Skip to main content
ವಿಡಿಯೋ
1/2
general

ಹಿರಿಯ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ನಿಧನ - ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

By Shravanthi R
ಹಿರಿಯ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ನಿಧನ - ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಆರು ದಶಕಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ ಲೋಕವನ್ನು ಶ್ರೀಮಂತಗೊಳಿಸಿದ ಟಿ.ಜೆ.ಎಸ್ ಜಾರ್ಜ್ 97 ನೇ ವಯಸ್ಸಿನಲ್ಲಿ ನಿಧನರಾದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಪದ್ಮಭೂಷಣ ಪುರಸ್ಕೃತರಾದ ಅವರು ತಮ್ಮ ಕೃತಿಗಳು ಮತ್ತು ಬರಹ ಚಿಂತನೆಯ ಮೂಲಕ ಸದಾ ಸ್ಮರಣೀಯರಾಗಿದ್ದಾರೆ ಎನ್ನಲಾಗಿದೆ.

ಭಾರತೀಯ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ, ಅಂಕಣಕಾರ ಹಾಗೂ ಲೇಖಕ ಟಿ.ಜೆ.ಎಸ್ ಜಾರ್ಜ್ ತಮ್ಮ 97 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದ ಅವರು ಆರು ದಶಕಗಳಿಗೂ ಹೆಚ್ಚು ಕಾಲ ತಮ್ಮ ಬರವಣಿಗೆ ಹಾಗೂ ಭಾರತೀಯ ಮತ್ತು ಅಂತರಾಷ್ಟ್ರೀಯ ಪತ್ರಿಕೋದ್ಯಮವನ್ನು ಪ್ರತಿನಿಧಿಸಿದ್ದಾರೆ ಎನ್ನಲಾಗಿದೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ, ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಭಾರತೀಯ ಪತ್ರಿಕೋದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರು ಪತ್ರಿಕೋದ್ಯಮದಲ್ಲಿ ಅಸಾಧಾರಣ ಸಾಧನೆ ತೋರಿರುವರು. ಪತ್ರಿಕೋದ್ಯಮಕ್ಕೆ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ, ಕರ್ನಾಟಕ ಸರ್ಕಾರದಿಂದ 2008 ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ, ಅವರಿಗೆ ಕೇಂದ್ರ ಸರ್ಕಾರದಿಂದ 2011 ರಲ್ಲಿ ಪದ್ಮಭೂಷಣ ಪ್ರಶಸ್ತಿ ಗೌರವ ನೀಡಿತ್ತು. ಕೇರಳ ಮೂಲದವರಾದ ಅವರಿಗೆ ಅಲ್ಲಿನ ಸರ್ಕಾರದಿಂದ ಕೊಡಮಾಡುವ ಸ್ವದೇಶಾಭಿಮಾನಿ ಕೇಸರಿ ಪ್ರಶಸ್ತಿಯನ್ನು 2019 ರಲ್ಲಿ ನೀಡಲಾಗಿತ್ತು. Ceptics Universal Charger Adapter, Travel Adapter International All in One, 2X 2.A USB-A with 15W Total Output, Use in 150 Countries, Type A, C, G, I Output with Universal Input - Black


ಅವರ ವಿರಚಿತ ಮಲಯಾಳಂ ಹಾಗೂ ಇಂಗ್ಲಿಷ್‌ ಕೃತಿಗಳು ಜನಪ್ರಿಯಾವಾಗಿದೆ. ಏಷ್ಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಜರ್ನಲಿಸಂನ ಚೇರ್‌ಮ್ಯಾನ್‌ ಆಗಿಯೂ ಸೇವೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ತಮ್ಮ ವಿಶಿಷ್ಟ ಧ್ವನಿ ಹಾಗೂ ಅಸಾಧಾರಣ ಸಂಪಾದಕೀಯ ದೃಷ್ಟಿಕೋನಕ್ಕಾಗಿ ಹೆಸರುವಾಸಿಯಾಗಿದ್ದರು ಎಂದು ವರದಿ ತಿಳಿಸಿದೆ. ಸರಳ, ಸಜ್ಜನ ವ್ಯಕ್ತಿತ್ವದ ಅವರು ಸದಾ ಕಿರಿಯ ಪರ್ತಕರ್ತರ ಬೆನ್ನು ತಟ್ಟಿ ಪ್ರೋತ್ಸಾಹಿಸಿದ್ದಾರೆ. ಅವರ ಬರವಣಿಗೆ ಹಾಗೂ ಚಿಂತನೆಗಳ ಮೂಲಕ ಅವರು ಜೀವಂತವಾಗಿದ್ದಾರೆಂದು ಅವರ ಹಿತೈಷಿಗಳು ಆಶಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಜಾತಿ ಸಮೀಕ್ಷೆ - ಸಮೀಕ್ಷೆದಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಡಿಸಿಎಂ ಡಿ.ಕೆ ಶಿವಕುಮಾರ್‌.!