ರಾಜಕೀಯವಾಗಿ ದೇಶದ ಗಮನ ಸೆಳೆದಿರುವ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಸಂಜೆ 4 ಗಂಟೆಗೆ ಪ್ರಕಟವಾಗಲಿದೆ. ಭಾರತೀಯ ಚುನಾವಣಾ ಆಯೋಗವು ನಡೆಸುವ ಪತ್ರಿಕಾಗೋಷ್ಠಿಯಲ್ಲಿ 243 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಘೋಷಿಸಲಿದೆ. ಈ ಪ್ರಕಟಣೆಯು ಬಿಹಾರದ ರಾಜಕೀಯದಲ್ಲಿ ಆವರಿಸಿದ್ದ ಕುತೂಹಲಕ್ಕೆ ತೆರೆ ಎಳೆಯಲಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಆಯೋಗದ ತಂಡ ಇತ್ತೀಚೆಗೆ ಬಿಹಾರಕ್ಕೆ ಎರಡು ದಿನಗಳ ಭೇಟಿ ನೀಡಿತ್ತು. ಅಲ್ಲಿ ರಾಜ್ಯದ ಹಿರಿಯ ಅಧಿಕಾರಿಗಳು ಹಾಗೂ ಬಿಜೆಪಿ, ಜೆಡಿಯು, ಆರ್‌ಜೆಡಿ, ಮತ್ತು ಕಾಂಗ್ರೆಸ್ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿತ್ತು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಕುರಿತು ಸಿದ್ಧತೆಗಳನ್ನು ಪರಿಶೀಲಿಸಿತ್ತು. ಈ ಸಿದ್ಧತೆಗಳು ಪೂರ್ಣಗೊಂಡ ನಂತರ ಇದೀಗ ದಿನಾಂಕಗಳನ್ನು ಘೋಷಿಸಲಾಗುತ್ತಿದೆ. SGF11 Women's Kanjivaram Pure Soft Silk Saree With Unstitched Blouse Piece
ಈ ಬಾರಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತು ಆರ್‌ಜೆಡಿ ನೇತೃತ್ವದ 'ಮಹಾ ಘಟಬಂಧನ್' ನಡುವೆ ನೇರ ಹಣಾಹಣಿ ನಿರೀಕ್ಷಿಸಲಾಗಿದೆ. ಇದರ ಜೊತೆಗೆ ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಕುಮಾರ್ ಸಹ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ. ಪ್ರಸ್ತುತ ವಿಧಾನಸಭೆಯ ಅವಧಿ ನವೆಂಬರ್ 22 ರಂದು ಕೊನೆಗೊಳ್ಳಲಿದ್ದು, ಅಷ್ಟರೊಳಗೆ ಬಿಹಾರದಲ್ಲಿ ಹೊಸ ಸರ್ಕಾರ ರಚನೆಯಾಗಬೇಕು. ಸದ್ಯ 243 ಸದಸ್ಯ ಬಲದ ವಿಧಾನಸಭೆಯಲ್ಲಿ ಎನ್‌ಡಿಎ 131 ಸ್ಥಾನಗಳನ್ನು ಹೊಂದಿದ್ದರೆ, ಮಹಾ ಘಟಬಂಧನ್ 111 ಸ್ಥಾನಗಳನ್ನು ಹೊಂದಿದೆ. ಕರ್ನಾಟಕ ಜಾತಿ ಗಣತಿ: ನಾಳೆಗೆ ಮುಗಿಯಲ್ಲ, ಅವಧಿ ವಿಸ್ತರಣೆ ಸಾಧ್ಯತೆಯಿದೆ ಎಂದ ಸಚಿವ ಪರಮೇಶ್ವರ..!
ಚುನಾವಣಾ ಆಯೋಗವು ಈ ಬಾರಿ ಬಿಹಾರದಲ್ಲಿ 17 ಹೊಸ ಸುಧಾರಣೆಗಳನ್ನು ಜಾರಿಗೆ ತಂದಿದೆ. ಎಲ್ಲಾ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್, ಇವಿಎಂಗಳಲ್ಲಿ ಅಭ್ಯರ್ಥಿಗಳ ಬಣ್ಣದ ಭಾವಚಿತ್ರ, ಮತ್ತು ಮತಗಟ್ಟೆಯ ಹೊರಗೆ ಮೊಬೈಲ್ ಫೋನ್ ಇಡಲು ಪ್ರತ್ಯೇಕ ಕೌಂಟರ್‌ಗಳಂತಹ ವಿಶೇಷ ಕ್ರಮಗಳನ್ನು ಕೈಗೊಂಡಿದೆ. ಬಿಹಾರದ ಸುಮಾರು 7.42 ಕೋಟಿ ಮತದಾರರು ಈ ಚುನಾವಣೆಯಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ.