ಇಂದಿನಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯ ಚಂಡಮಾರುತ ಭೀತಿಯಿಂದ ಒಡಿಶಾ, ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲೂ ಭಾರೀ ಮಳೆ ಉಂಟಾಗಲಿದೆ ಎನ್ನಲಾಗಿದೆ. ಪರಿಣಾಮ ಮುಂದಿನ ಒಂದು ವಾರದ ಮಟ್ಟಿಗೆ ( ಅ. 9) ವಿವಿಧೆಡೆ ಮಳೆ ಮುಂದುವರೆಯಲಿದೆ ಎಂದು ವರದಿ ತಿಳಿಸಿದೆ.
ಇಂದು ಹಾಗೂ ನಾಳೆ ( ಶನಿವಾರ ಅ. 4) ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆ ಸಾಧ್ಯತೆ ಇದೆ ಎನ್ನಲಾಗಿದೆ. ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಅಕ್ಟೋಬರ್ 9 ರವರೆಗೂ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಗುರುವಾರ ಸಂಜೆ ಮಳೆಯಾಗಿದೆ. Apple iPhone 15 (128 GB) - Blue
ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ, ಹಲವೆಡೆ ವೇಗ ಗಾಳಿಯೊಂದಿಗೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಹಗುರ ಮಳೆಯಾಗಲಿದ್ದು, ದಕ್ಷಿಣ ಒಳಭಾಗದಲ್ಲಿ ಮಧ್ಯಮ ಮಳೆ ಸಾಧ್ಯತೆಯಿದೆ ಎನ್ನಲಾಗಿದೆ. ವಾತಾವರಣದಲ್ಲಿ ವೈಪರೀತ್ಯಗಳು ಉಂಟಾಗಲಿದೆ ಎಂದು ಅಂದಾಜಿಸಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ: 'ವಿಶ್ವಕ್ಕೆ ಶಾಂತಿಯ ಭಂಗ'...ಮೈಲಾರಲಿಂಗ ದೇವರ ಕಾರ್ಣಿಕದ ತಾತ್ಪರ್ಯ ಏನು?