Skip to main content
ವಿಡಿಯೋ
1/2
general

ನೇಪಾಳದಲ್ಲಿ ಪ್ರವಾಹ-ಭೂಕುಸಿತದಿಂದ 52 ಮಂದಿ ದುರ್ಮರಣ...ವಿಮಾನ ಸೇವೆಗಳು ತಾತ್ಕಾಲಿಕ ಸ್ಥಗಿತ!

By Vinutha U
ನೇಪಾಳದಲ್ಲಿ ಪ್ರವಾಹ-ಭೂಕುಸಿತದಿಂದ 52 ಮಂದಿ ದುರ್ಮರಣ...ವಿಮಾನ ಸೇವೆಗಳು ತಾತ್ಕಾಲಿಕ ಸ್ಥಗಿತ!

ನೇಪಾಳದ ಇಲಾಮ್, ರೌತಹತ್, ಪಂಚತಾರ್ ಮತ್ತು ರಸುವಾ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಪ್ರವಾಹ ಹಾಗೂ ಭೂಕುಸಿತಗಳು ಭೀಕರ ನಾಶವನ್ನೂ ಜೀವ ನಷ್ಟವನ್ನೂಂಟುಮಾಡಿವೆ.

ನೇಪಾಳದಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹ ಮತ್ತು ಭೂಕುಸಿತಗಳು ವ್ಯಾಪಕ ಅನಾಹುತಗಳನ್ನು ಸೃಷ್ಟಿಸಿವೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯು ಕನಿಷ್ಠ 52 ಜನರ ಜೀವ ಬಲಿ ಪಡೆದಿದ್ದು, ಹಲವರು ಗಾಯಗೊಂಡಿದ್ದಾರೆ ಮತ್ತು ನಾಪತ್ತೆಯಾಗಿದ್ದಾರೆ.

ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಪ್ರಾಧಿಕಾರ (NDRRMA) ನೀಡಿರುವ ಮಾಹಿತಿಯ ಪ್ರಕಾರ, ಶನಿವಾರ ರಾತ್ರಿ ಕೋಶಿ ಪ್ರಾಂತ್ಯದ ಇಲಾಮ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ 37 ಜನರು ಮೃತಪಟ್ಟಿದ್ದಾರೆ. ಭಾನುವಾರ ರೌತಹತ್ ಜಿಲ್ಲೆಯಲ್ಲಿ ಸಿಡಿಲು ಬಡಿದು ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನು ಓದಿ:ಇಂದು ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ...ರಾಜಕೀಯ ಕುತೂಹಲ ಹೆಚ್ಚುತ್ತಿದೆ!

ಪಂಚತಾರ್ ಜಿಲ್ಲೆಯಲ್ಲಿ ಭೂಕುಸಿತದಲ್ಲಿ ಒಬ್ಬರು ಸಮಾಧಿಯಾಗಿದ್ದಾರೆ. ಇದಲ್ಲದೆ, ರಸುವಾ ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಿಲುಕಿ ನಾಲ್ವರು ನಾಪತ್ತೆಯಾಗಿದ್ದಾರೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಧಿಕಾರ ತಿಳಿಸಿದೆ. SGF11 Women's Kanjivaram Pure Soft Silk Saree With Unstitched Blouse Piece

ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಮೂರು ದಿನಗಳ ಕಾಲ ಭೂಕುಸಿತದ ಸಾಧ್ಯತೆ ಇರುವುದರಿಂದ ಕಾಠ್ಮಂಡು ಪ್ರದೇಶಕ್ಕೆ ವಾಹನಗಳ ಪ್ರವೇಶ ಮತ್ತು ನಿರ್ಗಮನವನ್ನು ನಿರ್ಬಂಧಿಸಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ದೇಶೀಯ ವಿಮಾನಯಾನ ಸೇವೆಗಳನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ದುರಂತಕ್ಕೆ ಭಾರತ ನೆರವು ನೀಡಲು ಸಿದ್ಧವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೇಪಾಳದ ನೆರೆ ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸುವುದಾಗಿ ಘೋಷಿಸಿದ್ದಾರೆ.