ಧರ್ಮಸ್ಥಳದ ಬೆಳವಣಿಗೆಗಳ ಕುರಿತು ಇಂದು ಧರ್ಮಾಧಿಕಾರಿಗಳಾದ ಡಾ. ವಿರೇಂದ್ರ ಹೆಗ್ಗಡೆಯವರು ಪ್ರತಿಕ್ರಿಯಿಸಿದ್ದಾರೆ. ಎಸ್‌ಐಟಿ ರಚನೆಯಿಂದ ಸತ್ಯ ಹೊರಗೆ ಬರುತ್ತಿದೆ. ಸರ್ಕಾರಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ. ಸತ್ಯದಿಂದ ಇದ್ದೇವೆ ಹಾಗೆಯೇ ಮುಂದುವರೆದಿದ್ದೇವೆ ಎಂದವರು ಧರ್ಮಸ್ಥಳ ಕ್ಷೇತ್ರದಲ್ಲಿ ಮಾತನಾಡಿದರು. ಧರ್ಮಸ್ಥಳದ ಮೇಲಿನ ಅಪವಾದ ಹಾಗೂ ಈವರೆಗಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ತಮ್ಮ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಹಾಗೂ ಈಗಲೂ ಅನೇಕ ಪುಸ್ತಕಗಳನ್ನು ಓದುತ್ತಿದ್ದೇನೆ. ಸಿದ್ದಗಂಗಾ ಶ್ರೀಗಳ ಹಲವು ಪುಸ್ತಕಗಳನ್ನು ನಾನು ಓದಿದ್ದೇನೆ. ಸಿದ್ದಗಂಗಾ ಶ್ರೀಗಳು 108 ವರ್ಷ ಬದುಕಿದವರು ಹೇಳಿದ ಮಾತು ನೆನೆಪಾಗುತ್ತಿದೆ. ಶತ್ರುತ್ವ ಯಾಕೆ ಬಂತು ಅಂತ ನಮಗೆ ಗೊತ್ತಿಲ್ಲ. ಇಷ್ಟು ಹಗೆತನ, ಅಪವಾದ ಯಾಕೆ ಬಂತು ಅಂತ ಗೊತ್ತಿಲ್ಲ. ನಾವು ಸೇವೆ ಮಾಡುತ್ತೇವೆ. ಆದರೆ, ಸೇವೆಯು ಪ್ರಚಾರದ ವಸ್ತುವಲ್ಲ. ಇಷ್ಟು ವರ್ಷ ನಾವು ಆರೋಗ್ಯವಾಗಿರಲು ನಮ್ಮ ನಿಸ್ವಾರ್ಥ ಸೇವೆಯೇ ಕಾರಣ ಎಂದು ಹೇಳಿದ್ದಾರೆ.
ನಮ್ಮ ಎಲ್ಲಾ ಕಾರ್ಯಕ್ರಮಗಳನ್ನು ನೀವು ಎಲ್ಲರೂ ಗಮನಿಸಿದ್ದೀರಿ. ನಾವು ಇಲ್ಲಿ ನಿಮಿತ್ತ ಮಾತ್ರ, ಆದರೆ ಮುಂದುವರೆಸಿಕೊಂಡು ಹೋಗಿದ್ದು ಅದಕ್ಕೆ ಸಂಬಂಧಪಟ್ಟ ಇಲಾಖೆಯವರು ಎಂದು ತಿಳಿಸಿದರು. ಕೆಲವರು ಪ್ರೀತಿಯಲ್ಲಿ ಟೀಕೆ ಮಾಡಿದ್ದರು, ಇವರು ಹಾಗೆ ಟೀಕೆ ಮಾಡಲಿಲ್ಲ. ನಿಮಗೆ ನಾನು ಎಷ್ಟು ಕೃತಜ್ಞತೆ ಸಲ್ಲಿಸಿದರೂ ಕಡಿಮೆಯೇ, ಧರ್ಮಸ್ಥಳ ಬೇರೆ, ಧರ್ಮಸ್ಥಳದ ಊರಿನವರು ಬೇರೆ ಅಲ್ಲ ಎಂದರು. ಎಷ್ಟು ನಿಷ್ಠುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ ಅಂತ ನೀವು ಕೂಡ ನೋಡಿದ್ದೀರಾ..