ಬುರುಡೆ ಗ್ಯಾಂಗ್ ಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ಟೀಕೆಯ ಬಗ್ಗೆ ಪ್ರತಿಕ್ರಿಯೆ ನೀಡಲು ಗೃಹ ಸಚಿವ ಪರಮೇಶ್ವರ ನಿರಾಕರಿಸಿದ್ದಾರೆ. ಈ ಕುರಿತು ತಮಗೆ ಮಾಹಿತಿ ಇಲ್ಲ, ವಿಷಯ ತಿಳಿದುಕೊಂಡು ಮಾತನಾಡುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ. ಈ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡದೆ ತಮ್ಮ ಕಾರನ್ನು ಏರಿದರು.ಧರ್ಮಸ್ಥಳ ತಲೆಬುರುಡೆ ಪ್ರಕರಣ: ಚಿನ್ನಯ್ಯ-ತಿಮರೋಡಿ ಸಂಭಾಷಣೆಯ 8ನೇ ವಿಡಿಯೋ ವೈರಲ್..!
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ 'ಬುರುಡೆ' ಗ್ಯಾಂಗ್ ರಾಜ್ಯ ಸರ್ಕಾರವನ್ನು ಯಾಮಾರಿಸಿ, ಸುಪ್ರೀಂ ಕೋರ್ಟ್ ಆದೇಶವನ್ನು ಮರೆಮಾಚಿ ಹೇಗೆ ವಂಚನೆ ಮಾಡಿದೆ ಎಂಬುದರ ಕುರಿತು ವರದಿಯಾಗಿದೆ. ಈ ಪ್ರಕರಣ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ.realme Buds Air 7, 12.4mm Dynamic Bass Drivers,52Hrs Playtime, 52dB Hybrid ANC,6 Mic ENC, 45ms Low Latency, 360° Spatial Audio, Hi-Res LHDC, IP55 Dust & Water Resistant, BT v5.4 (Lavender Purple)
ಏನಿದು ಪ್ರಕರಣ?
ಕಳೆದ ಏಪ್ರಿಲ್ 30ರಂದು 'ಬುರುಡೆ ಗ್ಯಾಂಗ್' ಧರ್ಮಸ್ಥಳ ಪ್ರಕರಣದ ಕುರಿತು ಎಸ್‌ಐಟಿ ರಚಿಸುವಂತೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಆದರೆ, ಮೇ 5ರಂದು ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿತ್ತು.
ಅರ್ಜಿ ಸಲ್ಲಿಸಿದವರಿಗೆ ತಪರಾಕಿ ಹಾಕಿದ ಸುಪ್ರೀಂ ಕೋರ್ಟ್, "\ಇದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎನಿಸುವುದಿಲ್ಲ. ಬದಲಿಗೆ ವೈಯಕ್ತಿಕ, ಹಣಕಾಸು ಅಥವಾ ರಾಜಕೀಯ ಆಸಕ್ತಿ ಹೊಂದಿದಂತೆ ಕಾಣಿಸುತ್ತಿದೆ ಎಂದು ಹೇಳಿತ್ತು. ದಶಕಗಳ ಬಳಿಕ ತಡವಾಗಿ ಅರ್ಜಿ ಸಲ್ಲಿಸಿರುವುದಕ್ಕೆ ನ್ಯಾಯಾಲಯ ಆಕ್ರೋಶ ವ್ಯಕ್ತಪಡಿಸಿತ್ತು.ತಿಮರೋಡಿ ಪತ್ನಿ ಬ್ಯಾಂಕ್ ಖಾತೆಯಲ್ಲಿ ಅಸಮಾನ್ಯ ಹಣಕಾಸು ವಹಿವಾಟು...SIT ತನಿಖೆಗೆ ಹೊಸ ದಾರಿ!
ಆದರೆ, ಸುಪ್ರೀಂ ಕೋರ್ಟ್ ಆದೇಶವನ್ನು ಮರೆಮಾಚಿದ 'ಬುರುಡೆ ಗ್ಯಾಂಗ್' ಬೆಳ್ತಂಗಡಿ ನ್ಯಾಯಾಲಯದಲ್ಲಿ ಶವ ಹೂಳಲು ಅನುಮತಿ ಕೋರಿ ಅರ್ಜಿ ಸಲ್ಲಿಸಿತ್ತು. ಚಿನ್ನಯ್ಯ ಎಂಬವರ ಹೇಳಿಕೆಯನ್ನು ಸಹ ದಾಖಲಿಸಿತ್ತು. ಈ ಬೆಳವಣಿಗೆಗಳ ನಂತರ, ದಕ್ಷಿಣ ಕನ್ನಡ ಪೊಲೀಸರು ಚಿನ್ನಯ್ಯನ ಮಂಪರು ಪರೀಕ್ಷೆ ನಡೆಸಲು ಅನುಮತಿ ಕೋರಿ ಅರ್ಜಿ ಹಾಕಿದ್ದರು. ಈ ಪ್ರಕರಣ ತೀವ್ರ ಚರ್ಚೆಗೆ ಒಳಗಾದ ಬೆನ್ನಲ್ಲೇ, ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿ ಆದೇಶ ಹೊರಡಿಸಿತು.