ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಎದ್ದಿರುವ ಚರ್ಚೆ ಮತ್ತು ಸುಪ್ರೀಂ ಕೋರ್ಟ್‌ನ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುಪ್ರೀಂ ಕೋರ್ಟ್ 'ಬುರುಡೆ ಗ್ಯಾಂಗ್'ನ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ನಂತರವೂ, ಸರ್ಕಾರ ಎಸ್ಐಟಿ ತನಿಖೆಯನ್ನು ಮುಂದುವರಿಸಿದ್ದರ ಬಗ್ಗೆ ಸಿಎಂ ಪ್ರಶ್ನೆ ಮಾಡಿದ್ದಾರೆ. ಇದರಿಂದ ಸರ್ಕಾರ ಮುಜುಗರಕ್ಕೊಳಗಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಮುಜುಗರವಾಗುತ್ತಿದ್ದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಸಚಿವರನ್ನು ಕರೆಸಿ, ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾಗೊಂಡಿದ್ದ ವಿಷಯ ನಿಮಗೆ ತಿಳಿದಿರಲಿಲ್ಲವೇ? ಎಸ್ಐಟಿ ತನಿಖೆ ನಡೆಯುತ್ತಿರುವಾಗಲೂ ಈ ಬಗ್ಗೆ ಮಾಹಿತಿ ಇರಲಿಲ್ಲವಾ? ಎಂದು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.ಇದನ್ನು ಓದಿ: ಮಾದಕ ವ್ಯಸನಮುಕ್ತ ಕೇಂದ್ರಕ್ಕೆ ಸೇರಿಸಿದ ಕೋಪದಲ್ಲಿ 29 ಚಮಚಗಳು ಮತ್ತು 19 ಬ್ರಷ್ ನುಂಗಿದ ಭೂಪ
ಇದಕ್ಕೂ ಮುನ್ನ, ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿ, ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು, ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ಸುಪ್ರೀಂ ಕೋರ್ಟ್ ಆದೇಶ ಗೊತ್ತಿಲ್ಲದೆ ಇಷ್ಟು ದಿನ ತನಿಖೆ ಮಾಡಿದ್ರಾ? ಎಂದು ಪ್ರಶ್ನಿಸಿದ್ದಾರೆ.Handcuffs Backpacks Vegan Leather Casual Backpack Multipurpose Travelling Bags Daypacks For Men And Women
ಧರ್ಮಸ್ಥಳ ಪ್ರಕರಣದಲ್ಲಿ ಮುಂದೆ ಏನು ಮಾಡಬೇಕು? ಈ ವಿಷಯವನ್ನು ವಿರೋಧ ಪಕ್ಷಗಳು ಅಸ್ತ್ರ ಮಾಡಿಕೊಳ್ಳಲಿವೆ. ಎರಡು ತಿಂಗಳಿಂದ ಈ ಪ್ರಕರಣದ ಬಗ್ಗೆ ತನಿಖೆ ಮಾಡುತ್ತಿದ್ದೀರಿ. ಈ ಬಗ್ಗೆ ಮಾಹಿತಿ ಸಂಗ್ರಹಿಸಬೇಕಿತ್ತು ಅಲ್ಲವೇ? ಎಂದು ಪರಮೇಶ್ವರ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಂಡಿದ್ದರ ಬಗ್ಗೆ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಕೆ.ವಿ. ಧನಂಜಯ ಸ್ಪಷ್ಟನೆ ನೀಡಿದ್ದಾರೆ. ದೂರುದಾರರು ತಡವಾಗಿ ಅರ್ಜಿ ಸಲ್ಲಿಸಿದ್ದರಿಂದ ಮತ್ತು ಆರೋಪಗಳ ಅರ್ಹತೆಯನ್ನು ಪರಿಶೀಲಿಸದೆ ಅರ್ಜಿ ವಜಾಗೊಳಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸದ್ಯ ನಡೆಯುತ್ತಿರುವ ಎಸ್ಐಟಿ ತನಿಖೆಯ ಮೇಲೆ ಸುಪ್ರೀಂ ಕೋರ್ಟ್ ಹೇಳಿಕೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.