ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿತು. ಈ ಸದವಕಾಶವನ್ನು ಮನಗಂಡು ರಾಜ್ಯ ಸರ್ಕಾರವು ಜಾತಿ ಸಮೀಕ್ಷೆಯನ್ನು ಮುಂದುವರೆಸಿದೆ. ಈಗಾಗಲೇ ಆರಂಭಿಸಿದ್ದ ಸಮೀಕ್ಷೆಗೆ ಹಲವು ತಾಂತ್ರಿಕ ದೋಷಗಳು ಎದುರಾದವು. ಇದಕ್ಕೆ ಸಂಬಂಧಿಸಿದಂತೆ, ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಂದು ಸಿಎಂ ಸಮ್ಮುಖದಲ್ಲಿ ವಿಡಿಯೋ ಕಾನ್ಫೆರೆನ್ಸ್ ಸಭೆ ನಡೆಸಿದ್ದು, ಮಂದಗತಿಯಲ್ಲಿ ಸಾಗುತ್ತಿರುವ ಸಮೀಕ್ಷೆಯನ್ನು ಚುರುಕುಗೊಳಿಸಲು ಸಚಿವರು, ಜಿಲ್ಲಾಧಿಕಾರಿಗಳು, ಸಿಇಓಗಳೊಟ್ಟಿಗೆ ಸಂವಾದ ನಡೆಸಿದರು. ಈ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು, ಅಗತ್ಯ ಕ್ರಮಗಳ ಬಗ್ಗೆ ಸೂಚನೆ ತಿಳಿಸಿದ್ದಾರೆ ಎನ್ನಲಾಗಿದೆ. Indian Art and Culture (English), 5e by Nitin Singhania (IAS) for UPSC CSE 2025-26 | Colourful Book | Exclusive access to McGraw Hill edge online platform: 10 Supplementary topics, Practice tests & Preparation strategy Paperback – 30 September 2023
ರಾಜ್ಯಾದ್ಯಂತ ಸಮೀಕ್ಷೆ ಆರಂಭಗೊಂಡಿದ್ದು, ತಾಂತ್ರಿಕ ದೋಷಗಳಿಂದ ನಿಧಾನಗೊಂಡಿತ್ತು. ಈಗ ಸಮಸ್ಯೆಗಳ ಬಗೆಹರಿಸಿ, ಸಮೀಕ್ಷೆ ಕಾರ್ಯಗಳನ್ನು ಚುರುಕುಗೊಳಿಸಬೇಕೆಂದು ನಿರ್ದೇಶಿಸಿದ್ದಾರೆ ಸಭೆಯಲ್ಲಿ ಪ್ರಮುಖ ಸಚಿವರು ಸೇರಿದಂತೆ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.
ಸಭೆ ಬಳಿಕ ಮಾತನಾಡಿದ ಅವರು, ಸಮೀಕ್ಷೆಯ ಪ್ರಗತಿ ಕುರಿತು ತಿಳಿಸಿದರು. ನಿರೀಕ್ಷೆಗೆ ಅನುಗುಣವಾಗಿ ಕರ್ನಾಟಕದ ಏಳು ಕೋಟಿ ಜನರ ಒಳಪಡಿಸಿ ಸಮೀಕ್ಷೆ ಮಾಡಲಾಗಿದೆ. ತಾಂತ್ರಿಕ ದೋಷಗಳನ್ನು ಪರಿಹರಿಸುವಂತೆ ಸೂಚಿಸಲಾಗಿದೆ. ಅಕ್ಟೋಬರ್ 7 ರ ಒಳಗೆ ಸರ್ವೆ ಮುಗಿಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಹಿಂದುಳಿದ ವರ್ಗದ ಆಯೋಗಕ್ಕೂ ಸೂಚಿಸಿದ್ದೇವೆ ಎಂದರು. ಈ ಬಗ್ಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಮೂಲಕ ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಂತೆ ಪ್ರಮುಖಾಂಶಗಳನ್ನು ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ಉತ್ತರ ಕರ್ನಾಟಕದಲ್ಲಿ ಅಬ್ಬರದ ಮಳೆ - ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿಗೆ ಭೇಟಿ