ಧರ್ಮಸ್ಥಳ ಪ್ರಕರಣದ ತನಿಖೆ ಹಲವು ಆಯಾಮಗಳನ್ನು ಪಡೆದುಕೊಂಡಿದ್ದು, ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಪತ್ನಿಯ ಬ್ಯಾಂಕ್ ಖಾತೆಯಲ್ಲಿನ ಹಣಕಾಸು ವಹಿವಾಟು ಎಸ್‌ಐಟಿ ತನಿಖೆಗೆ ಹೊಸ ಆಯಾಮ ನೀಡಿದೆ. ಎಸ್‌ಐಟಿ ಅಧಿಕಾರಿಗಳು ತಿಮರೋಡಿಯವರ ಮನೆಗೆ ಭೇಟಿ ನೀಡಿ ಪತ್ನಿಯ ಹೇಳಿಕೆ ದಾಖಲಿಸಿಕೊಂಡಾಗ ಈ ಮಾಹಿತಿ ಬೆಳಕಿಗೆ ಬಂದಿದೆ.ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಇಂದು ಕೂಡ ನ್ಯಾಯಾಲಯಕ್ಕೆ ಹಾಜರಾಗಲಿರುವ ಸಾಕ್ಷಿ ದೂರುದಾರ!
ದಕ್ಷಿಣ ಕನ್ನಡ ಜಿಲ್ಲೆಯಿಂದ ತಿಮರೋಡಿಯನ್ನು ಗಡೀಪಾರು ಮಾಡಲು ಆದೇಶ ನೀಡಲಾಗಿದೆ. ಇಂತಹ ಸಂದರ್ಭದಲ್ಲಿ, ಎಸ್‌ಐಟಿ ತಂಡ ತಿಮರೋಡಿ ಮನೆಗೆ ಭೇಟಿ ನೀಡಿ ಅವರ ಪತ್ನಿಯ ಹೇಳಿಕೆ ದಾಖಲಿಸಿದೆ. ಈ ವೇಳೆ, ಪತ್ನಿಯ ಬ್ಯಾಂಕ್ ಖಾತೆಯಲ್ಲಿ ಭಾರಿ ಹಣದ ವಹಿವಾಟು ಪತ್ತೆಯಾಗಿದೆ ಎಂದು ವರದಿಯಾಗಿದೆ.ಇದನ್ನೂ ಓದಿ: ಆಧುನಿಕ ಜೀವನಶೈಲಿಯಿಂದ ಉಂಟಾಗುವ ರೋಗಗಳಿಗೆ ತುತ್ತಾಗದಂತೆ ಎಚ್ಚರವಹಿಸಿ - ಸಚಿವ ಕೃಷ್ಣಬೈರೇಗೌಡ
ಬುರುಡೆ ಪ್ರಕರಣದ ತನಿಖೆಗಾಗಿ ಎಸ್‌ಐಟಿ ತಂಡ ಇಂದು ದಿಢೀರ್ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಭೇಟಿ ನೀಡಿದೆ. ಸಂಜೆ ತಿಮರೋಡಿ ಮನೆಗೆ ತೆರಳಿದ ಅಧಿಕಾರಿಗಳು ಹಲವು ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ತಿಮರೋಡಿ ಪತ್ನಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ.ಇದನ್ನೂ ಓದಿ: ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ: ಹೈಕೋರ್ಟ್‌ನಲ್ಲಿ ನಾಳೆ ವಿಚಾರಣೆ..!
ಎಸ್ಐಟಿ ಅಧಿಕಾರಿಗಳು ತಿಮರೋಡಿ ಪತ್ನಿಯ ಹೇಳಿಕೆ ಪಡೆಯುವ ಸಂದರ್ಭದಲ್ಲಿ ಅವರ ಬ್ಯಾಂಕ್ ಖಾತೆ ವಿವರಗಳನ್ನು ಪರಿಶೀಲಿಸಿದ್ದಾರೆ. ಖಾತೆಯಲ್ಲಿ ಅಸಾಮಾನ್ಯ ಪ್ರಮಾಣದ ಹಣಕಾಸು ವಹಿವಾಟು ಕಂಡುಬಂದಿದೆ. ಹಣ ವರ್ಗಾವಣೆಗೆ ಸಂಬಂಧಿಸಿದಂತೆ ತಿಮರೋಡಿ ಪತ್ನಿಯಿಂದ ಮಾಹಿತಿ ಪಡೆಯಲಾಗಿದೆ.ಇದನ್ನೂ ಓದಿ:ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಟ್ರಸ್ಟ್‌ಗೆ ಯಾವುದೇ ಸಂಬಂಧವಿಲ್ಲ: ಬಸವ ಜಯಮೃತ್ಯುಂಜಯ ಸ್ವಾಮೀಜಿ..!!
ಪುತ್ತೂರು ಸಹಾಯಕ ಪೊಲೀಸ್ ಆಯುಕ್ತರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡೀಪಾರು ಮಾಡಲು ಆದೇಶ ಹೊರಡಿಸಿದಾಗಿನಿಂದಲೂ ಅವರು ನಾಪತ್ತೆಯಾಗಿದ್ದಾರೆ. ಅವರು ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇಂದು ಎಸ್‌ಐಟಿ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿದಾಗಲೂ ತಿಮರೋಡಿ ಅಲ್ಲಿ ಇರಲಿಲ್ಲ.ಇದನ್ನೂ ಓದಿ: ವಿಶ್ವಸಂಸ್ಥೆಯಲ್ಲಿ ಟರ್ಕಿ ಪ್ರಧಾನಿಯಿಂದ ಕಾಶ್ಮೀರ ವಿಷಯ ಪ್ರಸ್ತಾಪ…!!!
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ, ವಿಶೇಷವಾಗಿ ಬೆಳ್ತಂಗಡಿಯ ಧರ್ಮಸ್ಥಳದಲ್ಲಿ ಅಶಾಂತಿ ಸೃಷ್ಟಿಸಿದ ಆರೋಪವಿದೆ. ಅವರು ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದು, ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಆರೋಪ ಕೂಡ ಇದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ, ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರಿನ ಸಾನ್ವಿಗೆ ಗಡೀಪಾರು ಮಾಡುವಂತೆ ಆದೇಶ ಹೊರಡಿಸಲಾಗಿದೆ. ಆದರೆ, ಗಡೀಪಾರು ಆದೇಶದ ಬಳಿಕ ಅವರು ನಾಪತ್ತೆಯಾಗಿದ್ದು, ಇದುವರೆಗೂ ಪತ್ತೆಯಾಗಿಲ್ಲ.C J Enterprise Women's Kanjivaram Art Silk Saree Soft Banarasi Style Sari With Blouse Piece For Wedding (Pari122-51)