ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಹಾಸನ ಲೋಕಾಯುಕ್ತ ಎಸ್‌ಪಿ ಸ್ನೇಹಾ ನೇತೃತ್ವದ ತಂಡ ಬೆಂಗಳೂರಿನ ಹೊಸಮನೆ, ಚಿಕ್ಕಮಗಳೂರಿನ ಬಸಾಪುರ ಹಾಗೂ ಹಲಸೂರು ತೋಟದ ನಿವಾಸ ಸೇರಿದಂತೆ ಹಲವು ಕಡೆಗಳಲ್ಲಿ ಪರಿಶೀಲನೆ ನಡೆಸಿತು.ಇದನ್ನೂ ಓದಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿಚಾರ: ಹೈಕೋರ್ಟ್ ವಿಚಾರಣೆ ಇಂದು!
ಶಾಸಕ ಟಿ.ಡಿ. ರಾಜೇಗೌಡ, ಅವರ ಪತ್ನಿ ಪುಷ್ಪಾ ಮತ್ತು ವಿದೇಶದಲ್ಲಿರುವ ಪುತ್ರನ ವಿರುದ್ಧ ಲೋಕಾಯುಕ್ತದಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದ್ದು, ಮೂವರ ವಿಚಾರಣೆ ಹಾಗೂ ತನಿಖಾ ಪ್ರಕ್ರಿಯೆ ಮುಂದುವರೆದಿದೆ. ನಾಲ್ಕು ವಾಹನಗಳಲ್ಲಿ ಆಗಮಿಸಿದ್ದ ಲೋಕಾಯುಕ್ತ ಅಧಿಕಾರಿಗಳು ಮನೆ, ಕಚೇರಿ ಮತ್ತು ತೋಟದ ಮನೆಯಲ್ಲಿ ನಿಖರ ಶೋಧ ನಡೆಸಿ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಬಹಿರಂಗವಾಗುವ ನಿರೀಕ್ಷೆಯಿದೆ.ಇದನ್ನೂ ಓದಿ: ಆರೋಪಿ ದರ್ಶನ್ ಜೈಲು ಸೌಕರ್ಯ ಅರ್ಜಿ ವಿಚಾರಣೆ ಇಂದು; ಪಲ್ಲಂಗ ಕೊಡಿ ಅಂದರೆ ಪಲ್ಲಂಗ ಕೊಡಲು ಅವಕಾಶ ಇಲ್ಲ: SPP ವಾದ
ರಾಜೇಗೌಡ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಹಿನ್ನೆಲೆ ಹೀಗಿದೆ: ಬಾಳೆಹೊನ್ನೂರು ಸಮೀಪದ ಹಲಸೂರಿನಲ್ಲಿ ಶಾಸಕ ರಾಜೇಗೌಡ 266 ಎಕರೆ ತೋಟ ಖರೀದಿಸಿದ್ದರು. ಈ ತೋಟ ಉದ್ಯಮಿ, ದಿವಂಗತ ಸಿದ್ಧಾರ್ಥ್ ಅವರಿಗೆ ಸೇರಿತ್ತು. ಈ ವಹಿವಾಟಿಗೆ ಸಂಬಂಧಿಸಿದಂತೆ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿತ್ತು, ನಂತರ ದೂರು ದಾಖಲಾಗಿತ್ತು. ಸ್ಥಳೀಯ ಬಿಜೆಪಿ ಮುಖಂಡ ದಿನೇಶ್ ಈ ದೂರು ನೀಡಿದ್ದರು.SWORNOF Women's kanjivaram banarasi silk saree for Patola festival Wedding silk with rich pallu Design sarees for women with blouse piece