Skip to main content
ವಿಡಿಯೋ
1/2
general

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖೆ ತ್ವರಿತಗೊಳಿಸಲು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೂಚನೆ!

By Vinutha U
 ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖೆ ತ್ವರಿತಗೊಳಿಸಲು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೂಚನೆ!

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಧರ್ಮಸ್ಥಳ ಪ್ರಕರಣದ ಅಂತಿಮ ವರದಿ ಶೀಘ್ರದಲ್ಲಿ ಸಿದ್ಧವಾಗುವಂತೆ ಎಸ್‌ಐಟಿಗೆ ಸೂಚನೆ ನೀಡಿರುವುದು. ತಿಮರೋಡಿ ಬಂಧನ ಮತ್ತು ಕಾನೂನು ಕ್ರಮ ಕುರಿತು ಸ್ಪಷ್ಟತೆ ನೀಡಿದ್ದಾರೆ.

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಮುಗಿಸುವಂತೆ ವಿಶೇಷ ತನಿಖಾ ದಳಕ್ಕೆ (SIT) ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ತನಿಖೆಯ ಅಂತಿಮ ವರದಿಯನ್ನು ಆದಷ್ಟು ಬೇಗ ಸಲ್ಲಿಸುವಂತೆ ಎಸ್‌ಐಟಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಈ ಪ್ರಕರಣದಲ್ಲಿ ಎಸ್‌ಐಟಿ ಅಂತಿಮ ತನಿಖಾ ವರದಿಯನ್ನು ಸರ್ಕಾರವು ಶೀಘ್ರದಲ್ಲೇ ಪಡೆಯಲು ನಿರ್ಧರಿಸಿದೆ ಎಂದು ತಿಳಿಸಿದರು. ಇಡೀ ತನಿಖಾ ಪ್ರಕ್ರಿಯೆಯನ್ನು ವೇಗವಾಗಿ ಪೂರ್ಣಗೊಳಿಸಲು ಎಸ್‌ಐಟಿಗೆ ಸೂಚನೆ ನೀಡಲಾಗಿದೆ. JM LOOKS Slingback Heels for Women Pointed Toe Stiletto High Heels Stretch Slip on Backless Fashion Comfortable Dress Pumps Shoes

ಪ್ರಸ್ತುತ, ಎಫ್‌ಎಸ್‌ಎಲ್ ವರದಿ ಇನ್ನೂ ಬಂದಿಲ್ಲ. ಹೊಸ ಸಾಕ್ಷ್ಯಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಆದರೆ ಎಸ್‌ಐಟಿ ತನ್ನ ಕಾರ್ಯವನ್ನು ನಿರಂತರವಾಗಿ ನಿರ್ವಹಿಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು. ಎಲ್ಲಾ ವಿಷಯಗಳನ್ನು ಅಂತಿಮಗೊಳಿಸಿ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ಸೂಚಿಸಲಾಗಿದೆ.

ಇಡೀ ತನಿಖೆಯನ್ನು ಆದಷ್ಟು ಬೇಗ ಮುಗಿಸಲು ಎಸ್‌ಐಟಿಗೆ ತಿಳಿಸಲಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ಚಿನ್ನಯ್ಯ ಅವರ ಪಿಐಎಲ್ ವಜಾಗೊಂಡಿರುವ ವಿಷಯವನ್ನೂ ಎಸ್‌ಐಟಿ ತನ್ನ ವರದಿಯಲ್ಲಿ ಸೇರಿಸಲಿದೆ. ಹೊಸ ದೂರುಗಳು ಮತ್ತು ಹೇಳಿಕೆಗಳು ಬರುತ್ತಿದ್ದು, ಇವುಗಳಿಗೆ ಅಂತಿಮ ತೆರೆ ಎಳೆಯಲು ಸೂಚಿಸಲಾಗಿದೆ. ಚೆನ್ನೈ ಎಣ್ಣೂರು ವಿದ್ಯುತ್ ಸ್ಥಾವರದಲ್ಲಿ ದುರಂತ: 9 ಕಾರ್ಮಿಕರ ದಾರುಣ ಅಂತ್ಯ!

ಮಹೇಶ್ ಶೆಟ್ಟಿ ತಿಮರೋಡಿ ಬಂಧನವಾಗದಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಕಾನೂನು ತೊಡಕುಗಳ ಬಗ್ಗೆ ನಾನು ಇನ್ನೂ ಚರ್ಚಿಸಿಲ್ಲ ಎಂದು ಹೇಳಿದರು. ಯಾವುದೇ ಕ್ರಮ ಕೈಗೊಂಡರೂ ಅದು ಕಾನೂನು ಚೌಕಟ್ಟಿನೊಳಗೆ ಇರಬೇಕು. ಗಡಿಪಾರು ಆದೇಶವನ್ನು ತಿಮರೋಡಿ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಅದರ ಫಲಿತಾಂಶವನ್ನು ಕಾದು ನೋಡಬೇಕಿದೆ.