ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ಮತ್ತು ಆರೋಪಿ ದರ್ಶನ್‌ಗೆ ಕಾರಾಗೃಹ ಕೈಪಿಡಿ ಅನುಸಾರ ಕನಿಷ್ಠ ಸೌಲಭ್ಯ ಕಲ್ಪಿಸಬೇಕು ಎಂದು ಸೂಚಿಸಿ ನ್ಯಾಯಾಲಯ ಹೊರಡಿಸಿರುವ ಆದೇಶ ಪಾಲಿಸದ ಜೈಲು ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆಯಡಿ ಕ್ರಮಜರುಗಿಸಲು ಶಿಫಾರಸ್ಸು ಮಾಡಬೇಕು ಎಂಬ ಮನವಿ ಕುರಿತ ತೀರ್ಪನ್ನು ಬೆಂಗಳೂರು ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯವು ಅಕ್ಟೋಬರ್ 9ಕ್ಕೆ ಕಾಯ್ದಿರಿಸಿದೆ.
ನ್ಯಾಯಾಲಯ ಆದೇಶದಂತೆ ತನಗೆ ಕನಿಷ್ಠ ಸೌಲಭ್ಯ ಕಲ್ಪಿಸದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದಡಿ ಕ್ರಮ ಜರುಗಿಸಲು ಶಿಫಾರಸ್ಸು ಮಾಡಲು ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದರು. ಅಲ್ಲದೇ, ಜೈಲಿನಲ್ಲಿ ಈವರೆಗೆ ಯಾವೆಲ್ಲಾ ಕೈದಿಗಳಿಗೆ ಕ್ವಾರಂಟೇನ್ ಸೆಲ್‌ಗೆ ಹಾಕಲಾಗಿದೆ? ಅವರನ್ನು ಆ ಸೆಲ್‌ನಲ್ಲಿ ಎಷ್ಟು ದಿನ ಇರಿಸಲಾಗಿದೆ? ಎಂಬ ಬಗ್ಗೆ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಜೈಲಧಿಕಾರಿಗಳಿಗೆ ಸೂಚನೆ ನೀಡುವಂತೆ ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದರು.ಇದನ್ನು ಓದಿ: ಬಿಹಾರ ಚುನಾವಣೆ: ಒಟ್ಟು ಮತದಾರರ ಸಂಖ್ಯೆಯಲ್ಲಿ 6% ಕಡಿತ ಒಟ್ಟು ಡಿಲೀಟ್ ಎಷ್ಟು?: SIR ನಿಂದ ಕ್ರಮ: ಮಾಹಿತಿ ಇಲ್ಲಿದೆ
ಇದಕ್ಕೂ ಮುನ್ನ, ನ್ಯಾಯಾಲಯದ ಹಿಂದಿನ ಆದೇಶದಂತೆ ದರ್ಶನ್‌ಗೆ ನೀಡಲಾದ ಸೌಲಭ್ಯಗಳ ಕುರಿತು ವಿವರಣೆ ನೀಡಲು ಜೈಲು ಅಧೀಕ್ಷಕರಾದ ಸುರೇಶ್ ಅವರು ನ್ಯಾಯಾಧೀಶರ ಮುಂದೆ ಖುದ್ದು ಹಾಜರಾಗಿ ಲಿಖಿತ ವಿವರಣೆ ಸಲ್ಲಿಸಿದರು. ನಂತರ ಜೈಲು ಅಧಿಕಾರಿಗಳ ಪರ ವಾದ ಮಂಡಿಸಿದ್ದ ವಿಶೇಷ ಅಭಿಯೋಜಕ ಪ್ರಸನ್ನಕುಮಾರ್ ಅವರು “ಜೈಲಿನ ಕೈಪಿಡಿಯಲ್ಲಿ ಏನೆಲ್ಲಾ ಸವಲತ್ತು ನೀಡಬಹುದು ಎಲ್ಲವನ್ನು ಕಲ್ಪಿಸಲಾಗಿದೆ. ಟೆಲಿಫೋನ್, ವಿಡಿಯೋ ಕಾನ್ಫರೆನ್ಸ್‌ಗೆ ಅವಕಾಶ, ಕಂಬಳಿ, ಚಾದರ, ಬೆಡ್‌ಶೀಟ್, ದಿಂಬು, ತಟ್ಟೆ, ಚೊಂಬು ಕೊಡಲಾಗಿದೆ. ಆದರೆ, ಅವರು ಪಲ್ಲಂಗ ಕೇಳಿದರೆ ಕೊಡಲು ಜೈಲು ಕೈಪಿಡಿಯಲ್ಲಿ ಅವಕಾಶವಿಲ್ಲ. ಓಡಾಡಲು ಅವಕಾಶ ಕೇಳಿದ್ದರು, ಎಷ್ಟು ಜಾಗವಿದೆಯೋ ಅಷ್ಟರಲ್ಲಿ ಬೆಳಗ್ಗೆ ಮತ್ತು ಸಂಜೆ 1 ಗಂಟೆ ಓಡಾಡಲು ಅವಕಾಶ ನೀಡಿದ್ದೇವೆ. ಆದರೆ, ಇಂತಹದ್ದೆ ಬ್ಯಾರಕ್ ಬೇಕು, ಬಿಸಿಲು ಬರಬೇಕು, ಇವೆಲ್ಲವನ್ನು ಮೂಲಭೂತ ಹಕ್ಕಿನಂತೆ ಕೇಳಲಾಗದು. ಜೈಲಿನಲ್ಲಿರುವವರಿಗೆ ಎಲ್ಲ ಮೂಲಭೂತ ಹಕ್ಕುಗಳನ್ನೂ ಕೊಡಲಾಗುವುದಿಲ್ಲ” ಎಂದು ವಾದಿಸಿದರು.Levi's Men's Slim Fit Mid Rise 511 Mid-Rise Jeans
ಬಳಿಕ ಸುನೀಲ್ ಕುಮಾರ್ ಅವರು “ದರ್ಶನ್ ಚಿನ್ನದ ಮಂಚ ಕೇಳುತ್ತಿಲ್ಲ. ಕೇವಲ ಹಾಸಿಗೆ, ದಿಂಬು ಕೇಳಿದ್ದಾರೆ. ಇಡೀ ದೇಶದಲ್ಲೇ ಪಾಲನೆಯಾಗದ ನಿಯಮವನ್ನು ದರ್ಶನ್ ಮೇಲೆ ಹೇರಿದ್ದಾರೆ. ಇವರಿಗೊಂಥರಾ, ಅವರಿಗೊಂಥರಾ ವ್ಯವಸ್ಥೆ ಇದೆ. ರೇಪಿಸ್ಟ್ ಉಮೇಶ್ ರೆಡ್ಡಿಗೆ ಕಲರ್ ಟಿವಿ ಇರುವ ರೂಮ್ ನೀಡಿ ಸವಲತ್ತುಗಳನ್ನು ಒದಗಿಸಿದ್ದಾರೆ. ಆದರೆ, ದರ್ಶನ್‌ಗೆ ಯಾವ ಸೌಲಭ್ಯವನ್ನೂ ನೀಡಿಲ್ಲ” ಎಂದು ವಾದಿಸಿದರು.
ಈ ವೇಳೆ ನ್ಯಾಯಾಲಯವು “ಜೈಲು ಅಧಿಕಾರಿಗಳಿಗೆ ಆರೋಪಿಗಳ ರಕ್ಷಣೆಯ ಹೊಣೆಯೂ ಇದೆ. ಅದನ್ನು ಅವರು ನೋಡಬೇಕಲ್ಲವೇ? ಕಾನೂನು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲಾಗುವುದಿಲ್ಲ” ಎಂದಿತು. ಈ ಅರ್ಜಿಗಳ ಕುರಿತು ಮಂಗಳವಾರ ದರ್ಶನ್ ಪರ ವಕೀಲರ ವಾದ ಮತ್ತು ಜೈಲು ಅಧಿಕಾರಿಗಳ ಪರ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್ ಪ್ರತಿವಾದ ಆಲಿಸಿದ ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್‌ಮತ್ತು ಸತ್ರ ನ್ಯಾಯಾಲಯವು ಅಕ್ಟೋಬರ್ 9ಕ್ಕೆ ತೀರ್ಪು ಕಾಯ್ದಿರಿಸಿದೆ.