Skip to main content
ವಿಡಿಯೋ
1/2
weather

ರಾಜ್ಯದಲ್ಲಿ ಚಂಡಮಾರುತ ಆತಂಕ - ಅಕ್ಟೋಬರ್ 4 ರವರೆಗೆ ಮಳೆ ಸಾಧ್ಯತೆ, ಕರಾವಳಿ ಭಾಗದಲ್ಲಿ ಎಚ್ಚರಿಕೆ.!

By Shravanthi R
ರಾಜ್ಯದಲ್ಲಿ ಚಂಡಮಾರುತ ಆತಂಕ - ಅಕ್ಟೋಬರ್ 4 ರವರೆಗೆ ಮಳೆ ಸಾಧ್ಯತೆ, ಕರಾವಳಿ ಭಾಗದಲ್ಲಿ ಎಚ್ಚರಿಕೆ.!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಅಕ್ಟೋಬರ್ 4ರ ವರೆಗೆ ಮಳೆಯ ಮುನ್ಸೂಚನೆ ನೀಡಿದ್ದು, ಮಂಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಾಳಿ ಮತ್ತು ಗುಡುಗು ಸಹಿತ ಮಳೆಯ ಭೀತಿ ಇದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಮಳೆ ಆಗುತ್ತಿದೆ ಹಾಗೂ ಚಂಡಮಾರುತ ಭೀತಿ ಎದುರಾಗಿದೆ ಎನ್ನಲಾಗಿದೆ. ಇಂದಿನಿಂದ ಗಾಳಿ ಮತ್ತು ಗುಡುಗು ಸಹಿತ ಮಳೆ ಎಚ್ಚರಿಕೆಯನ್ನು ನೀಡಲಾಗಿದ್ದು, ಕರಾವಳಿ ಭಾಗದ ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಾಗಲಿದೆ ಎನ್ನಲಾಗಿದೆ. ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದ ಪ್ರಕಾರ, ಇಂದಿನಿಂದ ಸತತ ಆರು ದಿನಗಳ ಕಾಲ ಮಳೆ ಮುಂದುವರಿಯಲಿದೆ. 

ಇನ್ನೂ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಬಲವಾದ ಗಾಳಿಯೊಂದಿಗೆ ಚಂಡಮಾರುತ ಭೀತಿ ಎದುರಾಗುವ ಸಾಧ್ಯತೆಯಿದ್ದು, ಮಂಗಳೂರು ಮತ್ತು ದಕ್ಷಿಣ ಕನ್ನಡ ಪ್ರದೇಶಗಳ ಸುತ್ತಮುತ್ತಲು ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದ ಗಾಳಿ ಮತ್ತು ಮಳೆ ಮುಂದುವರೆಯಲಿದ್ದು, ಈ ಬಗ್ಗೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. Acer SmartChoice ALG, 13th Gen Intel Core i5-13420H, NVIDIA GeForce RTX 3050-6GB DDR6, 16GB RAM, 512GB SSD, FHD 15.6"/39.62 cm, 144Hz, Windows 11 Home, Steel Gray, 1.99 KG, AL15G-53,Gaming Laptop

ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಮುಂದಿನ 24 ಗಂಟೆಗಳ ಸಮಯದಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ. ಕರಾವಳಿ ಹಾಗೂ ಕರ್ನಾಟಕ ಒಳನಾಡಿನ ಭಾಗದಲ್ಲಿ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 4ರ ತನಕ ವರುಣಾರ್ಭಟ ಹೆಚ್ಚು, ಕಡಿಮೆಯಾಗಲಿದ್ದು, ಚದುರಿದ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಜೊತೆಗೆ ತುಂತುರು ಮಳೆ ಮುಂದುವರೆಯಲಿದೆ ಎಂದು ಸೂಚಿಸಲಾಗಿದೆ. ಇದನ್ನೂ ಓದಿ: ಗಾನಕೋಗಿಲೆ ಸ್ಮರಣಾರ್ಥವಾಗಿ ‘ರಾಷ್ಟ್ರೀಯ ಲತಾ ಮಂಗೇಶ್ಕರ್’ ಪ್ರಶಸ್ತಿ - ಸೋನು ನಿಗಮ್‌ ಭಾಜನ