Skip to main content
ವಿಡಿಯೋ
1/2
general

ಜಾತಿ ಗಣತಿಗೆ ಹೋಗಿದ್ದ ಶಿಕ್ಷಕಿ ಅಪಘಾತದಲ್ಲಿ ಸಾವು..!

By Vinutha U
ಜಾತಿ ಗಣತಿಗೆ ಹೋಗಿದ್ದ ಶಿಕ್ಷಕಿ ಅಪಘಾತದಲ್ಲಿ ಸಾವು..!

ಶಿಕ್ಷಕಿಯ ಸಾವು ತೀವ್ರ ದುಃಖ ತಂದಿದೆ ಎಂದು ಹೇಳಿದ ಅವರು, ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಜಿಲ್ಲಾಧಿಕಾರಿ ಸಂಗಪ್ಪ ಎಂ ಕೂಡ ಶಿಕ್ಷಕಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಬಾಗಲಕೋಟೆ: ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯ ಕಾರ್ಯ ಮುಗಿಸಿ ವಾಪಸ್ ಬರುವಾಗ ಬೈಕ್ನಿಂದ ಬಿದ್ದು ಅಪಘಾತದಲ್ಲಿ ಶಿಕ್ಷಕಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ಬೋಡನಾಯಕನದಿನ್ನಿ ಕ್ರಾಸ್ ಬಳಿ ನಡೆದಿದೆ. ಇದನ್ನು ಓದಿ:ಭಾರತ ನನ್ನ ಮಾತೃಭೂಮಿ: ಪೌರತ್ವಕ್ಕಾಗಿ ಈ ಹೇಳಿಕೆಯಲ್ಲ, ದೇಶಭಕ್ತಿಗಾಗಿ ಎಂದ ಪಾಕ್ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ!

ಬಾಗಲಕೋಟೆ ತಾಲೂಕಿನ ರಾಂಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ದಾನಮ್ಮ ನಂದರಗಿ (45) ಮೃತಪಟ್ಟಿದ್ದಾರೆ. ಸೀತಿಮನಿ ಗ್ರಾಮಕ್ಕೆ ಸಮೀಕ್ಷೆಗೆ ತೆರಳಿದ್ದ ದಾನಮ್ಮ, ತಮ್ಮ ಪುತ್ರನೊಂದಿಗೆ ಬೈಕ್ನಲ್ಲಿ ಬಾಗಲಕೋಟೆಗೆ ವಾಪಸ್ ಬರುವ ವೇಳೆ ಬೋಡನಾಯಕನದಿನ್ನಿ ಕ್ರಾಸ್ ಬಳಿ ಬೈಕ್ ನಿಯಂತ್ರಣ ತಪ್ಪಿ ಉರುಳಿದೆ. ಇದರಿಂದ ತಲೆಗೆ ಗಂಭೀರ ಗಾಯವಾಗಿ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಬಗ್ಗೆ ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ANAYRA 925 Sterling Silver Floral Pendant Set for Women | Hallmark Certified Silver Pendant Set | Silver Jewellery for Women |Great for Gifting

ಸಚಿವರ ಸಂತಾಪ: ಶಿಕ್ಷಕಿ ದಾನಮ್ಮ ನಂದರಗಿ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಸಂತಾಪ ವ್ಯಕ್ತಪಡಿಸಿದ್ದಾರೆ. ಶಿಕ್ಷಕಿಯ ಸಾವು ತೀವ್ರ ದುಃಖ ತಂದಿದೆ ಎಂದು ಹೇಳಿದ ಅವರು, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಜಿಲ್ಲಾಧಿಕಾರಿ ಸಂಗಪ್ಪ ಎಂ ಕೂಡ ಶಿಕ್ಷಕಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.