Skip to main content
ವಿಡಿಯೋ
1/3
politics

ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಮಹತ್ವದ ನಿರ್ಧಾರಗಳು: ಆಸ್ಪತ್ರೆ ಉನ್ನತೀಕರಣದಿಂದ ಕಾಂಗ್ರೆಸ್ ಭವನ ವಿಸ್ತರಣೆವರೆಗೆ!

By Gireesh Vasishta
ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಮಹತ್ವದ ನಿರ್ಧಾರಗಳು: ಆಸ್ಪತ್ರೆ ಉನ್ನತೀಕರಣದಿಂದ ಕಾಂಗ್ರೆಸ್ ಭವನ ವಿಸ್ತರಣೆವರೆಗೆ!

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದ್ದು, ಸಮೀಕ್ಷೆಗೆ ಗೈರುಹಾಜರಾದ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಪುಟ ತೀರ್ಮಾನಿಸಿದೆ.

ಸಭೆಯಲ್ಲಿ ಆಸ್ಪತ್ರೆ ಅಭಿವೃದ್ಧಿ, ಸಾರ್ವಜನಿಕ ನಿಧಿಗಳು, ಕೌಶಲ್ಯ ನೀತಿ ಮತ್ತು ರಾಜ್ಯಾಭಿವೃದ್ಧಿ ಯೋಜನೆಗಳಿಗೆ ಹಸಿರು ನಿಶಾನೆ. ಕೋವಿಡ್-ನಂತರ ಆರೋಗ್ಯ, ಶೈಕ್ಷಣಿಕ ಮತ್ತು ಸಾಮಾಜಿಕ ವೀಕ್ಷಣೆಗಳ ಮೇಲೆ ಗಮನ ಹೆಚ್ಚಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದ್ದು, ಸಮೀಕ್ಷೆಗೆ ಗೈರುಹಾಜರಾದ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಪುಟ ತೀರ್ಮಾನಿಸಿದೆ.

ಆಸ್ಪತ್ರೆಗಳ ಉನ್ನತೀಕರಣ ಮತ್ತು ಸ್ಥಳಾಂತರಕ್ಕೆ ಅನುಮೋದನೆ ದೊರೆತಿದೆ. ಚಿಕ್ಕೋಡಿಗೆ ಮಂಜೂರಾಗಿದ್ದ 50 ಹಾಸಿಗೆಗಳ ತೀವ್ರ ನಿಗಾ ಘಟಕವನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕು ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಕಟ್ಟಡ ಮತ್ತು ವೈದ್ಯಕೀಯ ಉಪಕರಣಗಳು ಸೇರಿ ಒಟ್ಟು 23.75 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಘಟಕ ನಿರ್ಮಾಣವಾಗಲಿದೆ.

ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ 60 ಹಾಸಿಗೆಗಳ ಆಸ್ಪತ್ರೆಯನ್ನು ಉನ್ನತೀಕರಿಸಲು ಸಂಪುಟ ಒಪ್ಪಿಗೆ ನೀಡಿದೆ. ಮೊದಲ ಹಂತದಲ್ಲಿ 95.60 ಕೋಟಿ ರೂಪಾಯಿ ಅಂದಾಜು ಮೊತ್ತದಲ್ಲಿ 250 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯಾಗಿ ಇದನ್ನು ಮೇಲ್ದರ್ಜೆಗೇರಿಸಲಾಗುತ್ತದೆ.ಇದನ್ನು ಓದಿ: ಚುನಾವಣಾ ರಾಜ್ಯಗಳಿಗೆ BJP ಉಸ್ತುವಾರಿ ನೇಮಕ: ಪಶ್ಚಿಮ ಬಂಗಾಳ, ಬಿಹಾರ ಹಾಗು ತಮಿಳುನಾಡು ರಾಜ್ಯ: ಮಾಹಿತಿ ಹೀಗಿದೆ

ಬಾಗಲಕೋಟೆ ಜಿಲ್ಲೆಯ ಲೋಕಾಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿರಿಸಿದ್ದ 400.63 ಚದರ ಮೀಟರ್ ವಿಸ್ತೀರ್ಣದ ನಿವೇಶನವನ್ನು ಗುತ್ತಿಗೆ ಆಧಾರದ ಮೇಲೆ ಕಾಂಗ್ರೆಸ್ ಭವನ ಟ್ರಸ್ಟ್‌ಗೆ 30 ವರ್ಷಗಳ ಅವಧಿಗೆ ನೀಡಲು ಅನುಮೋದಿಸಲಾಗಿದೆ.Handcuffs Backpacks Vegan Leather Casual Backpack Multipurpose Travelling Bags Daypacks For Men And Women

ಅದೇ ರೀತಿ, ಚನ್ನರಾಯಪಟ್ಟಣದ ಅಮಾನಿಕೆರೆ ಗ್ರಾಮದ 799 ಚದರ ಮೀಟರ್ ಸಿ.ಎ. ನಿವೇಶನದಲ್ಲಿ 210 ಚದರ ಮೀಟರ್ ಜಾಗವನ್ನು ಕೂಡ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಸಚಿವ ಸಂಪುಟ ಸಮ್ಮತಿಸಿದೆ. ದೆಹಲಿಯ ಕರ್ನಾಟಕ ಭವನ-2ರ ನವೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗಾಗಿ 16.30 ಕೋಟಿ ರೂಪಾಯಿ ಮೊತ್ತವನ್ನು ನಿಗದಿಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಹೊಸ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ 16 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಮೋದನೆ ದೊರೆತಿದೆ.

ಕೇಂದ್ರದ 15ನೇ ಹಣಕಾಸು ಆಯೋಗದ ಯೋಜನೆಯಡಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ವಿಸ್ತರಣೆ ಮತ್ತು ಆಧುನೀಕರಣಕ್ಕಾಗಿ ಪರಿಷ್ಕೃತ 329 ಕೋಟಿ ರೂಪಾಯಿ ಮೊತ್ತದ ಕ್ರಿಯಾ ಯೋಜನೆಗೂ ಸಚಿವ ಸಂಪುಟ ಸಭೆಯಲ್ಲಿ ಹಸಿರು ನಿಶಾನೆ ದೊರೆತಿದೆ. ಇದರ ಜೊತೆಗೆ, ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025-2032ಕ್ಕೂ ಸಂಪುಟ ಅಂಗೀಕಾರ ನೀಡಿದೆ.