ಕರೂರು: ತಮಿಳುನಾಡು ದುರಂತ ದೇಶವೆ ಬೆಚ್ಚಿ ಬೀಳುವಹಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಅವರು ನೀಡಿದ ಮಾಹಿತಿಯ ಮುಖ್ಯ ಅಂಶಗಳು ಹೀಗಿದೆ.
- 39 ಮಂದಿ ಸಾವು, ಒಟ್ಟು 95 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- 51 ಗಾಯಳುಗಳು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 44 ಗಾಯಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ. ತಮಿಳುನಾಡು ಆರೋಗ್ಯ ಇಲಾಖೆಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.YOHO Bubbles Men Ortho slippers | Soft comfortable and stylish flip flop slippers for Men in exciting colors |Lightweight | Anti Skid | Daily Use Chappal
ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ:
- ಕರೂರು ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ, ಇಂಥ ಘಟನೆ ದೇಶದ ಬೇರೆ ಕಡೆ ಎಲ್ಲೂ ಆಗಿಲ್ಲ. ಚಿಕ್ಕ ಮಕ್ಕಳೂ ಸತ್ತಿದ್ದಾರೆ.
- ಬೆಂಗಳೂರು ಕಾಲ್ತುಳಿತದಲ್ಲಿ 11 ಜನ ಸತ್ತಿದ್ರು, ಅದೇ ನಮಗೆ ದೊಡ್ಡ ಆಘಾತ ತಂದಿತ್ತು. ಈಗ ಅದಕ್ಕಿಂತ ದೊಡ್ಡ ದುರಂತ ನಡೆದಿದೆ. ಸಾರ್ವಜನಿಕರಿಗೆ ದೊಡ್ಡ ದಿಗ್ಭ್ರಾಂತಿ ತಂದಿದೆ.
- ಡಿಎಂಕೆ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಂಡು ವಿಜಯ್ ಅವರ ತಲೆಗೆ ಪ್ರಕರಣ ಕಟ್ಟುತ್ತಿದೆ. ಅವರು ಸ್ಥಳ ಕೇಳಿದ್ದೆಲ್ಲಿ? ಅಲ್ಲಿನ ಸರ್ಕಾರ ಅನುಮತಿ ಕೊಟ್ಟಿದ್ದೆಲ್ಲಿ?ಇದನ್ನು ಓದಿ: ಏಷ್ಯಾ ಕಪ್ ಫೈನಲ್ ಪಂದ್ಯ: ಭಾರತ-ಪಾಕ್ ಕ್ರಿಕೆಟ್ ಯುದ್ಧ: ಉ*ಗ್ರಸ್ತಾನದ ತಂಡಕ್ಕೆ ಇಂದು ಬ್ಯಾಟ್‌ನಿಂದ ಮತ್ತೊಮ್ಮೆ ತಕ್ಕ ಉತ್ತರ
- ವಿಜಯ್ ಬಂದ್ರು ರ್ಯಾಲಿ ಮಾಡಿದ್ರು ಹೋದ್ರು, ಅವರದ್ದೂ ತಪ್ಪಿದೆ. ವಿಜಯ್ ಕ್ಷಮೆ ಕೇಳಿಲ್ಲ, ಆಸ್ಪತ್ರೆಗೆ ಹೋಗಲಿಲ್ಲ.
-ರಾಜ್ಯ ಸರ್ಕಾರದ ಪಾತ್ರವೇ ದೊಡ್ಡದು, ದುರಂತಕ್ಕೆ ರಾಜ್ಯ ಸರ್ಕಾರ ಕಾರಣ. ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ಕೊಟ್ಟಿದೆ, ಕಾನೂನು ಸುವ್ಹವಸ್ಥೆ ಕಾಪಾಡಿಲ್ಲ. ಸತ್ತವರ ಸಾವಿಗೆ ನೇರ ಕಾರಣ ಡಿಎಂಕೆ ಸರ್ಕಾರ.
- ಈ ದುರಂತ ಪ್ರಕರಣವನ್ನು ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಬೇಕು ಅಂತ ಬಿಜೆಪಿ ಒತ್ತಾಯಿಸುತ್ತದೆ. ಎಂದು ಅವರು ಹೇಳಿದ್ದಾರೆ.