Skip to main content
ವಿಡಿಯೋ
1/2
politics

ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಗೆ ಜಾಗತಿಕ ಮನ್ನಣೆ: 500 ಕೋಟಿ ಉಚಿತ ಮಹಿಳಾ ಪ್ರಯಾಣದೊಂದಿಗೆ ವಿಶ್ವ ದಾಖಲೆ

By Vinutha U
ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಗೆ ಜಾಗತಿಕ ಮನ್ನಣೆ: 500 ಕೋಟಿ ಉಚಿತ ಮಹಿಳಾ ಪ್ರಯಾಣದೊಂದಿಗೆ ವಿಶ್ವ ದಾಖಲೆ

500 ಕೋಟಿಗೂ ಅಧಿಕ ಉಚಿತ ಪ್ರಯಾಣಗಳ ಈ ಅಪೂರ್ವ ಸಾಧನೆಯು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್ 01: ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ಗೆ ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಮತ್ತು ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್ ಪ್ರಶಸ್ತಿಗಳು ಲಭಿಸಿವೆ. 500 ಕೋಟಿಗೂ ಅಧಿಕ ಉಚಿತ ಮಹಿಳಾ ಪ್ರಯಾಣ ಸಾಧನೆಯೊಂದಿಗೆ ಈ ಯೋಜನೆ ಜಾಗತಿಕ ದಾಖಲೆಗೆ ಸೇರ್ಪಡೆಯಾಗಿದೆ. ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಹಿಳಾ ಪ್ರಯಾಣಿಕರು, ನಾಲ್ಕು ಸಾರಿಗೆ ನಿಗಮಗಳ ಅಧಿಕಾರಿಗಳು, ಸಿಬ್ಬಂದಿ ಮತ್ತು ಕಾರ್ಮಿಕ ಮುಖಂಡರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಮಹಿಳಾ ಸಬಲೀಕರಣದ ಮೈಲಿಗಲ್ಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು 2023 ರ ಜೂನ್ 11 ರಂದು ಪ್ರಾರಂಭಿಸಿದ ಶಕ್ತಿ ಯೋಜನೆಯಡಿ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗಿದೆ. ಈ ಯೋಜನೆಯ ಮೂಲಕ 500 ಕೋಟಿಗೂ ಹೆಚ್ಚು ಪ್ರಯಾಣಗಳು ನಡೆದಿವೆ ಎಂದು ಕೆಎಸ್‌ಆರ್‌ಟಿಸಿ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಸಚಿವ ರಾಮಲಿಂಗಾರೆಡ್ಡಿಯಿಂದ ಧನ್ಯವಾದ ಸಂದೇಶ: ಶಕ್ತಿ ಯೋಜನೆಯು ಮಹಿಳೆಯರನ್ನು ಆರ್ಥಿಕ, ಸಾಮಾಜಿಕ ಮತ್ತು ಔದ್ಯೋಗಿಕವಾಗಿ ಸಬಲರನ್ನಾಗಿಸಿದೆ. ಈ ಯೋಜನೆಯ ಯಶಸ್ಸು ದೇಶದ ಇತರ ರಾಜ್ಯಗಳಿಗೂ ಮಾದರಿಯಾಗಿದೆ. ಜಾಗತಿಕ ದಾಖಲೆಗೆ ಸೇರ್ಪಡೆಯಾಗಿರುವುದು ಕರ್ನಾಟಕಕ್ಕೆ ಹೆಮ್ಮೆಯ ಕ್ಷಣವಾಗಿದೆ. ಈ ಸಾಧನೆಗೆ ಕಾರಣರಾದ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ, ಅಧಿಕಾರಿಗಳು, ಕಾರ್ಮಿಕ ಮುಖಂಡರು ಮತ್ತು ಮಹಿಳಾ ಪ್ರಯಾಣಿಕರಿಗೆ ಸಚಿವ ರಾಮಲಿಂಗಾರೆಡ್ಡಿ ಕೃತಜ್ಞತೆ ಸಲ್ಲಿಸಿದ್ದಾರೆ. YOHO Bubbles Men Ortho slippers | Soft comfortable and stylish flip flop slippers for Men in exciting colors |Lightweight | Anti Skid | Daily Use Chappal

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲೂ ದಾಖಲೆ: ಶಕ್ತಿ ಯೋಜನೆ ಈಗಾಗಲೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದೆ. ಇತ್ತೀಚೆಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಶಕ್ತಿ ಯೋಜನೆಗೆ ಲಭಿಸಿದ ಪ್ರಮಾಣಪತ್ರವನ್ನು ತೋರಿಸಿ ಸಂತಸ ಹಂಚಿಕೊಂಡಿದ್ದಾರೆ. 500 ಕೋಟಿಗೂ ಅಧಿಕ ಉಚಿತ ಪ್ರಯಾಣಗಳ ಈ ಅಪೂರ್ವ ಸಾಧನೆಯು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.