ಕರ್ನಾಟಕ ರಾಜ್ಯದಲ್ಲಿ 2025ರ ಸೆಪ್ಟೆಂಬರ್ 22ರಿಂದ ಆರಂಭವಾಗಿರುವ ಜಾತಿ ಗಣತಿ (ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ)ಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲೂ ವ್ಯಾಪಕ ಚರ್ಚೆ ಮತ್ತು ಸಮಸ್ಯೆಗಳು ಎದುರಾಗಿವೆ. ಈ ಗಣತಿ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಯುತ್ತಿದ್ದು, ಜಾತಿ, ಧರ್ಮ, ಶಿಕ್ಷಣ ಮತ್ತು ಆರ್ಥಿಕ ಸ್ಥಿತಿಯ ವಿವರಗಳನ್ನು ಸಂಗ್ರಹಿಸುವ ಉದ್ದೇಶವಿದೆ. ಆದರೆ ಶಿವಮೊಗ್ಗದಲ್ಲಿ ಇದಕ್ಕೆ ಸಂಬಂಧಿಸಿದಂತೆ ಗೊಂದಲ, ವಿರೋಧ ಮತ್ತು ತಾಂತ್ರಿಕ ಸಮಸ್ಯೆಗಳು ಹೆಚ್ಚಾಗಿವೆ.
ರಾಜ್ಯಾದ್ಯಂತ ಗಣತಿ ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದರೂ, ಶಿವಮೊಗ್ಗದಲ್ಲಿ ಶಿಕ್ಷಕರು ಮತ್ತು ಇತರ ಸಿಬ್ಬಂದಿಯ ಮೂಲಕ ಮನೆಮನೆ ಸಮೀಕ್ಷೆ ನಡೆಯುತ್ತಿದೆ. ಆದರೆ ಕೆಲವು ಪ್ರದೇಶಗಳಲ್ಲಿ ತಾಂತ್ರಿಕ ದೋಷ ಸಂಬವಿಸಿದ್ದು ತೊಂದರೆಯುಂಟಾಗಿದೆ. ಹಾಗಾಗಿ ಅವರಿಗೆ ನೀಡಿರುವ ಸವಾಲನ್ನು ಪೂರ್ಣಗೊಳಿಸಲು ಕಷ್ಟಸಾಧ್ಯವಾಗುತ್ತಿದೆ. Nifty Womens Mid Rise Denim Wide Leg Jeans
ಈ ರೀತಿಯ ಸಮಸ್ಯೆಗಳು ಕೇವಲ ಶಿವಮೊಗ್ಗದಲ್ಲಿ ಮಾತ್ರವಲ್ಲದೇ ಇನ್ನು ಕೆಲವು ಕಡೆ ಜಾತಿ ಗಣತಿ ಸಮೀಕ್ಷೆಯನ್ನು ಆರಂಭವೇ ಮಾಡಿಲ್ಲ, ಹಾಗಾಗಿ ದಸರಾ ನಂತರ ಸಮೀಕ್ಷೆಯನ್ನು ಆರಂಭ ಮಾಡಿ ಎಂದು ಶಿಕ್ಷಕಿಯರು ಮನವಿ ಮಾಡಿಕೊಳ್ಳುತ್ತಿದ್ದಾರೆ.
ತಾಂತ್ರಿಕ ದೋಷದಿಂದ ಜಾತಿ ಗಣತಿ ಸಮೀಕ್ಷೆಯನ್ನು ಮಾಡಲಾಗುತ್ತಿಲ್ಲ, ಹಾಗಾಗಿ 8 ರಿಂದ 10 ದಿನಗಳ ಕಾಲ ಮುಂದೂಡಿಕೆ ಮಾಡಬೇಕೆಂದು ಕೋರಿಕೊಳ್ಳುತ್ತಿದಾರೆ.