Skip to main content
ವಿಡಿಯೋ
1/2
crime

ಮೊದಲನೇ ನೋಟಿಸ್‌ಗೆ ಮಹೇಶ್ ಶೆಟ್ಟಿ ತಿಮರೋಡಿ ಗೈರು..ಈಗ 2ನೇ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸ್!

By Pavitra Ganapathi Baradavalli
ಮೊದಲನೇ ನೋಟಿಸ್‌ಗೆ ಮಹೇಶ್ ಶೆಟ್ಟಿ ತಿಮರೋಡಿ ಗೈರು..ಈಗ 2ನೇ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸ್!

ಅಕ್ರಮ ಶಸ್ತ್ರಾಸ್ತ್ರ ಪತ್ತೆಯ ಬಳಿಕ ಮಹೇಶ್ ಶೆಟ್ಟಿ ತಿಮರೋಡಿಗೆ ಬೆಳ್ತಂಗಡಿ ಪೊಲೀಸರು ವಿಚಾರಣೆಗೆ ಹಾಜರಾಗಲು ಎರಡನೇ ನೋಟಿಸ್ ಜಾರಿ ಮಾಡಿದ್ದಾರೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 25ರಂದು.

ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ವಿಚಾರಣೆಗೆ ಹಾಜರಾಗಲು ಪೊಲೀಸರು ಎರಡನೇ ನೋಟಿಸ್ ಜಾರಿ ಮಾಡಿದ್ದಾರೆ.ಇದನ್ನೂ ಓದಿ: ಭಾರತದಲ್ಲಿ ಚಿನ್ನದ ಬೆಲೆ ಭಾರಿ ಏರಿಕೆ : ಹೂಡಿಕೆ ಇಳಿಮುಖವಾಗುವ ಸಾಧ್ಯತೆ! ಇಂದು ಎಷ್ಟು ಏರಿಕೆ?


ಆಗಸ್ಟ್ 26ರಂದು ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧ ನಡೆಸಿದಾಗ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆಪ್ಟೆಂಬರ್ 16ರಂದು ಪ್ರಕರಣ ದಾಖಲಾಗಿತ್ತು.

ವಿಚಾರಣೆಗೆ ಹಾಜರಾಗುವಂತೆ ತಿಳಿಸಲು ಸೆಪ್ಟೆಂಬರ್ 19ರಂದು ಪೊಲೀಸರು ಅವರ ಮನೆಗೆ ತೆರಳಿದಾಗ ಮಹೇಶ್ ಶೆಟ್ಟಿ ಮನೆಯಲ್ಲಿ ಇರಲಿಲ್ಲ. ಬಳಿಕ ಪೊಲೀಸರು ಸೆಪ್ಟೆಂಬರ್ 21ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಅಂಟಿಸಿ ಮರಳಿದ್ದರು.ಇದನ್ನೂ ಓದಿ: ಇಂದಿನಿಂದ ಹೊಸ GST ದರಗಳು...ತೆರಿಗೆದಾರರು ತಿಳಿಯಲೇಬೇಕಾದ 10 ಪ್ರಮುಖ ಅಂಶಗಳು!


ಆದರೆ, ಮಹೇಶ್ ಶೆಟ್ಟಿ ತಿಮರೋಡಿ ಸೆಪ್ಟೆಂಬರ್ 21ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಆಪ್ತರ ಮೂಲಕ ತನಿಖಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದರು.

ಇದಾದ ನಂತರ, ಸೆಪ್ಟೆಂಬರ್ 21ರಂದು ಬೆಳ್ತಂಗಡಿ ಪೊಲೀಸರು ಸೆಪ್ಟೆಂಬರ್ 25ರಂದು ವಿಚಾರಣೆಗೆ ಹಾಜರಾಗಲು ಎರಡನೇ ನೋಟಿಸನ್ನು ತಿಮರೋಡಿ ಮನೆಯ ಗೋಡೆಗೆ ಅಂಟಿಸಿದ್ದಾರೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 25ರಂದು ನಡೆಯಲಿದೆ.Veirdo® 100% Pure Cotton Regular Fit Half Sleeve Solid Core Round Neck Multicolor T-Shirt Combo for Men (Pack of 3)