ಕರ್ನಾಟಕದ ಉತ್ತರ ಭಾಗದ ಮಂದಿ ಪ್ರವಾಭೀತಿಯಿಂದ ನಲುಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಇಂದು ಬೀದರ್ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾರಾಷ್ಟ್ರ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿದ ಪರಿಣಾಮ ಹಾಗೂ ಭಾರಿ ಮಳೆಯಿಂದ ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಜನರು ಸಂಕಷ್ಟಕ್ಕೀಡಾಗಿದ್ದು ಅಲ್ಲಿನ ಪರಿಸ್ಥಿತಿಯು ಹದಗೆಟ್ಟಿದೆ ಎನ್ನಲಾಗಿದೆ.
ಇಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಮ್ಮ ಪಕ್ಷದ ಹಿರಿಯ ನಾಯಕರೊಟ್ಟಿಗೆ ಭೇಟಿ ನೀಡಿದ್ದಾರೆ. ಇತ್ತೀಚಿಗೆ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ ಅವರ ಮನೆಗೆ ತೆರಳಿ ವೈಯಕ್ತಿಕ ನೆರವು ನೀಡಿದರು. ಬಳಿಕ ಮಳೆಯಿಂದ ಬೆಳೆ ಹಾನಿ ಒಳಗಾದ ರೈತರ ಜಮೀನುಗಳನ್ನು ವೀಕ್ಷಿಸಿ, ರೈತರಿಗೆ ಸಹಕಾರ ತೋರಿದ್ದಾರೆ ಎನ್ನಲಾಗಿದೆ. ಜೊತೆಗೆ ಪ್ರವಾಹಹಾನಿಗೊಳಗಾದ ರೈತಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಅವರು ಆಗ್ರಹಿಸಿದರು. Lenovo LOQ, AMD Ryzen 5 7235HS, NVIDIA RTX 3050A 4GB, 12GB RAM, 512GB SSD, 15.6"(39.6cm), 144Hz, Windows 11, Office Home 2024, Grey, 2.4Kg, 83JC00HNIN, 3 Mon. Game Pass Gaming Laptop
ಈ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ಉದ್ದೇಶದಿಂದ ಇಲ್ಲಿ ಬಂದಿಲ್ಲ. ಸಂಕಷ್ಟದಲ್ಲಿರುವ ರೈತರ ಜೊತೆ ನಿಲ್ಲಲು ಹಾಗೂ ಅವರಿಗೆ ಸ್ಪಂದಿಸಲು ಬಂದಿದ್ದೇವೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಎರಡು ದಿನಗಳ ಕಾಲ ಕಲ್ಬುರ್ಗಿ, ಬೀದರ್, ರಾಯಚೂರು ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದೇವೆ. ರೈತರ ಸಂಕಷ್ಟ ಅರಿತು ನೆರೆ ಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ಸರ್ಕಾರಕ್ಕೆ ಮನನ ಮಾಡಿಸಲು ಮುಂದಾಗಿದ್ದೇವೆ ಎಂದರು.
ಸ್ಥಳೀಯರು ಹಾಗೂ ಸಂತ್ರಸ್ತ ಜನರ ಕುಂದುಕೊರತೆಗಳನ್ನು ವಿಚಾರಿಸಿದ ನಂತರ, ರಾಜ್ಯ ಸರ್ಕಾರ ಕೂಡ ಪರಿಹಾರ ವಿತರಿಸಬೇಕು. ಕೇಂದ್ರ ಸರ್ಕಾರದ ಹಣಕ್ಕಾಗಿ ಕಾಯದೇ, ಎನ್ ಡಿ ಆರ್ ಎಫ್ ಪರಿಹಾರ ಎಷ್ಟು ಬರಬೇಕು ಅಷ್ಟು ಬಂದೇ ಬರುತ್ತದೆ. ಅಧಿಕಾರಿಗಳನ್ನು ಬಂದು ಭೇಟಿ ಮಾಡಿ ಹೋಗುವುದರಲ್ಲಿ ಅರ್ಥವಿಲ್ಲ. ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣವೇ ಸ್ಪಂದಿಸಬೇಕು ಸರ್ಕಾರ ಆ ಕೆಲಸ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮೂರನೇ ನೋಟಿಸ್ ಬಂದರೂ ಹಾಜರಾಗದ ಮಹೇಶ್ ಶೆಟ್ಟಿ, ಪೊಲೀಸರು ಶೋಧಕ್ಕೆ ತೀವ್ರ ಸಿದ್ಧತೆ..!