ಉತ್ತರ ಕರ್ನಾಟಕದ ಭಾಗದಲ್ಲಿನ ಬಿಸಿಲು ನಗರಿಗಳು ಮಳೆನಾಡಾಗಿ ಪರಿವರ್ತನೆಯಾಗಿವೆ. ಈ ಪರಿಣಾಮ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಸುಮಾರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ನಗರದಲ್ಲಿ ಮರಗಳು ಧರೆಗುರುಳಿದೆ.
ಬಿಟ್ಟೂ ಬಿಡದೇ ಸುರಿಯುತ್ತಿರುವ ನಿರಂತರ ಮಳೆಗೆ ಜನರು ಸಂಕಷ್ಟಕ್ಕೀಡಾಗಿದ್ದು; ಅದೃಷ್ಟವಶಾತ್ ಪ್ರಾಣಪಾಯ ಉಂಟಾಗಿಲ್ಲ ಎನ್ನಲಾಗಿದೆ. ವಾಹನಗಳಿಗೆ ಹಾನಿಯಾಗಿದ್ದು, ನಿತ್ಯಜೀವನ ಸಾಗಿಸುವಲ್ಲಿ ಸವಾಲು ಎದುರಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ವಿಜಯಪುರ, ಯಾದಗಿರಿ, ಕಲಬುರಗಿ, ರಾಯಚೂರು, ಬಾಗಲಕೋಟೆ, ಬೀದರ್,ಕೊಪ್ಪಳ, ಬಳ್ಳಾರಿ ಸೇರಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ ಎನ್ನಲಾಗಿದೆ.
ಧರೆಗಪ್ಪಳಿಸಿದ ಬೃಹತ್ ಮರ -
ಭಾರಿ ಮಳೆಗೆ, ಅಲ್ಲಿನ ಸ್ಥಳೀಯ ನೌಕರರು ಶಾಲಾ-ಕಾಲೇಜು ವಿದ್ಯಾರ್ಥಿಗಳು ಓಡಾಡಲು ತೊಂದರೆಯಲ್ಲಿ ಸಿಲುಕಿದ್ದು, ಚಳಿಯ ವಾತಾವರಣ ಎದುರಾಗಿದೆ ಎನ್ನಲಾಗಿದೆ. ನಗರ ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಜಿಲ್ಲೆಯ ಹಾಗೂ ಬಹುತೇಕ ತಾಲೂಕಿನಲ್ಲಿ ಬಿರುಸಿನ ಮಳೆ ಸುರಿದಿದೆ. ಈ ಪರಿಸ್ಥಿತಿಯಲ್ಲಿ ಬೃಹತ್ ಬೇವಿನ ಮರವುರುಳಿದೆ. ರಾತ್ರಿಯಿಡೀ ಸುರಿದ ಭಾರಿ ಮಳೆಗೆ ರಸ್ತೆ ಸಂಚಾರಕ್ಕೂ ಅಡ್ಡಿಯಾಯಿತು ಎನ್ನಲಾಗಿದೆ. A Brief History of Modern India | Spectrum | Rajiv Ahir | UPSC | Civil Services Exam | State Administrative Exams - 2024/Edition Paperback – 30 August 2024
ಸಚಿವ ಪ್ರಿಯಾಂಕ್ ಖರ್ಗೆ ಭೇಟಿ -
ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು, ಸ್ಥಳಕ್ಕೆ ಧಾವಿಸಿ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿ ಬಗ್ಗೆ ವಿಚಾರಿಸಿದರು. ಭೀಮಾನದಿಗೆ ಅಪಾರ ನೀರು ಹರಿದ ಪರಿಣಾಮ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದ ಉಜನಿ, ಸೀನಾ ಹಾಗೂ ವೀರ ಜಲಾಶಯದಿಂದ ಉಕ್ಕಿ ಹರಿಯುತ್ತಿರುವ ಭೀಮಾನದಿಯ ಕಾರಣ, ಅಫಜಲಪುರ ಹಾಗೂ ಜೇವರ್ಗಿ ತಾಲೂಕಿನ ಹಲವು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ ಎನ್ನಲಾಗಿದೆ.
ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ, ಸೇತುವೆ ಜಲಾವೃತಗೊಂಡಿರುವುದನ್ನ ವೀಕ್ಷಿಸಿದ್ದಾರೆ. ಜೊತೆಗೆ ಮಳೆಯಿಂದ ಹಾನಿಗೊಳವಾದ ಬೆಳೆಗಳನ್ನು ಕೂಡ ಪರೀಕ್ಷಿಸಿ ರೈತರೊಂದಿಗೆ ಸಂವಾದ ನಡೆಸಿದರು. ಈ ಬಗ್ಗೆ ಅವರು ಸ್ಥಳದಲ್ಲಿದ್ದ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸಮಗ್ರ ಹಾಗೂ ಸಮರ್ಪಕ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಪಂಚಭೂತಗಳಲ್ಲಿ ಲೀನರಾದ ಸಾಹಿತಿ ಎಸ್ ಎಲ್ ಬೈರಪ್ಪ..!!