ಕಾಂತಾರ ಚಾಪ್ಟರ್ 1 ಟ್ರೈಲರ್ ಬಿಡುಗಡೆಯಾದ ಬೆನ್ನಲ್ಲೇ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಜೊತೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು, ಕಾಂತಾರ ಸಿನಿಮಾ ಯಶಸ್ಸಿಗಾಗಿ ಪ್ರಾರ್ಥಿಸಿದ್ದಾರೆ. ಇದು ರಿಷಬ್ ಶೆಟ್ಟಿ ಅವರ ಆಧ್ಯಾತ್ಮಿಕ ಬದ್ಧತೆಯನ್ನು ಎತ್ತಿ ತೋರಿಸುತ್ತದೆ.
ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಟ್ರೈಲರ್ ನವರಾತ್ರಿ ದಿನ ಬಿಡುಗಡೆಗೊಂಡಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಡುಗಡೆಯಾದ ದಿನವೇ 55 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿ ದಾಖಲೆ ಸೃಷ್ಟಿಸಿದೆ.Symbol Premium Men's Slim Fit Stretch Knit Pants - Smart Casual | Flexi Waist
ಟ್ರೈಲರ್ ಬಿಡುಗಡೆ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡವು ಸಿನಿಮಾದ ಬಗ್ಗೆ ಹಲವು ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿತು. ರಿಷಬ್ ಶೆಟ್ಟಿ ಅವರು ಸಿನಿಮಾ ನಿರ್ಮಾಣದಲ್ಲಿನ ಶ್ರಮ ಮತ್ತು ತಂಡದ ಜವಾಬ್ದಾರಿಯುತ ಕೆಲಸದ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ನಟಿ ರುಕ್ಮಿಣಿ ವಸಂತ್, ನಿರ್ಮಾಪಕ ವಿಜಯ್ ಕಿರಗಂದೂರು, ಮತ್ತು ರಿಷಬ್ ಪತ್ನಿ ಪ್ರಗತಿ ಶೆಟ್ಟಿ ಕೂಡ ಉಪಸ್ಥಿತರಿದ್ದು, ಸಿನಿಮಾ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.'ಕಾಂತಾರ ಚಾಪ್ಟರ್ 1' ಟ್ರೇಲರ್‌ನಲ್ಲಿ ಹಾಸ್ಯನಟ ದಿ..ರಾಕೇಶ್ ಶೆಟ್ಟಿ...ಯಾವ ಪಾತ್ರದಲ್ಲಿ ಕಾಣಿಸಿಕೊಂಡ್ರು ಗೊತ್ತಾ?
ಕಾಂತಾರ ಚಾಪ್ಟರ್ 1 ಅಕ್ಟೋಬರ್ 2 ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ. ದೇಶ-ವಿದೇಶಗಳಲ್ಲೂ ಸಿನಿಮಾ ಬಿಡುಗಡೆಗೆ ಚಿತ್ರತಂಡ ವ್ಯಾಪಕ ಸಿದ್ಧತೆಗಳನ್ನು ನಡೆಸಿದೆ.
ಈ ಚಿತ್ರ ಕನ್ನಡ, ತೆಲುಗು, ತಮಿಳು, ಮಲಯಾಳಂ, ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ ಎಂದು ತಂಡ ಮಾಹಿತಿ ನೀಡಿದೆ.