ಬೆಂಗಳೂರು: ಯಾವುದೇ ಸೌಲಭ್ಯವನ್ನೂ ಜೈಲು ಅಧಿಕಾರಿಗಳು ಕಲ್ಪಿಸಿಲ್ಲ. 25 ಅಡಿ ಉದ್ದ ಮತ್ತು 3 ಅಡಿ ಅಗಲವಿರುವ ಪ್ಯಾಸೇಜ್ನಲ್ಲಿ ವಾಕಿಂಗ್ ಮಾಡಲು ಅನುಮತಿಸಿದ್ದಾರೆ. ಆದರೆ, ಈ ಜಾಗದಲ್ಲಿ ಸೂರ್ಯನ ಬೆಳಕು ಸಹ ಬೀಳುವುದಿಲ್ಲ ಎಂದು ದರ್ಶನ್ ತಿಳಿಸಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿಯಾದ ನಟ ದರ್ಶನ್ಗೆ ಕಾರಾಗೃಹಗಳ ಕೈಪಿಡಿ ಅನುಸಾರ ಕನಿಷ್ಠ ಸೌಲಭ್ಯ ಕಲ್ಪಿಸಲು ನಿರ್ದೇಶಿಸಿ ಹೊರಡಿಸಿರುವ ತನ್ನ ಆದೇಶ ಪಾಲಿಸದ್ದಕ್ಕೆ ವಿವರಣೆ ನೀಡಲು ಸೆಪ್ಟೆಂಬರ್ 30 ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗಬೇಕು ಎಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ಬೆಂಗಳೂರಿನ 57ನೇ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ನಿರ್ದೇಶಿಸಿದೆ.WEET Cotton T-Shirt and Pyjama Set for Men,Night Wear for Men,Men's Pyjama Set 122
ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಆರೋಪ ನಿಗದಿಗಾಗಿ ಗುರುವಾರಕ್ಕೆ ವಿಚಾರಣೆಗೆ ನಿಗದಿಪಡಿಸಲಾಗಿತ್ತು. ಹಾಗೆಯೇ, ನ್ಯಾಯಾಲಯದ ಸೂಚನೆ ಹೊರತಾಗಿಯೂ ಹಾಸಿಗೆ, ದಿಂಬು, ಹೊದಿಗೆ ಸೇರಿದಂತೆ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸದ ಜೈಲು ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಶಿಫಾರಸ್ಸು ಮಾಡುವಂತೆ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯೂ ಇದೇ ವೇಳೆ ವಿಚಾರಣೆಗೆ ನಿಗದಿಯಾಗಿತ್ತು.
ವಿಚಾರಣೆ ವೇಳೆ ದರ್ಶನ್ ಮತ್ತು ಆತನ ಪರ ವಕೀಲರು, ತಮಗೆ ಜೈಲಿನಲ್ಲಿ ನ್ಯಾಯಾಲಯದ ಆದೇಶದಂತೆ ಯಾವುದೇ ಸೌಲಭ್ಯ ಕಲ್ಪಿಸುತ್ತಿಲ್ಲ ಎಂದರು. ಇನ್ನೂ ಆರೋಪಿಗಳಾದ ಜಗದೀಶ್ ಮತ್ತು ಅನುಕುಮಾರ್ ಅವರು, ತಮ್ಮನ್ನೂ ಈಗಲೂ ಕ್ವಾರೆಂಟೈನ್ ಸೆಲ್ನಲ್ಲಿ ಇಡಲಾಗಿದೆ ಎಂದು ತಿಳಿಸಿದರು.ಇದನ್ನು ಓದಿ: ಅರುಂಧತಿ ರಾಯ್ ಧೂಮಪಾನದ ಮುಖಪುಟ ವಿವಾದ: ಅರ್ಜಿಯ ನ್ಯೂನತೆಯತ್ತ ಬೆರಳುಮಾಡಿದ ಕೇರಳ ಹೈಕೋರ್ಟ್: ಏನು ಕಾರಣ
ಈ ವಾದ ಪರಿಗಣಿಸಿದ ನ್ಯಾಯಾಧೀಶ ಐ ಪಿ ನಾಯ್ಕ್ ಅವರು, ನ್ಯಾಯಾಲಯ ಆದೇಶ ಪಾಲಿಸದ ಮತ್ತು ಆರೋಪಿಗಳನ್ನು ಕ್ವಾರೆಂಟೈನ್ ಸೆಲ್ನಿಂದ ಸ್ಥಳಾಂತರಿಸದ ಬಗ್ಗೆ ಎರಡು ದಿನಗಳಲ್ಲಿ ಜೈಲು ಅಧಿಕಾರಿಗಳು ನ್ಯಾಯಾಲಯಕ್ಕೆ ತಮ್ಮ ವಿವರಣೆ ನೀಡಬೇಕು. ಹಾಗೆಯೇ, ಸೆಪ್ಟೆಂಬರ್ 30ರಂದು ಜೈಲು ಅಧಿಕ್ಷಕರು ನ್ಯಾಯಾಲಯಕ್ಕೆ ಖುದ್ದು ಹಾಜರಾಗಬೇಕು ಎಂದು ನಿರ್ದೇಶಿಸಿತು. ನಂತರ ಪವಿತ್ರಾ ಗೌಡ, ದರ್ಶನ್ ಸೇರಿದಂತೆ ಇತರೆ ಐವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 2025ರ ಅಕ್ಟೋಬರ್ 9ರವರೆಗೆ ವಿಸ್ತರಿಸಿ ಆದೇಶಿಸಿದ ನ್ಯಾಯಾಲಯವು ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿತು.
ಇದಕ್ಕೂ ಮುನ್ನ ಗುರುವಾರ ಪವಿತ್ರಾ ಗೌಡ, ದರ್ಶನ್ ಸೇರಿದಂತೆ ಜೈಲಿನಲ್ಲಿರುವ ಏಳು ಮಂದಿ ಆರೋಪಿಗಳು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾದರು. ಇನ್ನು ಎಂಟನೇ ಆರೋಪಿ ಹೊರತುಪಡಿಸಿ ಜಾಮೀನಿನ ಮೇಲಿರುವ ಉಳಿದ 9 ಮಂದಿ ಆರೋಪಿಗಳು ನ್ಯಾಯಾಲಯಕ್ಕೆ ಖುದ್ದು ಹಾಜರಾಗಿದ್ದರು. ಎಂಟನೇ ಆರೋಪಿ ರವಿಶಂಕರ್ ಪರ ವಕೀಲರು, ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿತು.