ಹಿಂದೆ ಬಿಜೆಪಿ ಸರ್ಕಾರವನ್ನು '40% ಕಮಿಷನ್ ಸರ್ಕಾರ' ಎಂದು ಟೀಕಿಸಿದ್ದ ಕಾಂಗ್ರೆಸ್‌ನ ಬಂಡವಾಳ ಇದೀಗ ಬಯಲಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಗುತ್ತಿಗೆದಾರರ ಸಂಘದಿಂದ '80% ಕಮಿಷನ್' ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆರ್. ಅಶೋಕ್ ಆಗ್ರಹಿಸಿದ್ದಾರೆ.ಇದನ್ನೂ ಓದಿ: ಕರೂರು ಕಾಲ್ತುಳಿತ ದುರಂತ: ರಾಹುಲ್ ಗಾಂಧಿ ಸ್ಟಾಲಿನ್, ವಿಜಯ್‌ರೊಂದಿಗೆ ಮಾತುಕತೆ..!
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು. ಗುತ್ತಿಗೆದಾರರ ಸಂಘವು ಸರ್ಕಾರಕ್ಕೆ ಬರೆದಿರುವ ಪತ್ರವನ್ನು ಉಲ್ಲೇಖಿಸಿದರು. ಇದು ಕರ್ನಾಟಕ ಸರ್ಕಾರ ಭ್ರಷ್ಟ ಸರ್ಕಾರ ಎನ್ನುವುದಕ್ಕೆ ಸ್ಪಷ್ಟ ಸಾಕ್ಷಿ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದೇ ಗುತ್ತಿಗೆದಾರರು 40% ಕಮಿಷನ್ ಆರೋಪ ಮಾಡಿದ್ದರು. ಆದರೆ ಈಗ ಕಾಂಗ್ರೆಸ್ ಸರ್ಕಾರದಲ್ಲಿ ಅದು 80%ಗೆ ಏರಿಕೆಯಾಗಿದೆ ಎಂದು ಗುತ್ತಿಗೆದಾರರು ಪತ್ರದಲ್ಲಿ ತಿಳಿಸಿದ್ದಾರೆ. ಇದೊಂದು ಅಧಿಕೃತ ಪತ್ರವಾಗಿದ್ದು, ಭ್ರಷ್ಟಾಚಾರಕ್ಕೆ ಇದುವೇ ಸಾಕ್ಷಿ ಎಂದು ಅಶೋಕ್ ಹೇಳಿದರು.ಇದನ್ನೂ ಓದಿ: ಕುರುಬ ಸಮುದಾಯಕ್ಕೆ ಎಸ್‌ಟಿ ಹಕ್ಕು? ರಾಜ್ಯ ಬುಡಕಟ್ಟು ವರದಿ ಸಾರಿದ ಮಹತ್ವಪೂರ್ಣ ಶಿಫಾರಸು!
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅಶೋಕ್, ಸಿದ್ದರಾಮಯ್ಯ ಅವರು ಈ ಹಿಂದೆ ನಮ್ಮ ಬಳಿ ಭ್ರಷ್ಟಾಚಾರದ ಸಾಕ್ಷಿ ಕೇಳುತ್ತಿದ್ದರು. ನಮ್ಮ ಸರ್ಕಾರ ಬಂದರೆ ಕಮಿಷನ್ ಪಡೆಯುವುದಿಲ್ಲ ಎಂದು ಭರವಸೆ ನೀಡಿದ್ದರು. ಆದರೆ ಈಗ ಅವರ ಸರ್ಕಾರವನ್ನೇ ಗುತ್ತಿಗೆದಾರರು '80% ಸರ್ಕಾರ' ಎಂದು ಕರೆಯುತ್ತಿದ್ದಾರೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಯೋಗ್ಯತೆ ಕಳೆದುಕೊಂಡಿದ್ದಾರೆ. ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಅಶೋಕ್ ಒತ್ತಾಯಿಸಿದರು.MANOHARI Banarasi Silk Traditional saree with Unstitch Heavy Blouse Piece