ಸುಪ್ರೀಂ ಕೋರ್ಟ್‌ನಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆದ ಘಟನೆ ವರದಿಯಾಗಿದೆ. ಈ ಸಂಬಂಧ ಆರೋಪಿ ವಕೀಲನನ್ನು ಪೊಲೀಸರು ಬಂಧಿಸಿದ್ದಾರೆ.YUISI Sun Hat for Men Women, Breathable Summer Hat for Travel, Hiking, Gardening, Sun Hats for Men & Round Sun Cap for Hiking, Hats for Women Indoor Outdoor Activities
ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ವಕೀಲ ರಾಜಶೇಖರ್ ಕಿಶೋರ್ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಕಡೆಗೆ ಶೂ ಎಸೆಯಲು ಪ್ರಯತ್ನಿಸಿದರು. ತಕ್ಷಣವೇ ಕಾರ್ಯಪ್ರವೃತ್ತರಾದ ಸುಪ್ರೀಂ ಕೋರ್ಟ್ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಸದ್ಯ ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ವಕೀಲರನ್ನು ವಿಚಾರಣೆ ನಡೆಸುತ್ತಿದ್ದಾರೆ.ಇದನ್ನು ಓದಿ: ಕಾಂತಾರಚಾಪ್ಟರ್1 ವೀಕ್ಷಿಸಿದೆ, ಉಸಿರು ಬಿಗಿ ಹಿಡಿದು ನೋಡುವ ಚಿತ್ರ, ಶ್ರದ್ಧೆ ಮತ್ತು ಜಾನಪದದ ಒಂದು ಮಿಶ್ರಣ: ಅಣ್ಣಾಮಲೈ ಟ್ವೀಟ್
ಸನಾತನ ಧರ್ಮಕ್ಕೆ ಅವಮಾನ ಸಹಿಸಲ್ಲ ಎಂದು ಘಟನೆ ವೇಳೆ ವಕೀಲ ರಾಜಶೇಖರ್ ಕಿಶೋರ್ ಜೋರಾಗಿ ಘೋಷಣೆ ಕೂಗಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ಇಂತಹ ಘಟನೆಗಳಿಂದ ನಾವು ವಿಚಲಿತರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ..