ರಾಮನಗರ: ಬೆಂಗಳೂರು ವಿವಿಧ ಕಡೆ ಆಗಿರುವ ರಸ್ತೆ ಗುಂಡಿಗಳನ್ನು (Road Pothole) ಮುಚ್ಚದ ಕಾಂಗ್ರೆಸ್ ಸರ್ಕಾರವನ್ನು ಕುರಿತು ಬಿಜೆಪಿ (BJP) ಪ್ರತಿಭಟನೆ ನಡೆಸುತ್ತಿದೆ. ರಾಮನಗರದ (Ramanagara) ಐಜೂರು ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.ಇದನ್ನೂ ಓದಿ: S.L ಭೈರಪ್ಪ ಅವರ ಕಾದಂಬರಿ ಆಧಾರಿತ ಸಿನಿಮಾಗಳು ಎಷ್ಟಿವೆ ಗೊತ್ತಾ? ಇಲ್ಲಿವೆ ನೋಡಿ!
ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಬಿಜೆಪಿ ಕಾರ್ಯಕರ್ತರು ಕಿಡಿಕಾರಿದರು. ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿ ಗುಂಡಿ ಮುಚ್ಚದ ಪರಿಸ್ಥಿತಿಗೆ ಬಂದು ನಿಂತಿದೆ. ಬೆಂಗಳೂರು ಈಗ ಗುಂಡಿಯೂರು ಆಗಿದೆ. ಸಾಕಷ್ಟು ಜನ ನಿತ್ಯ ರಸ್ತೆ ಗುಂಡಿಗೆ ಸಾವನ್ನಪ್ಪುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ದುಲ್ಕರ್ ಸಲ್ಮಾನ್ ಸಂಕಷ್ಟದಲ್ಲಿ...ಐಷಾರಾಮಿ ಕಾರುಗಳ ಮೇಲೆ ಕಸ್ಟಮ್ಸ್ ದಾಳಿ.. !
ಸಾಕಷ್ಟು ಐಟಿ ಕಂಪನಿಗಳು ಈಗಾಗಲೇ ಬೆಂಗಳೂರನ್ನು ತೊರೆದು ಬೇರೆ ರಾಜ್ಯಕ್ಕೆ ಹೋಗುತ್ತಿವೆ. ಇಷ್ಟಾದರೂ ಗುಂಡಿ ಮುಚ್ಚದೇ ಅಸಡ್ಡೆ ತೋರುತ್ತಿರುವ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಬೇಜವಾಬ್ದಾರಿತನದ ಹೇಳಿಕೆ ನೀಡುತ್ತಿದ್ದಾರೆ. ಶೀಘ್ರವಾಗಿ ಬೆಂಗಳೂರಿನ ಎಲ್ಲಾ ಗುಂಡಿಗಳನ್ನ ಮುಚ್ಚಿ ಮರ್ಯಾದೆ ಉಳಿಸಿಕೊಳ್ಳಿ. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.SGF11 Women's Kanjivaram Soft Lichi Silk Saree With Blouse Piece