ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರಿಗೆ ಭಾನುವಾರ ಬಾಂಬ್ ಬೆದರಿಕೆ ಕರೆ ಬಂದಿದೆ. ಕರೂರ್‌ನಲ್ಲಿ ಟಿವಿಕೆ ನಡೆಸಿದ ರ‍್ಯಾಲಿಯ ವೇಳೆ ಉಂಟಾದ ಕಾಲ್ತುಳಿತದಲ್ಲಿ 40 ಜನರು ಸಾವನ್ನಪ್ಪಿದ ಬೆನ್ನಲ್ಲೇ ಈ ಘಟನೆ ಸಂಭವಿಸಿದೆ.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಚೆನ್ನೈನಲ್ಲಿರುವ ವಿಜಯ್ ನಿವಾಸಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಶುಕ್ರವಾರ ನಡೆದ ರ‍್ಯಾಲಿಯಲ್ಲಿ 10 ಮಕ್ಕಳು, 17 ಮಹಿಳೆಯರು ಮತ್ತು 13 ಪುರುಷರು ಸೇರಿ ಒಟ್ಟು 40 ಮಂದಿ ಸಾವನ್ನಪ್ಪಿದ್ದರು. ಈ ಘಟನೆಯ ನಂತರ ವಿಜಯ್ ಅವರಿಗೆ ಬೆದರಿಕೆ ಕರೆ ಬಂದಿದೆ.Kamiliant American Tourister Medium Harrier Small, & Large 360 Degree Spinner Suitcase/Large Hard 4 Wheels Trolley Bag Sp3Pcset Slt Gry, 78 Cm, Grey
ಕಾಲ್ತುಳಿತ ಘಟನೆಗೆ ಸಂಬಂಧಿಸಿ ವಿಜಯ್ ಪ್ರತಿಕ್ರಿಯಿಸಿ, ಈ ಘಟನೆಯಿಂದ ನನ್ನ ಹೃದಯ ಛಿದ್ರಗೊಂಡಿದೆ, ಎಂದು ಹೇಳಿಕೆ ನೀಡಿದ್ದಾರೆ. ಎಕ್ಸ್ ಖಾತೆ ಮೂಲಕ ಪ್ರಾಣ ಕಳೆದುಕೊಂಡವರಿಗೆ ಗೌರವ ಸಲ್ಲಿಸಿದ ವಿಜಯ್, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಆದಾಗ್ಯೂ, ಅವರು ಆಸ್ಪತ್ರೆಗೆ ಭೇಟಿ ನೀಡಿಲ್ಲ ಅಥವಾ ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿಲ್ಲ. ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಇದರ ಜೊತೆಗೆ, ಗಾಯಾಳುಗಳಿಗೆ ತಲಾ 2 ಲಕ್ಷ ರೂ. ನೀಡಲಾಗುವುದು ಎಂದು ವಿಜಯ್ ತಿಳಿಸಿದ್ದಾರೆ.ಬಿಗ್‌ಬಾಸ್ ಕನ್ನಡ 12 ಆರಂಭದ ದಿನವೇ ಅಚ್ಚರಿ...ಮನೆಯಿಂದ ಔಟ್ ಆಗ್ತಾರ ರಕ್ಷಿತಾ ಶೆಟ್ಟಿ?
ಈ ನಡುವೆ, ಕಾಲ್ತುಳಿತ ಪ್ರಕರಣದ ಬಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ಅಥವಾ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸುವಂತೆ ವಿಜಯ್ ಪಕ್ಷ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.