Skip to main content
ವಿಡಿಯೋ
1/2
crime

ಅಹಮದಾಬಾದ್ ಏರ್ ಇಂಡಿಯಾ ಅಪಘಾತ: ಸ್ವತಂತ್ರ ತನಿಖೆಗೆ ಸುಪ್ರೀಂ ಕೋರ್ಟ್ ನೋಟಿಸ್!

By Pavitra Ganapathi Baradavalli
ಅಹಮದಾಬಾದ್ ಏರ್ ಇಂಡಿಯಾ ಅಪಘಾತ: ಸ್ವತಂತ್ರ ತನಿಖೆಗೆ ಸುಪ್ರೀಂ ಕೋರ್ಟ್ ನೋಟಿಸ್!

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 265 ಮಂದಿ ಮೃತ್ಯು ಕಂಡಿರುವ ಪ್ರಕರಣದ ಸ್ವತಂತ್ರ, ನಿಷ್ಪಕ್ಷಪಾತ ತನಿಖೆಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತ ಪ್ರಕರಣದ ಸ್ವತಂತ್ರ ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದೆ. ಜೂನ್ 12ರಂದು ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್‌ವಿಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI171 ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ಅಪಘಾತಕ್ಕೀಡಾಗಿ 265 ಜನರ ಜೀವವನ್ನು ಬಲಿ ತೆಗೆದುಕೊಂಡಿತ್ತು.ಇದನ್ನೂ ಓದಿ: ಬಾಗೆಮನೆ ಡೆವಲಪರ್ಸ್‌ನಿಂದ 40 ಕೋಟಿ ಜಮೀನು ಒತ್ತುವರಿ ತೆರವು ಮಾಡಿಸಿದ ಸರ್ಕಾರಿ ಅಧಿಕಾರಿಗಳು


ಈ ಅಪಘಾತಕ್ಕೆ ಪೈಲಟ್ ಮಾತ್ರವೇ ಸಂಪೂರ್ಣ ಕಾರಣ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (PIL) ಆಧಾರದ ಮೇಲೆ, ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಅರ್ಜಿಯಲ್ಲಿ ಅಪಘಾತದ ಕುರಿತು ಸ್ವತಂತ್ರ, ನಿಷ್ಪಕ್ಷಪಾತ ಮತ್ತು ತ್ವರಿತ ತನಿಖೆಗೆ ಒತ್ತಾಯಿಸಲಾಗಿದೆ. ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೋಮವಾರ ಈ ನೋಟಿಸ್ ನೀಡಿದೆ.ಇದನ್ನೂ ಓದಿ: ಜಾತಿ ಕಾಲಂನಲ್ಲಿ ಛಲವಾದಿ ಜಾತಿ ಬರೆಸಲು ಸೂಚಿಸಿದ ಛಲವಾದಿ ಮಠದ ಬಸವನಾಗಿದೇವ ಶ್ರೀ ಸ್ವಾಮೀಜಿ…!!

ನಾಗರಿಕ ವಿಮಾನಯಾನ ಸಚಿವಾಲಯ, ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಮತ್ತು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಇವುಗಳಿಂದ ನ್ಯಾಯಾಲಯ ಪ್ರತಿಕ್ರಿಯೆಗಳನ್ನು ಕೇಳಿದೆ. ಸ್ವತಂತ್ರ, ನಿಷ್ಪಕ್ಷಪಾತ ಮತ್ತು ತ್ವರಿತ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಮಾತ್ರ ಈ ನೋಟಿಸ್ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಅಪಘಾತ ಸಂಭವಿಸಿ ನೂರು ದಿನಗಳು ಕಳೆದರೂ ಕೇವಲ ಪ್ರಾಥಮಿಕ ವರದಿ ಮಾತ್ರ ಬಿಡುಗಡೆಯಾಗಿದೆ ಎಂದರು. ಈ ವರದಿಯು ಅಪಘಾತದ ನಿಜವಾದ ಕಾರಣಗಳನ್ನು ಬಹಿರಂಗಪಡಿಸುವುದಿಲ್ಲ ಅಥವಾ ಭವಿಷ್ಯದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಸೂಚಿಸುವುದಿಲ್ಲ ಎಂದು ಅವರು ಹೇಳಿದರು.ಇದನ್ನೂ ಓದಿ: ಪಾಕ್ ಫೈಟರ್ ಜೆಟ್‌ಗಳಿಂದ 8 ಬಾಂಬ್‌ಗಳು: ಮ್ಯಾಟ್ರೆ ದಾರಾ ಗ್ರಾಮದಲ್ಲಿ 30 ಮಂದಿ ಸಾ*ವು, ಸ್ವಂತ ದೇಶದ ಜನರ ಮೇಲೆ ಭಯಂಕರ ದಾಳಿ!


ಅಪಘಾತ ತನಿಖೆಗಾಗಿ ರಚಿಸಲಾದ ಐವರು ಸದಸ್ಯರ ಸಮಿತಿಯಲ್ಲಿ ಮೂವರು ಡಿಜಿಸಿಎ ಅಧಿಕಾರಿಗಳಿದ್ದಾರೆ ಎಂದು ಭೂಷಣ್ ವಾದಿಸಿದರು. ಆದರೆ, ಡಿಜಿಸಿಎ ಪಾತ್ರವೇ ತನಿಖೆಗೆ ಒಳಪಡುವ ಸಾಧ್ಯತೆ ಇರುವುದರಿಂದ ಇದು ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗುತ್ತದೆ. ಆದ್ದರಿಂದ ಈ ಸಮಿತಿಯಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.Veirdo® 100% Pure Cotton Regular Fit Half Sleeve Solid Core Round Neck Multicolor T-Shirt Combo for Men (Pack of 3)