ಚೆನ್ನೈನ ಎಣ್ಣೂರು ಉಷ್ಣ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ದುರಂತದಲ್ಲಿ ಕನಿಷ್ಠ ಒಂಬತ್ತು ಕಾರ್ಮಿಕರು ಸಾವನ್ನಪ್ಪಿದ್ದಾರೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮಂಗಳವಾರ, ಸೆಪ್ಟೆಂಬರ್ 30 ರಂದು ಈ ಘಟನೆ ವರದಿಯಾಗಿದೆ.ಇದನ್ನೂ ಓದಿ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು...ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ..!
ಪ್ರಾಥಮಿಕ ವರದಿಗಳ ಪ್ರಕಾರ, ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಹಲವು ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಸ್ಟಾನ್ಲೀ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಈ ವಿದ್ಯುತ್ ಸ್ಥಾವರವು ಚೆನ್ನೈ ಸಮೀಪದ ತಿರುವಳ್ಳೂರು ಜಿಲ್ಲೆಯ ಮೀಂಜೂರು ಬಳಿಯ ಊರನಂಪೆಡು ಗ್ರಾಮದಲ್ಲಿದೆ. ಇಲ್ಲಿ ನಾಲ್ಕನೇ ಹಂತದ ವಿಸ್ತರಣಾ ಕಾಮಗಾರಿ ಹಲವು ವರ್ಷಗಳಿಂದ ನಡೆಯುತ್ತಿದೆ. ಈ ಯೋಜನೆಯಲ್ಲಿ ಉತ್ತರ ಭಾರತ ಮೂಲದ ಅನೇಕ ಕಾರ್ಮಿಕರು ಕೆಲಸ ಮಾಡುತ್ತಿದ್ದರು.ಇದನ್ನೂ ಓದಿ: ಬಿಜೆಪಿ ಹಿರಿಯ ನಾಯಕ ವಿಜಯ್ ಕುಮಾರ್ ಮಲ್ಹೋತ್ರಾ ನಿಧನ..!!
ಘಟನೆ ನಡೆದ ಸಮಯದಲ್ಲಿ, ಬಾಯ್ಲರ್ ವಿಭಾಗದಲ್ಲಿ ಬೃಹತ್ ಕಮಾನು ನಿರ್ಮಾಣ ಕಾರ್ಯದಲ್ಲಿ 30ಕ್ಕೂ ಹೆಚ್ಚು ಕಾರ್ಮಿಕರು ನಿರತರಾಗಿದ್ದರು. ಅನಿರೀಕ್ಷಿತವಾಗಿ ಸ್ಕಫೋಲ್ಡ್ ಕುಸಿದು ಬಿದ್ದಿದ್ದು, ಅನೇಕ ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ದುರಂತದಲ್ಲಿ ಮೃತಪಟ್ಟ ಒಂಬತ್ತು ಕಾರ್ಮಿಕರ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.MANOHARI Women's Trendy Banarasi Woven Saree with Heavy Jacquard Work, Elegant Design, Silk Saree with Maching Lace Border Unstitched Blouse Piece for Weddings & Festive Occasions