ಇಂದು ಕಂದಾಯ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡ ಅವರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ ಅವರು, ಜಿಲ್ಲಾ ಆರೋಗ್ಯ ಅಧಿಕಾರಿ ಮತ್ತು ಹಿಮ್ಸ್ (HIMS) ನಿರ್ದೇಶಕರೊಂದಿಗೆ ಸಂವಾದಿಸಿ, ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ ಪಡೆದಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಆಧುನಿಕ ಜೀವನ ಶೈಲಿಯಿಂದ ಉಂಟಾಗುವ ಆರೋಗ್ಯ ತೊಂದರೆಗಳ ಕುರಿತಾಗಿ ವಿಶೇಷ ಗಮನಹರಿಸುವಂತೆ ಎಲ್ಲಾ ಅಧಿಕಾರಿಗಳಿಗೂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.ಸಭೆಯಲ್ಲಿ ಮಾತನಾಡಿದ ಸಚಿವರು, ಹೃದಯಘಾತದ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದರು ಹಾಗೂ ಸಾಂಕ್ರಾಮಿಕ ರೋಗಗ