ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಕರೂರು ಕಾಲ್ತುಳಿತ ದುರಂತ ರಾಜಕೀಯ ವಲಯದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿದೆ. ಈ ಘಟನೆಯ ಹಿಂದೆ ಪಿತೂರಿ ಆರೋಪ ಕೇಳಿಬಂದಿದ್ದು, ಪ್ರಮುಖ ನಟ ಮತ್ತು ಟಿವಿಕೆ ಪಕ್ಷದ ಸಂಸ್ಥಾಪಕ ವಿಜಯ್ ಅವರ ಮನೆಗೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಈ ಕುರಿತು ಸಿಬಿಐ ತನಿಖೆಗೆ ಕೋರಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ದಕ್ಷಿಣ ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ದುರಂತ ಸಂಭವಿಸಿದ್ದು, ದಳಪತಿ ವಿಜಯ್ ಅವರ ರಾಜಕೀಯ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 40 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ತಮ್ಮ ನೆಚ್ಚಿನ ನಟನನ್ನು ನೋಡಲು ಬಂದಿದ್ದ ಜನರು ಕರೂರಿನಲ್ಲಿ ಮಸಣ ಸೇರಿದ್ದು, ಇಡೀ ಪ್ರದೇಶದಲ್ಲಿ ದುಃಖ ಮಡುಗಟ್ಟಿದೆ.Kamiliant American Tourister Medium Harrier Small, & Large 360 Degree Spinner Suitcase/Large Hard 4 Wheels Trolley Bag Sp3Pcset Slt Gry, 78 Cm, Grey
ಈ ಘಟನೆಯ ಕುರಿತು ಟಿವಿಕೆ ಮತ್ತು ಆಡಳಿತ ಪಕ್ಷದ ನಡುವೆ ರಾಜಕೀಯ ಕೆಸರೆರಚಾಟ ಮುಂದುವರೆದಿದೆ. ಟಿವಿಕೆ ಪಕ್ಷವು ಸಿಬಿಐ ತನಿಖೆಗೆ ಆಗ್ರಹಿಸಿದೆ. ಕಾಲ್ತುಳಿತ ಸಂಭವಿಸಿದ ಸ್ಥಳದಲ್ಲಿ ಪೊಲೀಸ್ ಭದ್ರತೆ ಕೊರತೆ, ಆಂಬ್ಯುಲೆನ್ಸ್‌ಗಳ ಮೇಲೆ ಕಲ್ಲು ತೂರಾಟ, ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತಹ ಆರೋಪಗಳು ಕೇಳಿಬಂದಿವೆ. ಆದಾಗ್ಯೂ, ಎಡಿಜಿಪಿ ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ.
ಈ ಘಟನೆಯಲ್ಲಿ ಹಲವು ಅನುಮಾನಗಳಿರುವುದರಿಂದ, ಸಿಬಿಐ ಅಥವಾ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವಂತೆ ಕೋರಿ ಟಿವಿಕೆ ನಾಯಕರು ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯು ಇಂದು ಮಧ್ಯಾಹ್ನ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಬಿಗ್‌ಬಾಸ್ ಕನ್ನಡ-12: 19 ಸ್ಪರ್ಧಿಗಳ ಅಧಿಕೃತ ಪಟ್ಟಿ ಬಹಿರಂಗ...ಹೋದವರು ಯಾರು, ಹೋಗದೆ ಉಳಿದವರ್‍ಯಾರು?
ಕರೂರು ಕಾಲ್ತುಳಿತ ದುರಂತ ಸಂಬಂಧ ಟಿವಿಕೆ ಪ್ರಮುಖರ ವಿರುದ್ಧ ಮಾತ್ರ ಪ್ರಕರಣ ದಾಖಲಿಸಲಾಗಿದೆ. ಆದರೆ, ಇಷ್ಟು ದೊಡ್ಡ ದುರಂತ ಸಂಭವಿಸಿದ್ದರೂ, ವಿಜಯ್ ವಿರುದ್ಧ ಕ್ರಮ ಕೈಗೊಳ್ಳಲು ತಮಿಳುನಾಡು ಸರ್ಕಾರ ವಿಳಂಬ ಮಾಡುತ್ತಿರುವುದು ಪ್ರಶ್ನೆಗಳಿಗೆ ಎಡೆಮಾಡಿದೆ.
ದಳಪತಿ ವಿಜಯ್ಗೆ ತಮಿಳುನಾಡಿನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಇದೆ. ಅವರ ರಾಜಕೀಯ ಪಕ್ಷದ ರ‍್ಯಾಲಿಗಳಿಗೆ ಜನಸಾಗರವೇ ಹರಿದುಬರುತ್ತಿದೆ. ಈ ಸಂದರ್ಭದಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ವಿಜಯ್ ಅವರನ್ನು ಬಂಧಿಸಿದರೆ, ಅವರ ಬಗ್ಗೆ ಅನುಕಂಪ ಮೂಡಬಹುದು ಮತ್ತು ಇದು ಡಿಎಂಕೆ ಪಕ್ಷದ ವಿರುದ್ಧ ಜನರ ಅಭಿಪ್ರಾಯಕ್ಕೆ ಕಾರಣವಾಗಬಹುದು ಎಂದು ಡಿಎಂಕೆ ಸರ್ಕಾರ ಆತಂಕಗೊಂಡಿದೆ. ಹೀಗಾಗಿ, ನ್ಯಾಯಾಂಗ ತನಿಖಾ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲು ಡಿಎಂಕೆ ಸರ್ಕಾರ ಚಿಂತನೆ ನಡೆಸಿದೆ.