ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ವಿರುದ್ಧ ರೈತರ ಆಕ್ರೋಶ ತೀವ್ರಗೊಳ್ಳುತ್ತಿದೆ. ಜೆಡಿಎಸ್ ಈ ಹೋರಾಟಕ್ಕೆ ಬಹಿರಂಗ ಬೆಂಬಲ ಸೂಚಿಸಿದ ನಂತರ ಪ್ರತಿಭಟನೆ ರಾಜಕೀಯ ತಿರುವು ಪಡೆದುಕೊಂಡಿದೆ. ನಮ್ಮ ಭೂಮಿ ನೀಡುವುದಿಲ್ಲ ಎಂದು ಪಟ್ಟು ಹಿಡಿದಿರುವ ರೈತರು ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸ್ಥಳೀಯ ಶಾಸಕರ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.ಇದನ್ನೂ ಓದಿ: ಸುಧಾ ಮೂರ್ತಿಗೆ ಕರೆ ಮಾಡಿ ವಂಚನೆಗೆ ಯತ್ನಿಸಿದ ಸೈಬರ್ ಕಳ್ಳರು!
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಗೆ ಆರಂಭದಲ್ಲೇ ವಿರೋಧ ಎದುರಾಗಿದೆ. ರಾಮನಗರ ತಾಲ್ಲೂಕಿನ ಬಿಡದಿ ಸಮೀಪ ಸುಮಾರು 9 ಸಾವಿರ ಎಕರೆ ಪ್ರದೇಶದಲ್ಲಿ 20 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಸಜ್ಜಾಗಿದೆ. ಆದರೆ, ಬಿಡದಿ ಭಾಗದ ರೈತರು ಇದಕ್ಕೆ ಭೂಮಿ ನೀಡಲು ನಿರಾಕರಿಸಿದ್ದು, ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.ಇದನ್ನೂ ಓದಿ: ಬಾಕ್ಸರ್ ಮೇರಿ ಕೋಮ್ ನಿವಾಸದಲ್ಲಿ ಕಳ್ಳತನ: ಲಕ್ಷಾಂತರ ರೂಪಾಯಿಯ ವಸ್ತುಗಳನ್ನು ದೋಚಿದ ಮಾಡಿದ ಖದೀಮರು
ಬೈರಮಂಗಲ ಗ್ರಾಮದ ಬಳಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಜೆಡಿಎಸ್ ನಾಯಕರು ದನಿಗೂಡಿಸಿದ್ದಾರೆ. ರೈತರ ಭೂಮಿ ಕಸಿದುಕೊಳ್ಳಲು ಡಿ.ಕೆ. ಶಿವಕುಮಾರ್ ಹುನ್ನಾರ ನಡೆಸಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ. ಇತ್ತೀಚೆಗೆ ರಾಮನಗರ ಡಿಸಿ ಕಚೇರಿ ಬಳಿ ಧರಣಿ ನಡೆಸುತ್ತಿದ್ದ ರೈತರ ವಿರುದ್ಧ ಡಿ.ಕೆ. ಶಿವಕುಮಾರ್ ಸಿಟ್ಟಾಗಿದ್ದರು. ಅವರು ತೊಡೆತಟ್ಟಿ ಮಾತನಾಡಬಹುದು, ಆದರೆ ತೊಡೆ ಮುರಿಯುವ ಶಕ್ತಿ ರೈತರಿಗಿದೆ, ಎಂದು ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.ಇದನ್ನೂ ಓದಿ: ಚೀನಾದ ಮಾಜಿ ಕೃಷಿ ಸಚಿವ ಟ್ಯಾಂಗ್ ರೆಂಜಿಯಾನ್‌ಗೆ ಲಂಚ ಪ್ರಕರಣದಲ್ಲಿ ಮರಣದಂಡನೆ: ಜಿಲಿನ್ ನ್ಯಾಯಾಲಯದ ತೀರ್ಪು..!
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೂಡ ವಿಡಿಯೋ ಕಾನ್ಫರೆನ್ಸ್ ಮೂಲಕ ರೈತರಿಗೆ ಬೆಂಬಲ ಸೂಚಿಸಿದ್ದಾರೆ. ಅಲ್ಲದೆ, ರೈತರಿಗೆ ಯಾವುದೇ ತೊಂದರೆಯಾದಲ್ಲಿ ಖುದ್ದು ಸ್ಥಳಕ್ಕೆ ಬರುವುದಾಗಿ ಭರವಸೆ ನೀಡಿದ್ದಾರೆ. ಸದ್ಯ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆ ರಾಜಕೀಯ ಜಟಾಪಟಿಯ ವೇದಿಕೆಯಾಗಿ ಮಾರ್ಪಟ್ಟಿದೆ. ಯೋಜನೆ ಅನುಷ್ಠಾನಗೊಳಿಸಿಯೇ ಸಿದ್ಧ ಎಂದು ಡಿ.ಕೆ. ಶಿವಕುಮಾರ್ ಹೇಳಿದರೆ, ಯೋಜನೆ ಮಾಡಲು ಬಿಡುವುದಿಲ್ಲ, ಹೇಗೆ ಮಾಡುತ್ತೀರಿ ನೋಡೋಣ ಎಂದು ಜೆಡಿಎಸ್ ಸವಾಲು ಹಾಕಿದೆ.ಇದನ್ನೂ ಓದಿ: ತಮಿಳುನಾಡು: ಕಾಲ್ತುಳಿತದ ಬಗ್ಗೆ ಸ್ವತಂತ್ರ ತನಿಖೆ ಕೋರಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ವಿಜಯ್ ನೇತೃತ್ವದ TVK ಪಕ್ಷ
ಬಿಡದಿ ಟೌನ್‌ಶಿಪ್ ಯೋಜನೆಗಾಗಿ 7,000 ಎಕರೆಗೂ ಹೆಚ್ಚು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು 2025ರ ಮಾರ್ಚ್‌ನಲ್ಲಿ ಪ್ರಾಥಮಿಕ ಅಧಿಸೂಚನೆಯನ್ನು ಸರ್ಕಾರ ಹೊರಡಿಸಿತ್ತು. ರಾಮನಗರ ಜಿಲ್ಲೆಯ ರಾಮನಗರ ಮತ್ತು ಹಾರೋಹಳ್ಳಿ ತಾಲ್ಲೂಕುಗಳ ಒಂಬತ್ತು ಹಳ್ಳಿಗಳಲ್ಲಿ 7,293.44 ಎಕರೆಗಳನ್ನು ಸ್ವಾಧೀನಪಡಿಸಿಕೊಳ್ಳುವುದಾಗಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿತ್ತು. ಈಗ ಈ ಸರ್ಕಾರದ ಯೋಜನೆಯ ವಿರುದ್ಧ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.MANOHARI Women's Trendy Banarasi Woven Saree with Heavy Jacquard Work, Elegant Design, Silk Saree with Maching Lace Border Unstitched Blouse Piece for Weddings & Festive Occasions