Skip to main content
ವಿಡಿಯೋ
1/2
general

ಕಥೆ ಬರೆದು ದಂತಕಥೆಯಾದ ಪದ್ಮಭೂಷಣ ಪುರಸ್ಕೃತರಾದ ಡಾ. S.L ಭೈರಪ್ಪ: ನಿಧನಕ್ಕೆ ಗಣ್ಯರು ಸೇರಿ ಹಲವರ ಕಂಬನಿ

By Gireesh Vasishta
ಕಥೆ ಬರೆದು ದಂತಕಥೆಯಾದ ಪದ್ಮಭೂಷಣ ಪುರಸ್ಕೃತರಾದ ಡಾ. S.L ಭೈರಪ್ಪ: ನಿಧನಕ್ಕೆ ಗಣ್ಯರು ಸೇರಿ ಹಲವರ ಕಂಬನಿ

- ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲಿಷ್‌ ಮತ್ತು ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರು ಮಾಡಿದೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಇವರಿಗೆ ಭಾರತ ಸರ್ಕಾರವು 2023 ನೇ ಸಾಲಿನ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

ಬೆಂಗಳೂರು: ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌.ಎಲ್‌. ಭೈರಪ್ಪ (SL Bhyrappa) ವಿಧಿವಶರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿರುವ  ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು (94 ವರ್ಷ)  ಹೃದಯಸ್ತಂಭನದಿಂದ ಇಂದು  ಮಧ್ಯಾಹ್ನ 2:38 ಕ್ಕೆ  ನಿಧನರಾದರು ಎಂದು ತಿಳಿದುಬಂದಿದೆ.

- ಮರೆವಿನ ಖಾಯಿಲೆಯಿಂದ ಬಳಲುತ್ತಿದ್ದ ಎಸ್.ಎಲ್ ಭೈರಪ್ಪ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

- ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲಿಷ್‌  ಮತ್ತು ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರು ಮಾಡಿದೆ.  ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಇವರಿಗೆ ಭಾರತ ಸರ್ಕಾರವು 2023 ನೇ ಸಾಲಿನ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

- ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ ಆಗಸ್ಟ್‌ 20, 1931 ರಂದು ಜನಿಸಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು.YOHO Bubbles Men Ortho slippers | Soft comfortable and stylish flip flop slippers for Men in exciting colors |Lightweight | Anti Skid | Daily Use Chappal

- ಪ್ರೌಢ ಶಿಕ್ಷಣ ಹಾಗೂ ಕಾಲೇಜು ಓದು ಮೈಸೂರಿನಲ್ಲಿ ಮುಂದುವರೆಸಿದ ಭೈರಪ್ಪನವರು ಎಂ.ಎ.ನಲ್ಲಿ ಸುವರ್ಣ ಪದಕದೊಂದಿಗೆ ತೇರ್ಗಡೆಯಾದರು. ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ “ಸತ್ಯ ಮತ್ತು ಸೌಂದರ್ಯ ಎಂಬ ಇಂಗ್ಲಿಷ್‌ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

- ಅವರು ಬರೆದ ಕಾದಂಬರಿಗಳೆಲ್ಲಾ ಚರ್ಚೆಗೆ ಒಳಗಾಗಿವೆ. ಇಂಗ್ಲಿಷ್ ಭಾಷೆಯೂ ಸೇರಿದಂತೆ ಭಾರತೀಯ ಹಲವು ಭಾಷೆಗಳಿಗೆ ಭೈರಪ್ಪನವರ ಕಾದಂಬರಿಗಳು ಅನುವಾದಗೊಂಡಿವೆ. ಗೃಹಭಂಗ, ವಂಶವೃಕ್ಷ, ನೆಲೆ, ಸಾಕ್ಷಿ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ದಾಟು, ಧರ್ಮಶ್ರೀ, ಪರ್ವ, ಭಿತ್ತಿ ಮುಂತಾದವು ಹಿಂದಿ, ಮರಾಠಿಯಲ್ಲಿ ಜನಪ್ರಿಯವಾಗಿವೆ.ಇದನ್ನು ಓದಿ: 'ವೀರ ರಾಜ ವೀರ' ಹಾಡಿನ ಹಕ್ಕುಸ್ವಾಮ್ಯ ಪ್ರಕರಣ: ಎ ಆರ್. ರೆಹಮಾನ್‌ ಪರ ದೆಹಲಿ ಹೈಕೋರ್ಟ್ ತೀರ್ಪು: ಕಾರಣ ಹೀಗಿದೆ


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು x ಖಾತೆಯಲ್ಲಿ ಕಂಬನಿ ಮಿಡಿದಿದ್ದಾರೆ:

ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್. ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ‌ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ನರೇಂದ್ರ ಮೋದಿಯವರಿಂದ ಎಕ್ಸ್‌ನಲ್ಲಿ ವಿಷಾದ:

ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನದೊಂದಿಗೆ, ನಮ್ಮ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಮುಟ್ಟಿದ ಒಬ್ಬ ಧೀಮಂತ ವ್ಯಕಿತ್ವವನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು, ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು ಚಿಂತಿಸಲು, ಪ್ರಶ್ನಿಸಲು ಮತ್ತು ಸಮಾಜದೊಂದಿಗೆ ಹೆಚ್ಚು ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದವು.

 

ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರ ಅಚಲವಾದ ಉತ್ಸಾಹವು ಮುಂದಿನ ದಿನಗಳಲ್ಲೂ ಜನರನ್ನು ಪ್ರೇರೇಪಿಸುತ್ತಲೇ ಇರುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ಹೀಗೆ ಹಲವಾರು ಗಣ್ಯರು ಭೈರಪ್ಪ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.