವಿಧಾನಗಳಲ್ಲಿ ಪರಮೇಶ್ವರ್ ಭಾಗಿಯಾದರು. ದಸರಾ ಉತ್ಸವ ಇಂದಿನಿಂದ ಆರಂಭ ತುಮಕೂರು ದಸರಾ ಉತ್ಸವವು ಇಂದಿನಿಂದ ವಿದ್ಯುಕ್ತವಾಗಿ ಪ್ರಾರಂಭವಾಗಿದೆ.

ತುಮಕೂರು (ಸೆ.22): ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಾರುವ ತುಮಕೂರು ದಸರಾ ಉತ್ಸವವನ್ನು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ನಂದಿ ಧ್ವಜ ಪೂಜೆಯೊಂದಿಗೆ ಉದ್ಘಾಟಿಸಿದರು. ಬಳಿಕ ದಸರಾ ಧ್ವಜಾರೋಹಣ ಮತ್ತು ಧಾರ್ಮಿಕ ಮಂಟಪದ ಉದ್ಘಾಟನೆಯನ್ನು ನೆರವೇರಿಸಿದರು. ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ, ಮೈಸೂರು ಅರಮನೆಯ ಮಾದರಿಯಲ್ಲಿ ನಿರ್ಮಾಣಗೊಂಡಿರುವ ಧಾರ್ಮಿಕ ಮಂಟಪದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿ ವಿರಾಜಮಾನರಾಗಿದ್ದಾರೆ.

ಗಣ್ಯರು ಮತ್ತು ಸಂತರು ದೇವಿಗೆ ಪೂಜೆ ಸಲ್ಲಿಸಿದರು. ಜೊತೆಗೆ, ಡಾ. ಜಿ. ಪರಮೇಶ್ವರ್ ಅವರು ಪತ್ನಿಯೊಂದಿಗೆ ಹಾಗೂ ಮಾಜಿ ಸಚಿವ ಕೆ. ಎನ್. ರಾಜಣ್ಣ ಅವರು ಹೋಮದಲ್ಲಿ ಭಾಗವಹಿಸಿದ್ದು, ಪೂರ್ಣಾಹುತಿಗೆ ಉಭಯ ನಾಯಕರು ಪೂಜೆ ಸಲ್ಲಿಸಿದರು. ಶಲ್ಯದಿಂದ ತಲೆಗೆ ಮುಂಡಾಸು ಸುತ್ತಿಕೊಂಡು ಧಾರ್ಮಿಕ ವಿಧಿವಿಧಾನಗಳಲ್ಲಿ ಪರಮೇಶ್ವರ್ ಭಾಗಿಯಾದರು. ದಸರಾ ಉತ್ಸವ ಇಂದಿನಿಂದ ಆರಂಭ ತುಮಕೂರು ದಸರಾ ಉತ್ಸವವು ಇಂದಿನಿಂದ ವಿದ್ಯುಕ್ತವಾಗಿ ಪ್ರಾರಂಭವಾಗಿದೆ. Zeneme Traditional Brass 18 K Gold Plated Wedding Jewellery Bahubali Inspired Long Chain Jhumki Earrings for Women and Girl

ಉತ್ಸವದ ಅಂಗವಾಗಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭವ್ಯವಾಗಿ ನಿರ್ಮಿಸಲಾದ ತ್ರಿವಿಧ ದಾಸೋಹಿ ಶಿವಕುಮಾರ ಮಹಾಸ್ವಾಮೀಜಿಯವರ ದಸರಾ ಧಾರ್ಮಿಕ ಮಹಾಮಂಟಪದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯನ್ನು ಪ್ರತಿಷ್ಠಾಪಿಸಿ, ಬೆಳಗ್ಗೆ 5 ಗಂಟೆಗೆ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಗುವುದು. ನವರಾತ್ರಿಯ ಮೊದಲ ದಿನದಂದು ಶ್ರೀ ಚಾಮುಂಡೇಶ್ವರಿ ದೇವಿಗೆ ಶೈಲಪುತ್ರಿ ಅಲಂಕಾರವನ್ನು ಮಾಡಲಾಗುವುದು.

ಈ ಸಂದರ್ಭದಲ್ಲಿ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ. ಬಿ. ಜಯಚಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಸಂಗಪ್ಪ ತಂಗಡಗಿ ಸೇರಿದಂತೆ ಇತರ ಜನಪ್ರತಿನಿಧಿಗಳು, ಗಣ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿರುವರು.ಕನ್ನಿಕಾ ಪರಮೇಶ್ವರಿ ಜೊತೆಗಿನ ಧಾರ್ಮಿಕ ಕಾರ್ಯಕ್ರಮದಲ್ಲಿ ಶಾಸಕರಾದ ಜ್ಯೋತಿಗಣೇಶ್, ಸುರೇಶ್ ಗೌಡ, ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗಸ್ವಾಮಿಜಿ, ಹನುಮಂತನಾಥ ಸ್ವಾಮಿಜಿ ಸೇರಿದಂತೆ ಇತರರು ಭಾಗವಹಿಸಿದ್ದರು.