ದಾವಣಗೆರೆ: ದಾವಣಗೆರೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ನಡೆದಿದ್ದ ಐ ಲವ್ ಮಹಮ್ಮದ್ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 24 ರಂದು ಕಾರ್ಲ್ ಮಾರ್ಕ್ಸ್ ನಗರದಲ್ಲಿ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕೋಮಿನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ಸಹ ನಡೆದಿತ್ತು ಎಂಬ ಆರೋಪ ಕೇಳಿ ಬಂದಿತ್ತು.ಇದನ್ನೂ ಓದಿ: ಶಿಕ್ಷಕರಿಗೆ ಜಾತಿ ಗಣತಿ ಕುರಿತು ಖಡಕ್ ವಾರ್ನಿಂಗ್ ನೀಡಿದ ಸಿಎಂ ಸಿದ್ದರಾಮಯ್ಯ, ಜಾತಿ ಗಣತಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸೂಚನೆ..!!
ಈ ಸಂಬಂಧ ಮೂರು ಮಂದಿಯ ವಿರುದ್ಧ ಎಫ್‍ಐಆರ್ ಕೂಡ ದಾಖಲಾಗಿತ್ತು. ಎರಡೂ ಕಡೆಯವರಿಂದ ಒಟ್ಟು 8 ಮಂದಿಯನ್ನು ಬಂಧಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ. ಇನ್ನೂಳಿದವರ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.ಇದನ್ನೂ ಓದಿ: ಬೆಂಗಳೂರು ಜಿಬಿಎ ಕಾರ್ಪೊರೇಷನ್‌ಗಳ ಚುನಾವಣೆಗೆ ತಯಾರಿ..!
ಪೊಲೀಸರು ಸಾಮಾಜಿಕ ಜಾಲತಾಣದ ಬಗ್ಗೆ ನಿಗಾ ವಹಿಸಿದ್ದು, ಸಮಾಜದಲ್ಲಿ ಅಶಾಂತಿ ಮೂಡಿಸಲು ಸುಳ್ಳು ಸುದ್ದಿ ಹರಡಿಸದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ಕೊಟ್ಟಿದ್ದಾರೆ. ಅಲ್ಲದೇ ಕಾರ್ಲ್ ಮಾಕ್ರ್ಸ್ ನಗರದಲ್ಲಿ ನಡೆದ ಘಟನೆ ಬಗ್ಗೆ ವದಂತಿಗಳನ್ನು ಹರಡಿದರೆ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಶಾಂತಿ ಕಾಪಾಡುವಂತೆ ಎಸ್‍ಪಿ ಉಮಾ ಪ್ರಶಾಂತ್ ಮನವಿ ಮಾಡಿದ್ದಾರೆ.Sidhidata Women's Kanjivaram Banarasi Soft Silk Saree With Unstitched Blouse Piece (Silk Box Flower)