ಯಾಕೆ ಇಷ್ಟು ದ್ವೇಷ ಇದೆ ಅಂತ ನನಗೆ ಗೊತ್ತಾಗಿಲ್ಲ. Courseware on Polity Simplified, 2e by Rangarajan R (Ex. IAS) for UPSC CSE 2025-26 | 60+ Video Conceptual Lectures | 400+ Solved Chapter-wise PYQs (2014-2024) | Online Webinars | Current Affairs, Mnemonics, Practice Tests, Real-life Examples & More Paperback – 1 April 2025
ಈಗ ಮನಸ್ಸು ಸ್ವಲ್ಪ ಹಗುರವಾಗಿದೆ, ಎತ್ತರದ ಬೆಟ್ಟದಿಂದ ನೀರು ಹರಿದಿದೆ. ನಮ್ಮ ಮೇಲೆ ದೃಢವಾದ ನಂಬಿಕೆ ಇಟ್ಟ ಎಲ್ಲರಿಗೂ ನಾನು ಆಭಾರಿ ಎಂದಿದ್ದಾರೆ. ಈಗಾಗಲೇ ಲಕ್ಷಾಂತರ ಜನರು ಇಲ್ಲಿಗೆ ಬಂದು ಹೋಗಿದ್ದಾರೆ. ನಿಮ್ಮ ಧರ್ಮ ಸೋತರೆ, ನಮ್ಮ ಧರ್ಮ ಸೋತ ಹಾಗೆ ಎಂದು ಹೇಳಿದ್ದಾರೆ. ಈ ಶತ್ರುತ್ವ ಯಾಕೆ ಅಂತ ಕೇಳ್ತಾರೆ, ನನಗೂ ಈ ದ್ವೇಷ ಯಾಕೆ ಬೇಕು? ನಾವು ಯಾರನ್ನೂ ಹೀಯಾಳಿಸಿಲ್ಲ, ದ್ವೇಷ ಕೂಡ ಮಾಡಿಲ್ಲ ಎಂದು ನುಡಿದರು. ನಾವು ತಪ್ಪು ಮಾಡದ ಕಾರಣ ನಮಗೆ ಆತ್ಮವಿಶ್ವಾಸ ಇದೆ. ಬೆಂಗಳೂರು ಆಥವಾ ಎಲ್ಲೋ ಕೂತು ಟೀಕೆ ಮಾಡೋರು ನಮಗೆ ಬೇಡ. ನಮಗೆ ನಮ್ಮವರು ಬೇಕು, ನಮ್ಮ ಜೊತೆ ನಿಲ್ಲುವವರು ಬೇಕು. ನಮ್ಮ ಮೇಲೆ ಪ್ರೀತಿ ತೋರಿದ ಎಲ್ಲಾ ಹೆಣ್ಣುಮಕ್ಕಳಿಗೂ ನಾನು ಆಭಾರಿ.
ಎಸ್ಐಟಿ ವರದಿ ಅರ್ಧ ಬಂದ ಕಾರಣ ನಾನು ಇಷ್ಟು ಧೈರ್ಯವಾಗಿ ಮಾತನಾಡಲು ಸಾಧ್ಯವಾಯಿತು. ಸರ್ಕಾರಕ್ಕೆ ನಾನು ಆಭಾರಿ, ಎಸ್ಐಟಿ ರಚನೆ ಮಾಡಿದ ಕಾರಣ ಸತ್ಯ ಹೊರ ಬರುತ್ತಲಿದೆ. ನಮ್ಮ ಹೊಳಪು ಹಾಗೇ ಉಳಿದಿದೆ, ಇದಕ್ಕೆ ನಾನು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದುವರೆದು, ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿ ನೋಡಿಕೊಳ್ಳುತ್ತಾರೆ. ನಾವು ಸತ್ಯದಿಂದ ಇದ್ದೇವೆ, ಹಾಗೆಯೇ ಮುಂದೆಯೂ ಇರಲಿದ್ದೇವೆ. ಮುಂದಿನ ದಿನಗಳು ಉತ್ತಮವಾಗಿರಲಿ ಎಂದು ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಉನ್ನತ ಶಿಕ್ಷಣ ಸಚಿವರ ನಿವಾಸದ ಮುಂದೆ ABVP ಪ್ರತಿಭಟನೆ, ವಿದ್ಯಾರ್ಥಿಗಳ ಬಂಧನ!