ಭಾರತೀಯ ಹವಾಮಾನ ಇಲಾಖೆಯು ಮಹಾರಾಷ್ಟ್ರ ಕರಾವಳಿ ಭಾಗಕ್ಕೆ `ಶಕ್ತಿ’ ಚಂಡಮಾರುತ ಅಪ್ಪಳಿಸಿದ ಮುನ್ಸೂಚನೆ ನೀಡಿದೆ. ಇದರಿಂದಾಗಿ ಅಲ್ಲಿನ ಹಲವು ಜಿಲ್ಲೆಗಳಲ್ಲಿ ಭಾರಿ ಗಾಳಿ ಮತ್ತು ಮಳೆ ಬೀಳುವ ಸಾಧ್ಯತೆಗಳಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಕರ್ನಾಟಕದಲ್ಲಿಯೂ ಮುಂದುವರೆದು ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಸೂಚನೆ ನೋಡಿದೆ.
ಅಕ್ಟೋಬರ್ 4 ರಿಂದ 7ರ ನಡುವೆ ಬೃಹತ್ ಮತ್ತು ಮಧ್ಯಮ ಚಂಡಮಾರುತ ಬೀಸಲಿದ್ದು, ಇದರ ಪರಿಣಾಮವಾಗಿ ಮುಂಬೈ ಸುತ್ತಮುತ್ತಲಿನ ಹಾಗೂ ಮಹಾರಾಷ್ಟ್ರದ ಕರಾವಳಿ ಭಾಗದಲ್ಲಿ ಭಾರಿ ಮಳೆ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. OREI USA to India Converter Plug, World (USA, UK, China) Australia to India Plug Converter - Type D Adapter - 2 in 1 Canada to India Converter Plug - CE - RoHS - Beige - 1 Pack.
ಈ ಕುರಿತಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಿದ್ದು, ಅಲ್ಲಿನ ವಿಪತ್ತು ನಿರ್ವಹಣಾ ತಂಡಗಳು ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳಿಗಾಗಿ ಸಕ್ರಿಯಗೊಂಡಿದ್ದಾರೆ ಎನ್ನಲಾಗಿದೆ. ಕರಾವಳಿ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರ ಸುರಕ್ಷತೆ ಹಾಗೂ ಸಮುದ್ರ ಪ್ರಯಾಣ ನಡೆಸಿದಂತೆ ಮಹಾರಾಷ್ಟ್ರ ಸರ್ಕಾರ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ ಎನ್ನಲಾಗಿದೆ.
ಈ ಮಧ್ಯೆ ಕರ್ನಾಟಕದಲ್ಲಿಯೂ ಭಾರಿ ಮಳೆ ಮುಂದುವರೆಯಲಿದ್ದು, ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳು, ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳು ಸೇರಿದಂತೆ ಹಲವೆಡೆ ಹೆಚ್ಚು ಮಳೆಯಾಗುವ ಸೂಚನೆ ಇದೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಹಿರಿಯ ಪರ್ತಕರ್ತ ಟಿ.ಜೆ.ಎಸ್ ಜಾರ್ಜ್ ನಿಧನ - ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