Skip to main content
ವಿಡಿಯೋ
1/2
local

ಬೆಂಗಳೂರಿನಲ್ಲಿ ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ: 10.3 ಲಕ್ಷ ಮೌಲ್ಯದ ಗಾಂಜಾ ಜಪ್ತಿ!

By Shravanthi R
ಬೆಂಗಳೂರಿನಲ್ಲಿ ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ: 10.3 ಲಕ್ಷ ಮೌಲ್ಯದ ಗಾಂಜಾ ಜಪ್ತಿ!

ಅಬಕಾರಿ ಇಲಾಖೆಯ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಫಿರೋಜ್ ಅನ್ಸಾರಿ ಎಂಬ ವ್ಯಕ್ತಿಯನ್ನು ಬಂಧಿಸಿ, ರೂ.10.3 ಲಕ್ಷ ಮೌಲ್ಯದ 11.480 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಸಿಕ್ಕಿಬಿದ್ದಿರುವ, ಬಿಹಾರದಿಂದ ಬೆಂಗಳೂರಿಗೆ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಈತನ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೇ ಮೆಜೆಸ್ಟಿಕ್‌ನಲ್ಲಿ ಭಾರಿ ಮೊತ್ತದ ಗಾಂಜಾ ಹೊತ್ತೊಯ್ಯುತ್ತಿದ್ದ ಪೆಡ್ಲರ್‌ನ ಬಲೆಹಾಕಲಾಗಿದೆ. ಅಬಕಾರಿ ಅಧಿಕಾರಿಗಳು ನಡೆಸಿದ ಪ್ರಮುಖ ಕಾರ್ಯಾಚರಣೆಯಿಂದ, ಭಾರಿ ಪ್ರಮಾಣದ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಸುದ್ದಿ ತಿಳಿದುಬಂದಿದೆ. 

ಮಾಹಿತಿ ದೊರಕಿದ ಬೆನ್ನಲ್ಲೇ ದಾಳಿ ನಡೆಸಿದ ಅಧಿಕಾರಿಗಳು, ಮೆಜೆಸ್ಟಿಕ್ ರೈಲು ನಿಲ್ದಾಣದ ಸಮೀಪ ಬಿಹಾರ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಫಿರೋಜ್ ಅನ್ಸಾರಿ ಎಂದು ಗುರುತಿಸಲಾಗಿದೆ. ಈತನಿಂದ ಅಂದಾಜು ರೂ. 10.3 ಲಕ್ಷ ಮೌಲ್ಯದ ಒಟ್ಟು 11.480 ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. Samsung Galaxy A55 5G (Awesome Iceblue, 12GB RAM, 256GB Storage) | AI | Metal Frame | 50 MP Main Camera (OIS) | Super HDR Video| Nightography | IP67 | Corning Gorilla Glass Victus+ | sAMOLED Display

ಆರೋಪಿಯು ಬಿಹಾರದಿಂದ ಈ ಮಾದಕ ವಸ್ತುವನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಹೊರಹಾಕುತ್ತಿದ್ದು, ಈತನ ಹಿಂದಿರುವ ವ್ಯವಹಾರ ಹಾಗೂ ವ್ಯಾಪಾರಕ್ಕೆ ಸಂಬಂಧಪಟ್ಟವರನ್ನು ಶೋಧಿಸುವಲ್ಲಿ ಪೋಲಿಸರು ನಿರತರಾಗಿದ್ದಾರೆ ಎನ್ನಲಾಗಿದೆ. 

ಈ ಬಗ್ಗೆ ಅಬಕಾರಿ ಉಪಅಧೀಕ್ಷಕ (DySP) ಅಬೂಬಕ್ಕರ್ ಮುಜಾವರ್ ಅವರ ತಂಡವು ಯಶಸ್ವಿ ಕಾರ್ಯಚರಣೆ ನಡೆಸಿದೆ. ಅವರ ನೇತೃತ್ವದಲ್ಲಿ ಕೈಗೊಂಡ ಈ ಕಾರ್ಯಾಚರಣೆಯು ಆರೋಪಿಯನ್ನು ಬಂಧಿಸುವಲ್ಲಿ ಸಹಕರಿಸಿದೆ ಎಂದು ತಿಳಿಸಲಾಗಿದೆ. ಈ ಪ್ರಕಾರವಾಗಿ, ಬಂಧಿತನ ವಿರುದ್ಧ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರೆಸಲಾಗಿದೆ ಎಂದು ವರದಿ ತಿಳಿಸಿದೆ. ಇದನ್ನೂ ಓದಿ: ಸೆಪ್ಟೆಂಬರ್ ತಿಂಗಳ ಬೆಸ್ಕಾಂ ಬಿಲ್‌ಗಳಲ್ಲಿ ತಾತ್ಕಾಲಿಕ ಬದಲಾವಣೆ: ರೀಡಿಂಗ್ ಇಲ್ಲದೆ ಸರಾಸರಿ ಲೆಕ್ಕ!