Skip to main content
ವಿಡಿಯೋ
1/2
politics

ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ರಾಜು ಕಾಗೆ ವಜಾ...ಅರುಣ್ ಪಾಟೀಲ ನೂತನ ಅಧ್ಯಕ್ಷ..!

By Sushmitha R
ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ರಾಜು ಕಾಗೆ ವಜಾ...ಅರುಣ್ ಪಾಟೀಲ ನೂತನ ಅಧ್ಯಕ್ಷ..!

ಸರ್ಕಾರಕ್ಕೆ ಮುಜುಗರ ತಂದ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಿ, ಅರುಣ್ ಪಾಟೀಲ ಅವರನ್ನು ನೇಮಕಗೊಳಿಸಿದ ಕೇಂದ್ರ ಕಾಂಗ್ರೆಸ್ ಕ್ರಮ.

ಸಹಕಾರ ಸಚಿವ ಸ್ಥಾನದಿಂದ ಕೆ.ಎನ್. ರಾಜಣ್ಣ ಅವರನ್ನು ಕೈಬಿಟ್ಟ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಮತ್ತೊಬ್ಬ ಹಿರಿಯ ಶಾಸಕರಿಗೆ ಶಾಕ್ ನೀಡಿದೆ. ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮುಜುಗರ ತಂದಂತಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ.ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ: ಹೈಕೋರ್ಟ್‌ನಲ್ಲಿ ನಾಳೆ ವಿಚಾರಣೆ..!

ರಾಜು ಕಾಗೆ ಬದಲಿಗೆ ಅರುಣ್ ಪಾಟೀಲ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ಪಟ್ಟಿಯನ್ನು ರವಾನಿಸಿದ್ದಾರೆ. ಈ ಕ್ರಮದ ಮೂಲಕ, ಸರ್ಕಾರಕ್ಕೆ ಮುಜುಗರ ತರುವಂತಹ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಕಠಿಣ ಸಂದೇಶ ರವಾನಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.OnePlus 13R | Smarter with OnePlus AI | Lifetime Display Warranty (12GB RAM, 256GB Storage Nebula Noir)

ಕೆಲವು ಸಮಯದ ಹಿಂದೆ ರಾಜು ಕಾಗೆ ನೀಡಿದ್ದ ಹೇಳಿಕೆಯು ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿತ್ತು. "ನನ್ನ ಕ್ಷೇತ್ರಕ್ಕೆ ₹25 ಕೋಟಿ ವಿಶೇಷ ಅನುದಾನ ಬಿಡುಗಡೆಯಾಗಿದ್ದರೂ, ಎರಡು ವರ್ಷ ಕಳೆದರೂ ಕಾಮಗಾರಿ ಆರಂಭವಾಗಿಲ್ಲ. ಸಮಸ್ಯೆ ಬಗೆಹರಿಯದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಅವರು ಎಚ್ಚರಿಕೆ ನೀಡಿದ್ದರು.

ಅಲ್ಲದೆ, ಆಳಂದ ಶಾಸಕ ಬಿ.ಆರ್. ಪಾಟೀಲ ಅವರು ಎರಡು ತಿಂಗಳ ಹಿಂದೆ ವಸತಿ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದ್ದರು. ಆನಂತರ, ಬಿ.ಆರ್. ಪಾಟೀಲರಂತೆಯೇ ತನ್ನ ಸ್ಥಿತಿಯೂ ಇದೆ ಎಂದು ರಾಜು ಕಾಗೆ ಹೇಳಿಕೆ ನೀಡಿದ್ದರು.ಚುನಾವಣಾ ರಾಜ್ಯಗಳಿಗೆ BJP ಉಸ್ತುವಾರಿ ನೇಮಕ: ಪಶ್ಚಿಮ ಬಂಗಾಳ, ಬಿಹಾರ ಹಾಗು ತಮಿಳುನಾಡು ರಾಜ್ಯ: ಮಾಹಿತಿ ಹೀಗಿದೆ

ರಾಜು ಕಾಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಾ, "ಸರ್ಕಾರದಿಂದ ನನಗೆ ₹25 ಕೋಟಿ ವಿಶೇಷ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ₹13 ಕೋಟಿಯಲ್ಲಿ 72 ಸಮುದಾಯ ಭವನಗಳು ಮತ್ತು ₹12 ಕೋಟಿಯಲ್ಲಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಆದರೆ, ಎರಡು ವರ್ಷಗಳಾದರೂ ಕಾಮಗಾರಿ ಆರಂಭವಾಗಿಲ್ಲ. ವರ್ಕ್ ಆರ್ಡರ್ ಸಿಗದಿರುವುದಕ್ಕೆ ನನಗೆ ನೋವಾಗಿದೆ" ಎಂದು ಹೇಳಿದ್ದರು.

ಕಾಗವಾಡ ಶಾಸಕ ರಾಜು ಕಾಗೆ ಜೂನ್ 23 ರಂದು ಬಹಿರಂಗವಾಗಿ ನೀಡಿದ ಈ ಹೇಳಿಕೆಯಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿತ್ತು. ಬಳಿಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ರಾಜು ಕಾಗೆ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಮನವೊಲಿಸಿದ್ದರು. ಮುಂದೆ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಕಟ್ಟುನಿಟ್ಟಿನ ಸೂಚನೆಯನ್ನೂ ನೀಡಿದ್ದರು. ಸುರ್ಜೆವಾಲಾ ಅವರ ಎಚ್ಚರಿಕೆಯ ನಂತರ ಕಾಗೆ ಮೌನ ವಹಿಸಿದ್ದರು.ಜಾತಿ ಗಣತಿಗೆ ಈಗ ಮತ್ತೊಂದು ವಿಘ್ನ: ನೆಟ್‌ವರ್ಕ್‌ ಸಮಸ್ಯೆಯಿಂದ ಜಾತಿಗಣತಿ ವಿಳಂಬ..!