Skip to main content
ವಿಡಿಯೋ
1/2
general

ಖ್ಯಾತ ಸಾಹಿತಿ, ಕಥೆಗಾರ ಡಾ. ಮೊಗಳ್ಳಿ ಗಣೇಶ್ ಇನ್ನಿಲ್ಲ…!!

By Pavitra Ganapathi Baradavalli
ಖ್ಯಾತ ಸಾಹಿತಿ, ಕಥೆಗಾರ ಡಾ. ಮೊಗಳ್ಳಿ ಗಣೇಶ್ ಇನ್ನಿಲ್ಲ…!!

ಕನ್ನಡ ಸಾಹಿತ್ಯ ಲೋಕಕ್ಕೆ ದೊಡ್ಡ ಆಘಾತವಾಗಿದೆ, ಖ್ಯಾತ ಕಥೆಗಾರ, ವಿಮರ್ಶಕ, ಚಿಂತಕ ಮತ್ತು ಜಾನಪದ ವಿದ್ವಾಂಸ ಡಾ. ಮೊಗಳ್ಳಿ ಗಣೇಶ್  ಅವರು ಇಂದು ಬೆಳಗ್ಗೆ ಹೊಸಪೇಟೆಯಲ್ಲಿ ನಿಧನರಾದರು.

ಬೆಂಗಳೂರು: ಕನ್ನಡ ಸಾಹಿತ್ಯ ಲೋಕಕ್ಕೆ ದೊಡ್ಡ ಆಘಾತವಾಗಿದೆ, ಖ್ಯಾತ ಕಥೆಗಾರ, ವಿಮರ್ಶಕ, ಚಿಂತಕ ಮತ್ತು ಜಾನಪದ ವಿದ್ವಾಂಸ ಡಾ. ಮೊಗಳ್ಳಿ ಗಣೇಶ್  ಅವರು ಇಂದು ಬೆಳಗ್ಗೆ ಹೊಸಪೇಟೆಯಲ್ಲಿ ನಿಧನರಾದರು. ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಹಂಪಿ ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು.ಇದನ್ನೂ ಓದಿ: ನಮ್ಮ ಮೆಟ್ರೊಗೆ ‘ಬಸವ ಮೆಟ್ರೊ’ ನಾಮಕರಣ: ಸಿಎಂ ಶಿಫಾರಸು..!


1963ರ ಜುಲೈ 1ರಂದು ಚನ್ನಪಟ್ಟಣ ತಾಲೂಕಿನ ಸಂತೆಮೊಗೇನಹಳ್ಳಿಯಲ್ಲಿ ಜನಿಸಿದ ಡಾ. ಮೊಗಳ್ಳಿ ಗಣೇಶ್ ಅವರು, ಬುಗುರಿ, ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ, ದೇವರ ದಾರಿ, ಮೊಗಳ್ಳಿ ಕಥೆಗಳು ಸೇರಿದಂತೆ ಹಲವು ಕಥಾ ಸಂಕಲನಗಳನ್ನು ರಚಿಸಿದ್ದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಸನ್ಮಾನಗಳು ಅವರನ್ನು ಗೌರವಿಸಿವೆ.ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಫಾಕ್ಸ್‌ಕಾನ್ ಮುಖ್ಯಸ್ಥ ರಾಬರ್ಟ್‌ ವೂ ಭೇಟಿ!


ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ವರನಟ ಡಾ. ರಾಜ್‌ಕುಮಾರ್ ಹೆಸರಿನ ಅಧ್ಯಯನ ಪೀಠಕ್ಕೆ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಶೋಕ ವ್ಯಕ್ತಪಡಿಸಿ, ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಅಮೂಲ್ಯ. ಎಂದು ಸಂತಾಪ ಸೂಚಿಸಿದರು. ಹಿಂದೂಳಿದವರ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಅವರು ಕನ್ನಡ ಸಾಹಿತ್ಯ ಒಬ್ಬ ಅತ್ಯುತ್ತಮ ಬರಹಗಾರನನ್ನು ಕಳೆದುಕೊಂಡಿದೆ ಎಂದು ಸಂತಾಪ ಸೂಚಿಸಿದರು.
SIRIL Women's Kanjivaram Silk Saree Pure Silk Saree with Unstitched Blouse Piece