Skip to main content
ವಿಡಿಯೋ
1/3
politics

ಹೆಚ್ಚು ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು: ಸಮಜಾಯಿಷಿ ನೀಡಿದ್ದಕ್ಕೆ ಉತ್ತರಾಖಂಡ ಚುನಾವಣಾ ಆಯೋಗಕ್ಕೆ ₹2 ಲಕ್ಷ ದಂಡ

By Gireesh Vasishta
ಹೆಚ್ಚು ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು: ಸಮಜಾಯಿಷಿ ನೀಡಿದ್ದಕ್ಕೆ ಉತ್ತರಾಖಂಡ ಚುನಾವಣಾ ಆಯೋಗಕ್ಕೆ ₹2 ಲಕ್ಷ ದಂಡ

ಒಂದಕ್ಕಿಂತ ಹೆಚ್ಚು ಪ್ರದೇಶಗಳ ಮತದಾರರ ಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು ಇದ್ದರೂ, ಅವರ ನಾಮಪತ್ರವನ್ನು ಅಂಗೀಕರಿಸಲು ಅವಕಾಶ ನೀಡುವ ಎಸ್ಇಸಿಯ ಸ್ಪಷ್ಟೀಕರಣಕ್ಕೆ ಹೈಕೋರ್ಟ್ ಈ ಹಿಂದೆ ತಡೆ ನೀಡಿತ್ತು.

ಒಂದಕ್ಕಿಂತ ಹೆಚ್ಚು ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು ಇದೆ ಎಂಬ ಕಾರಣಕ್ಕೆ ಅವರ ನಾಮಪತ್ರ ತಿರಸ್ಕರಿಸುವಂತಿಲ್ಲ ಎಂದು ಸಮಜಾಯಿಷಿ ನೀಡಿದ್ದ ಉತ್ತರಾಖಂಡ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ಶುಕ್ರವಾರ ₹2 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.TRASE Block Heels Sandals For Women, Dusky Stylish & Comfortable Footwear

 

ಅಂತೆಯೇ ಜುಲೈನಲ್ಲಿ ಉತ್ತರಾಖಂಡ್ ಹೈಕೋರ್ಟ್ ನೀಡಿದ್ದ ಸ್ಪಷ್ಟೀಕರಣಕ್ಕೆ ತಡೆ ನೀಡುವುದರ ವಿರುದ್ಧ SEC ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಸಂದೀಪ್ ಮೆಹ್ತಾ ಅವರಿದ್ದ ಪೀಠ, ಚುನಾವಣಾ ಆಯೋಗ ಶಾಸನಬದ್ಧ ನಿಬಂಧನೆಗಳಿಗೆ ವಿರುದ್ಧವಾಗಿ ಹೇಗೆ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಕೇಳಿತು

ಸಿಇಸಿ ನೀಡಿದ ಸ್ಪಷ್ಟೀಕರಣ ಉತ್ತರಾಖಂಡ ಪಂಚಾಯತ್ ರಾಜ್ ಕಾಯಿದೆ- 2016 ಸೆಕ್ಷನ್ 9(6) ಮತ್ತು 9(7)ಕ್ಕೆ ವಿರುದ್ಧವಾಗಿದೆ ಎಂದು ಕಳೆದ ಜುಲೈನಲ್ಲಿ ಹೈಕೋರ್ಟ್ಮುಖ್ಯ ನ್ಯಾಯಮೂರ್ತಿ ಜಿ. ನರೇಂದರ್ ಮತ್ತು ನ್ಯಾಯಮೂರ್ತಿ ಅಲೋಕ್ ಮೆಹ್ರಾ ಅವರಿದ್ದ ವಿಭಾಗೀಯ ಪೀಠ ಹೇಳಿತ್ತು. ಇದನ್ನು ಓದಿ: ಭಾರತ vs ಶ್ರೀಲಂಕಾ ಏಷ್ಯಾ ಕಪ್ 2025 ಸೂಪರ್ ಫೋರ್ಸ್ (ಪಂದ್ಯ 18) – ಸೂಪರ್‌ ಓವರ್‌ ಥ್ರಿಲ್ಲರ್ ಪಂದ್ಯದ ಸಾರಾಂಶ‌ ಹೀಗಿದೆ


ಸೆಕ್ಷನ್ಗಳು ಒಂದಕ್ಕಿಂತ ಹೆಚ್ಚು ಪ್ರಾದೇಶಿಕ ಕ್ಷೇತ್ರಗಳಲ್ಲಿ ಅಥವಾ ಒಂದಕ್ಕಿಂತ ಹೆಚ್ಚು ಮತದಾರರ ಪಟ್ಟಿಯಲ್ಲಿ ಒಬ್ಬ ವ್ಯಕ್ತಿಯು ಹೆಸರನ್ನು ನೋಂದಾಯಿಸುವುದನ್ನು ನಿಷೇಧಿಸುತ್ತದೆ. ವ್ಯಕ್ತಿಗಳ ಹೆಸರು ಒಂದಕ್ಕಿಂತ ಹೆಚ್ಚು ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದು ನಾಮಪತ್ರಗಳನ್ನು ಚುನಾವಣಾ ಆಯೋಗ ಸರಿಯಾಗಿ ಪರಿಶೀಲಿಸುತ್ತಿಲ್ಲ ಎಂದು ಶಕ್ತಿ ಸಿಂಗ್ ಎಂಬುವವರು ಆರೋಪಿಸಿದ್ದರು.

ರೀತಿಯ ಅಕ್ರಮ ನಡೆದಿದ್ದರೂ, ಹಲವಾರು ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿದೆ, ಇದರಿಂದಾಗಿ ಚುನಾವಣಾ ಪ್ರಕ್ರಿಯೆಯ ಸಮಗ್ರತೆಗೆ ಧಕ್ಕೆಯಾಗಿದೆ ಎಂದು ಅವರು ವಾದಿಸಿದ್ದರು. ಸಂಬಂಧ ಹಲವಾರು ದೂರುಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ, ಎಸ್ಇಸಿ ಸ್ಪಷ್ಟೀಕರಣ ನೀಡಿತ್ತು ಎಂದು ಅರ್ಜಿದಾರರು ಹೇಳಿದ್ದರು. ಎಸ್ಇಸಿ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡಿದ ನಂತರ, ಅದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ಇಂದು ವಜಾಗೊಳಿಸಲಾಗಿದೆ.